ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ಆರ್ ಟಿ ಪಿಸಿ‌ಆರ್ ಕೋವಿಡ್‌ ಟೆಸ್ಟ್ ಕಡ್ಡಾಯ

ಬೆಂಗಳೂರು: ಲಾಕ್ ಡೌನ್ ಮಾರ್ಗಸೂಚಿಗಳನ್ನು ಸಡಿಲಿಕೆ ಮಾಡಿ ಬಸ್ ಸೇವೆ ಒದಗಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿರುವ ಬೆನ್ನಲ್ಲೇ ಕರ್ತವ್ಯಕ್ಕೆ ನಿಯೋಜಿಸಲು ಚಾಲನಾ ಸಿಬ್ಬಂದಿಗೆ ಆರ್ ಟಿ ಪಿಸಿ‌ಆರ್ ಪರೀಕ್ಷೆ ಕೆಎಸ್‌ಆರ್ ಟಿಸಿ ನಿರ್ಧರಿಸಿದೆ‌.
ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿ ಕಡ್ಡಾಯವಾಗಿ ಆರ್ ಟಿ ಪಿಸಿ‌ಆರ್ ಪರೀಕ್ಷೆ ಮಾಡಿಸಿ ಫಲಿತಾಂಶದ ವರದಿಯನ್ನು ಆಯಾ ಕಚೇರಿ ಅಥವಾ ಘಟಕಗಳಿಗೆ ಸಲ್ಲಿಸಬೇಕು ಎಂದು ಕೆಎಸ್‌ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಸೂಚಿಸಿದ್ದಾರೆ.
ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಅವರು ಕರ್ತವ್ಯಕ್ಕೆ ಹಾಜರಾಗುವ ಚಾಲನಾ ಸಿಬ್ಬಂದಿಯು ಮೂರು ದಿನಗಳೊಳಗೆ ಆರ್.ಟಿ-ಪಿಸಿ‌ಆರ್ ಪರೀಕ್ಷೆ ಮಾಡಿಸಿಕೊಂಡಿರಬೇಕು‌. ಅದರ ಪ್ರಮಾಣ ಪತ್ರವನ್ನು ಕಚೇರಿಗೆ ನೀಡಬೇಕು ಎಂದು ತಿಳಿಸಿದ್ದಾರೆ. ಆದರೆ, ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದವರು ಆರ್.ಟಿ.ಪಿಸಿ‌ಆರ್ ಪರೀಕ್ಷೆ ಮಾಡಿಸುವ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ.
ಆದರೆ ಲಸಿಕೆ ಪಡೆದಿರುವ ಪ್ರಮಾಣ ಪತ್ರ ಒದಗಿಸಬೇಕು ಎಂದು ಸೂಚಿಸಲಾಗಿದೆ.
ನಿಗಮದ ಎಲ್ಲ ಸಿಬ್ಬಂದಿಗಳು ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ಚಾಲನಾ ಸಿಬ್ಬಂದಿಯು ಪ್ರಯಾಣಿಕರೊಂದಿಗೆ ನೇರ ಸಂಪರ್ಕ ಹೊಂದುವುದರಿಂದ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು.
ಜೂನ್‌ 21ರ ಬೆಳಗ್ಗೆಯಿಂದ ಅನ್ ಲಾಕ್ ಆಗಿರುವ ಜಿಲ್ಲೆಗಳಲ್ಲಿ ಶೇ.50ರಷ್ಟು ಪ್ರಯಸಣಿಕರೊಂದಿಗೆ ಬಸ್ ಸಂಚಾರ ಮತ್ತೆ ಆರಂಭಗೊಳ್ಳಲಿದೆ.

ಪ್ರಮುಖ ಸುದ್ದಿ :-   ವಿಡಿಯೊಗಳು | ಶಿವಮೊಗ್ಗ ದಸರಾ ಜಂಬೂ ಸವಾರಿ ವೇಳೆ ದಿಕ್ಕಾಪಾಲಾಗಿ ಓಡಿದ ಅಂಬಾರಿ ಹೊತ್ತ ಆನೆ ; ಬೆಳ್ಳಿ ಅಂಬಾರಿ ಕೆಳಕ್ಕೆ, ವಾಹನ ಜಖಂ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement