ಮಧ್ಯಪ್ರದೇಶ ಬಾವಿ ದುರಂತ: ಮೃತರ ಸಂಖ್ಯೆ 11ಕ್ಕೆ ಏರಿಕೆ

ಭೋಪಾಲ್: ಮಧ್ಯಪ್ರದೇಶದ ಭೋಪಾಲನ ವಿದಿಶಾದಲ್ಲಿ ನಡೆದ ಬಾವಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ನೀಡುವುದಾಗಿ ಶನಿವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ವಿದಿಶಾ ಜಿಲ್ಲೆಯ ಗಂಜ್ ಬಸೌಡ ಪ್ರದೇಶದಲ್ಲಿ 8 ವರ್ಷದ ಬಾಲಕಿ ಜುಲೈ 15 ರಂದು ಬಾವಿಗೆ ಬಿದ್ದಿದ್ದಳು. ಅವಳನ್ನು ರಕ್ಷಿಸಲು ಕೆಲವರು ಮುಂದಾದ ವೇಳೆ ಬಾವಿ ಕುಸಿದ ಪರಿಣಾಮ ೪೦ಕ್ಕೂ ಅಧಿಕ ಜನರು ಬಾವಿಗೆ ಬಿದ್ದಿದ್ದರು. ಅವರಲ್ಲಿ ಈಗಾಗಲೇ 11 ಜನರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ.

ದುರಂತದ ಕುರಿತು ನೋವು ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಕಚೇರಿ, ಮೃತರ ಕುಟುಂಬಗಳಿಗೆ ಸಾಂತ್ವನಗಳು. ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿಯಲ್ಲಿ ಮೃತರ ಕುಟುಂಬಗಳಿಗೆ ತಲಾ ೨ ಲಕ್ಷ ನೀಡಲಾಗುವುದು ಎಂದು ಹೇಳಿದೆ.

ಇದುವರೆಗೆ ೧೧ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, 19 ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ಮಧ್ಯಪ್ರದೇಶದ ಸಚಿವ ವಿಶ್ವಾಸ್ ಸಾರಂಗ್ ತಿಳಿಸಿದ್ದಾರೆ.

ಮೃತರ ಕುಟುಂಗಳಿಗೆ ತಲಾ 5 ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈಗಾಗಲೇ ಘೋಷಿಸಿದ್ದು, ಗಾಯಗೊಂಡವರಿಗೆ ತಲಾ 50,000 ರೂ. ನೀಡಲಾಗುವುದು ಮತ್ತು ಉಚಿತ ಚಿಕಿತ್ಸೆ ನೀಡುವುದಾಗಿಯೂ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ : 1ನೇ ಹಂತದಲ್ಲಿ 62.37%ರಷ್ಟು ಮತದಾನ ; 2019ರ ಮತದಾನದ ಪ್ರಮಾಣಕ್ಕಿಂತ ಕಡಿಮೆ

ಜುಲೈ 15 ರಂದು ಗುರುವಾರ ಸಂಜೆ ವೇಳೆಗೆ ಬಾವಿಯ ಸಮೀಪ ಆಟವಾಡುತ್ತಿದ್ದ ಬಾಲಕಿ ಆಯತಪ್ಪಿ ಬಾವಿಗೆ ಬಿದ್ದಿದ್ದಾಳೆ. ಈ ಸುದ್ದಿ ಒಬ್ಬರ ಬಾಯಿಂದ ಒಬ್ಬರಿಗೆ ಹರಡುತ್ತಿದ್ದಂತೆಯೇ ಇಡೀ ಗ್ರಾಮವೇ ಬಾವಿಯ ಸುತ್ತ ಜಮಾಯಿಸಿದೆ. ಬಾವಿಯ ತಡೆಗೋಡೆ ಸುತ್ತ ಒತ್ತಡ ಹೆಚ್ಚಾದ ಪರಿಣಾಮ ತಡೆಗೋಡೆಯ ಮಣ್ಣು ಕುಸಿದು ಬಾವಿಯ ಬಳಿ ಸೇರಿದ್ದ 40 ಕ್ಕೂ ಅಧಿಕ ಜನರು ಬಾವಿಗೆ ಬಿದ್ದಿದ್ದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement