ಮೂರು ವರ್ಷಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಕ್ಕಳ ಸಂಖ್ಯೆ ಸಾವಿರ ಸಾವಿರ..!

ನವದೆಹಲಿ: ಮಕ್ಕಳ ಆತ್ಮಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ.
ಎನ್‌ಸಿಆರ್‌ಬಿ ವರದಿ ಅಂಕಿಅಂಶವನ್ನು ಸಂಸತ್ತಿನಲ್ಲಿ ಮಂಡಿಸಲಾಯಿತು. 2017–19ರಲ್ಲಿ 14 ರಿಂದ 18 ವಯಸ್ಸಿನೊಳಗಿನ 13,325 ಬಾಲಕಿಯರು ಸೇರಿದಂತೆ ಒಟ್ಟು 24,568 ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದರಲ್ಲಿ 4,000ಕ್ಕೂ ಹೆಚ್ಚು ಮಕ್ಕಳು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಕಾರಣಕ್ಕೆ ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಅಂಶಗಳು ಸಹ ಬೆಳಕಿಗೆ ಬಂದಿದೆ. 2017ರಲ್ಲಿ 8,029 ಮಕ್ಕಳು 2018ಕ್ಕೆ ಈ ಸಂಖ್ಯೆಯು 8,162 ಮತ್ತು 2019ಕ್ಕೆ 8,377ಕ್ಕೆ ಏರಿಕೆಯಾಗಿದೆ.
ಮಧ್ಯಪ್ರದೇಶದಲ್ಲಿ ಅತಿ ಹೆಚ್ಚು ಮಕ್ಕಳ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಕ್ರಮವಾಗಿ 3,115, 2,802, 2,527 ಮತ್ತು 2,035 ಮಕ್ಕಳ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ.
ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇವೆಂದು ಆತ್ಮಹತ್ಯೆ ಮಾಡಿಕೊಂಡ ಮಕ್ಕಳಲ್ಲಿ 411 ಬಾಲಕಿಯರಾಗಿದ್ದಾರೆ. ಮದುವೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ 639, ಪ್ರೇಮ ಪ್ರಕರಣಗಳಿಂದ 3,315, ಅನಾರೋಗ್ಯ 2,567, ದೈಹಿಕ ಹಿಂಸೆ ಕಾರಣಕ್ಕೆ 81 ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಅಂಕಿಅಂಶಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement