ಶಿಕ್ಷಕರಾಗುವವರಿಗೆ ಸರ್ಕಾರದಿಂದ ಗುಡ್‌ ನ್ಯೂಸ್‌ : ಈ ವರ್ಷವೇ 5 ಸಾವಿರ ಶಿಕ್ಷಕರ ನೇಮಕ ಮಾಡ್ತೇವೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಐದು ಸಾವಿರ ಶಿಕ್ಷಕರ ನೇಮಕಕ್ಕೆ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಅವರು ರಾಜ್ಯಾದ್ಯಂತ ಶಿಕ್ಷಕರ ಕೊರತೆ ಇದೆ, ಅದನ್ನು ನೀಗಿಸುವ ನಿಟ್ಟಿನಲ್ಲಿ ಶಿಕ್ಷಕರ ನೇಮಕ ಮಾಡಿಕೊಳ್ಳಲಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಐದು ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.
‘ಶಿಕ್ಷಕರ ನೇಮಕಾತಿ ಬಹಳ ದಿನಗಳಿಂದ ಉಳಿದುಕೊಂಡಿದೆ. 5 ಸಾವಿರ ಶಿಕ್ಷಕರ ನೇಮಕಕ್ಕೆ ಇಂದು (ಭಾನುವಾರ) ತೀರ್ಮಾನಿಸಲಾಗಿದೆ. ಈ ವರ್ಷದೊಳಗೆ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು’ ಎಂದರು.
ಇನ್ನು ಇದೇ ವೇಳೆ ತಮಗೆ ಪಾಠ ಮಾಡಿದ ಶಿಕ್ಷಕರನ್ನು ಸ್ಮರಿಸಿದ ಬೊಮ್ಮಾಯಿ, ‘ದೇಶ ಬೆಳೆಸುವ ಶಕ್ತಿ ನಮ್ಮ ಗುರುಗಳಲ್ಲಿದೆ. ನನಗೆ ಗಣಿತ ಕಲಿಸಿದ ಗುರುಗಳನ್ನ ನಾನು ಇಂದಿಗೂ ಮರೆತಿಲ್ಲ ಎಂದರು.
ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾತನಾಡಿ, ಶಿಕ್ಷಕರ ವರ್ಗಾವಣೆಗೆ ಮುಖ್ಯಮಂತ್ರಿಗಳು ಒಂದೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳುವ ವಿಶ್ವಾಸ ಇದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement