ರಾಯಚೂರಿನ ಜನ ತೆಲಂಗಾಣದೊಂದಿಗೆ ವಿಲೀನಕ್ಕೆ ಒತ್ತಾಯಿಸುತ್ತಿದ್ದಾರೆ: ತೆಲಂಗಾಣ ಸಿಎಂ ವಿವಾದಾತ್ಮಕ ಹೇಳಿಕೆ

ವಿಕಾರಾಬಾದ್ (ತೆಲಂಗಾಣ): ಕರ್ನಾಟಕದ ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿಕೊಳ್ಳಬೇಕು ಎಂಬ ಅರ್ಥದಲ್ಲಿ ಹೇಳಿಕೆ ನೀಡಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ವಿವಾದವನ್ನು ಕೆದಕಿದ್ದಾರೆ ಎಂದು ವರದಿಯಾಗಿದೆ.
ರಾಯಚೂರು ಜಿಲ್ಲೆಯ ಜನ ತಮ್ಮನ್ನು ತೆಲಂಗಾಣಕ್ಕೆ ಸೇರಿಸಿಕೊಳ್ಳಿ ಎಂದು ನನ್ನನ್ನು ಒತ್ತಾಯಿಸುತ್ತಿದ್ದಾರೆ’ ಎಂದು ಕೆಸಿಆರ್ ವಿಕಾರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬುಧವಾರ ಹೇಳಿದ್ದಾರೆ.

2016 ರಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ವಿಕಾರಾಬಾದ್ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.
ತೆಲಂಗಾಣದಲ್ಲಿ ನಡೆಯುತ್ತಿರುವ ಕಲ್ಯಾಣ ಕಾರ್ಯಕ್ರಮಗಳನ್ನು ನೋಡಿ ರಾಯಚೂರು ಗಡಿ ಜನ ತೆಲಂಗಾಣ ರಾಜ್ಯ ಸೇರಬೇಕು ಎನ್ನುತ್ತಿದ್ದಾರೆ’ ಎಂದು ಕೆ. ಚಂದ್ರಶೇಖರ ರಾವ್‌ ಹೇಳಿದ್ದಾರೆ.

ತೆಲಂಗಾಣದ ಮುಖ್ಯಮಂತ್ರಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಶಾಸಕ ಪ್ರಿಯಾಂಕ್ ಖರ್ಗೆ, ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಈ ಬಗ್ಗೆ ಪ್ರತಿಕ್ರಿಯಿಸಿದರುವುದು ದುರದೃಷ್ಟಕರ ಎಂದು ಟ್ವೀಟ್ ಮಾಡಿದ್ದಾರೆ.
ರಾಯಚೂರು ಜಿಲ್ಲೆ ಬಹುಪಾಲು ವಿಕಾರಾಬಾದ್ ಜಿಲ್ಲೆಯೊಂದಿಗೆ ಗಡಿ ಹಂಚಿಕೊಂಡಿದೆ.

ಪ್ರಮುಖ ಸುದ್ದಿ :-   ಎಸ್‌ಐಆರ್‌ : ಕರ್ನಾಟಕದ ಅಂತಿಮ ಮತದಾರರ ಪಟ್ಟಿ ಪ್ರಕಟ ; 99 ಲಕ್ಷಕ್ಕೂ ಹೆಚ್ಚು ಹೆಸರು ಡಿಲೀಟ್

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement