ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆ ಸಾಧ್ಯತೆ : ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೋಮವಾರದಿಂದ ಒಂದು ವಾರಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 26ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಣನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 5 ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಗಾಳಿಯ ವೇಗವೂ ಸಹ ಗಂಟೆಗೆ 45 ರಿಂದ 55 ಕಿ. ಮೀ. ವೇಗದಲ್ಲಿ ಇರದಲಿದೆ ಎಂದು ಅಂದಾಜಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40ರಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೀದರ, ಯಾದಗಿರಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರುತ್ತದೆ. ಸಂಜೆ ಅಥವ ರಾತ್ರಿ ಅವಧಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಜೂನ್‌ನಲ್ಲಿ ಮುಂಗಾರು ದುರ್ಬಲಗೊಂಡು ವಾಡಿಕೆಗಿಂತ ಶೇ. 56 ಮಳೆ ಕೊರತೆ ಉಂಟಾಯಿತು. ಜುಲೈ ತಿಂಗಳಿನಲ್ಲಿ ಮುಂಗಾರು ಚುರುಕುಗೊಂಡು ವಾಡಿಕೆಗಿಂತ ಶೇ.29 ಹೆಚ್ಚು ಮಳೆಯಾಯಿತು. ಆದರೆ ಆಗಸ್ಟ್‌ನಲ್ಲಿ ವಾಡಿಕೆಗಿಂತ ಶೇ.73 ಮಳೆ ಕೊರತೆಯಾಗಿದೆ, ಕಳೆದ 125 ವರ್ಷಗಳಲ್ಲಿ ಆಗಸ್ಟ್‌ ತಿಂಗಳಲ್ಲಿ ದಾಖಲಾದ ಅತಿ ಕಡಿಮೆ ಮಳೆ ಎಂದು ಹೇಳಲಾಗಿದೆ. ಈಗ ಸೆಪ್ಟೆಂಬರ್‌ ತಿಂಗಳಲ್ಲಿ ಮತ್ತೆ ಮಳೆ ನಿಧನವಾಗಿ ಚುರುಕುಗೊಳ್ಳುತ್ತಿದೆ.

ಪ್ರಮುಖ ಸುದ್ದಿ :-   ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement