ಚಿತ್ರದುರ್ಗ: ಆಪರೇಷನ್ ಥಿಯೇಟರ್​ನಲ್ಲಿ ಪ್ರಿ ವೆಡ್ಡಿಂಗ್ ಶೂಟ್ ಮಾಡಿದ್ದ ವೈದ್ಯ ಸೇವೆಯಿಂದ ವಜಾ

ಚಿತ್ರದುರ್ಗ: ಆಪರೇಷನ್ ಥಿಯೇಟರ್​ನಲ್ಲಿ ಪ್ರಿ ವೆಡ್ಡಿಂಗ್ ಶೂಟ್ (Pre wedding Shoot) ಮಾಡಿಕೊಂಡಿದ್ದ ವೈದ್ಯನನ್ನು ಸೇವೆಯಿಂದ ವಜಾಗೊಳಿಸಿ ಚಿತ್ರದುರ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ವೈದ್ಯ ಡಾ.ಅಭಿಷೇಕ ಅವರು ಭರಮಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ (Government Hospital) ಪ್ರಿ ವೆಡ್ಡಿಂಗ್ ಶೂಟ್ ಮಾಡಿಕೊಂಡಿದ್ದು, ಈ ವೀಡಿಯೊ ವೈರಲ್ ಆಗಿತ್ತು.
ಸುದ್ದಿ ವೈರಲ್‌ ಆದ ನಂತರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ಸ್ವಂತಕ್ಕೆ ಬಳಕೆ ಮಾಡಿಕೊಂಡಿದ್ದು, ಈ ಬಗ್ಗೆ ವೈದ್ಯರು ಸ್ಪಷ್ಟನೆ ನೀಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದರು. ಈ ಸುದ್ದಿ ವೈರಲ್‌ ಆದ ನಂತರ ವೈದ್ಯನನ್ನು ವಜಾಗೊಳಿಸಲಾಗಿದೆ. ಡಾ.ಅಭಿಷೇಕ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು.

ಚಿತ್ರದುರ್ಗದ ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿ ವೆಡ್ಡಿಂಗ್ ಶೋಟ್ ನಡೆಸಿದ ವೈದ್ಯರನ್ನ ಸೇವೆಯಿಂದ ವಜಾಗೊಳಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಿರುವುದು ಜನರ ಆರೋಗ್ಯ ಸೇವೆಗೆ ಹೊರತು ವೈಯಕ್ತಿಕ ಕೆಲಸಗಳಿಗಲ್ಲ. ವೈದ್ಯರಿಂದ ಇಂಥಹ ಅಶಿಸ್ತುಗಳನ್ನ ನಾನು ಸಹಿಸುವುದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಗುತ್ತಿಗೆ ನೌಕರರು ಸೇರಿದಂತೆ ವೈದ್ಯರು, ಸಿಬ್ಬಂದಿ ವರ್ಗದವರು ಸರ್ಕಾರಿ ಸೇವಾ ನಿಯಮಾವಳಿಗಳ ಅನ್ವಯ ಕರ್ತವ್ಯ ನಿರ್ವಹಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಈ ರೀತಿಯ ದುರುಪಯೋಗ ಆಗದಂತೆ ಎಚ್ಚರಿಕೆ ವಹಿಸಲು ಸಂಬಂಧಪಟ್ಟ ವೈದ್ಯರು ಹಾಗೂ ಎಲ್ಲಾ ಸಿಬ್ಬಂದಿಗೆ ಈಗಾಗಲೇ ಸೂಚಿಸಿದ್ದೇನೆ ಎಂದು ಎಕ್ಸ್ ನಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಸಿದ್ದಾಪುರ : ಮಂಗನ ಕಾಯಿಲೆಗೆ ಐದು ವರ್ಷದ ಬಾಲಕಿ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement