ದಾಳಿ ಮಾಡಿದ್ದ ಚಿರತೆಯನ್ನೇ ಕೊಂದು ಹಾಕಿದ ಗ್ರಾಮಸ್ಥರು

ರಾಯಚೂರು :ಜಿಲ್ಲೆಯ ದೇವದುರ್ಗ ತಾಲೂಕಿನ ಕರಡಿಗುಡ್ಡ ಪಕ್ಕದಲ್ಲಿ ಕಂಬದಾಳ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಮೂವರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಸುತ್ತಲಿನ ಗ್ರಾಮಸ್ಥರು ಕೊಂದು ಹಾಕಿದ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಭಾನುವಾರ ಬೆಳಿಗ್ಗೆ ಊರ ಹೊರಗಿನ ಗುಡ್ಡದಲ್ಲಿ ಚಿರತೆ ದಾಳಿ ಮಾಡಿತ್ತು. ಇದರಲ್ಲಿ ರಮೇಶ, ಮಲ್ಲಣ್ಣ, ರಂಗನಾಥ ಎಂಬವರಿಗೆ ಗಾಯಗಳಾಗಿದ್ದು, ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಗ್ಗೆ ಗ್ರಾಮಸ್ಥರು ತಿಳಿಸಿದ ನಂತರ ಘಟನೆ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿರತೆಗೆ ಅರವಳಿಕೆ ನೀಡಿ ಅಥವಾ ಬಲೆ ಹಾಕಿ ಹಿಡಿದು ಬೇರೆ ಕಡೆ ಸಾಗಿಸಬೇಕು’ ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದರು. ಮಧ್ಯಾಹ್ನದ ನಂತರ ಚಿರತೆ ಮತ್ತೊಬ್ಬ ಗ್ರಾಮಸ್ಥನ ಮೇಲೆ ಚಿರತೆ ದಾಳಿ ಮಾಡಿದೆ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ದೊಣ್ಣೆ ಹಿಡಿದುಕೊಂಡು ಗುಡ್ಡದ ಮೇಲೆ ಚಿರತೆಗಾಗಿ ಹುಡುಕಾಟ ನಡೆಸಿದ್ದಾರೆ. ಸಂಜೆ ಬಂಡೆಗಲ್ಲು ಮಧ್ಯೆ ಚಿರತೆ ಅವಿತು ಕುಳಿತಿರುವುದು ಕಾಣಿಸಿದೆ. ನಂತರ ದೊಣ್ಣೆಗಳಿಂದ ಹೊಡೆದು ಕೊಂದು ಹಾಕಿದ್ದಾರೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು | ತನ್ನ ಒಪ್ಪಿಗೆಯಿಲ್ಲದೆ ಇನ್‌ಸ್ಟಾಗ್ರಾಮ್ ವೀಡಿಯೊ ಪೋಸ್ಟ್ ; ಮಹಿಳೆಯ ದೂರಿನ ನಂತರ ವ್ಯಕ್ತಿಯ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement