ನಟ ಕಮಲ್ ಹಾಸನ್ ಚೆನ್ನೈ ಆಸ್ಪತ್ರೆಗೆ ದಾಖಲು

ಚೆನ್ನೈ : ಬಹುಭಾಷಾ ನಟ ಕಮಲ್ ಹಾಸನ್ ಅವರು ನವೆಂಬರ್ 23ರಂದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವರದಿಗಳ ಪ್ರಕಾರ, ಕಮಲ್ ಅವರನ್ನು ರಾಮಚಂದ್ರ ವೈದ್ಯಕೀಯ ಕೇಂದ್ರಕ್ಕೆ (SRMC) ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಜ್ವರ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.
ಇನ್ನೆರಡು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಇಂದು(ನವೆಂಬರ್ 24) ರಂದು ಕಮಲ್ ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.
ಹೈದರಾಬಾದ್ ನಿಂದ ಮರಳಿದ ಬಳಿಕ ನವೆಂಬರ್ 23 ರಂದು, ಕಮಲ್ ಹಾಸನ್ ಅವರು ಅಸೌಖ್ಯವನ್ನು ಅನುಭವಿಸಿದರು ಮತ್ತು ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರಿಗೆ ಚಿಕಿತ್ಸೆ ನೀಡಿದ್ದು, ಚೇತರಿಸಿಕೊಳ್ಳಲು ಒಂದೆರಡು ದಿನ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

4 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement