ನಾಳೆ ಬೆಳಿಗ್ಗೆ 6ರಿಂದ ಬಸ್ಸುಗಳು ಸಂಚಾರ, ವಾರಾಂತ್ಯ, ರಾತ್ರಿ ವೇಳೆಯೂ ಸಂಚಾರ

ಹುಬ್ಬಳ್ಳಿ:  ರಾಜ್ಯ ಸರ್ಕಾರ ಸಾರಿಗೆ ಸಂಸ್ಥೆಗಳ ಬಸ್ ಗಳ ಓಡಾಟಕ್ಕೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ  ಪ್ರಯಾಣಿಕರ  ಬೇಡಿಕೆ ಹಾಗೂ ಆದ್ಯತೆ ಮೇರೆಗೆ ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ಬಸ್ಸುಗಳ ಕಾರ್ಯಾಚರಣೆ ಆರಂಭವಾಗಲಿದೆ.
ಈ ಕುರಿತು ಪ್ರಕಟಣೆ ನೀಡಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ರಾಜ್ಯದಲ್ಲಿ ಕೋವಿಡ್ ಪ್ರಕರಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲ ನಿಬಂಧನೆಗಳನ್ನು ವಿಧಿಸಿ ಬಸ್ಸುಗಳ ಕಾರ್ಯಾಚರಣೆಗೆ ಅನುಮತಿ ನೀಡಿದೆ. ಹೀಗಾಗಿ ಸಂಸ್ಥೆ ವ್ಯಾಪ್ತಿಯ ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಉತ್ತರಕನ್ನಡ, ಹಾವೇರಿ ಜಿಲ್ಲೆಗಳ ಒಂಭತ್ತು ವಿಭಾಗಗಳ ವ್ಯಾಪ್ತಿಯಲ್ಲಿ ಬಸ್ಸುಗಳು ಆರಂಭವಾಗಲಿವೆ.
ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಪ್ರಕಣಗಳು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮೈಸೂರು  ಜಿಲ್ಲೆ ಹೊರತು ಪಡಿಸಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಬಸ್ಸುಗಳು ಸಂಚಾರ ಮಾಡಲಿವೆ‌. ಕಾರ್ಯಾಚರಣೆಗೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಆತಂಕ ಬೇಡ: ಲಾಕ್ ಡೌನ್ ಸಂದರ್ಭದಲ್ಲಿ ಎಲ್ಲಾ ಬಸ್ಸುಗಳನ್ನು ದಿನನಿತ್ಯದ ನಿವ೯ಹಣೆ ಸ್ಯಾನಿಟೈಸೇಶನ್‌ ಮಾಡುವುದರೊಂದಿಗೆ ವಾಹನಗಳನ್ನು ಸುಸ್ಥಿಯಲ್ಲಿಡಾಗಿದೆ. ಪ್ರಯಾಣಿಕರ ಹಾಗೂ ಸಿಬ್ಬಂದಿ ಆರೋಗ್ಯದ ದೃಷ್ಟಿಯಿಂದ ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗೆ ಕೋವಿಡ್ ಲಸಿಕೆ ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಶೇ. 92ರಷ್ಟು ಸಿಬ್ಬಂದಿ ಲಸಿಕೆ ಪಡೆದುಕೊಂಡಿದ್ದಾರೆ. ಇದರೊಂದಿಗೆ ಕೋವಿಡ್ ಪರೀಕ್ಷೆಗೆ ಒಳಗಾಗಿ ನೆಗೆಟಿವ್ ವರದಿ ಇದ್ದವರನ್ನು ಮಾತ್ರ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ. ಪ್ರಯಾಣಿಕರು ಯಾವುದೇ ಆತಂಕವಿಲ್ಲದೆ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಸಂಚಾರ ಮಾಡಬಹುದಾಗಿದೆ ಎಂದು ತಿಳಿಸಲಾಗಿದೆ.
ಪಾಲನೆ ಕಡ್ಡಾಯ: ಬಸ್ಸುಗಳಲ್ಲಿ  ಕೋವಿಡ್ ನಿಯಮಗಳನ್ನು ಪ್ರಯಾಣಿಕರು ಕಟ್ಟು ನಿಟ್ಟಾಗಿ ಪಾಲಿಸುವುದು ಕಡ್ಡಾಯವಾಗಿರುತ್ತದೆ. ಹಾಗೂ ಬಸ್ಸುಗಳು ಕಾಯಾ೯ಚರಣೆಯಾಗುವ ಎಲ್ಲ ನಿಲ್ದಾಣಗಳಲ್ಲಿ  ಸರ್ಕಾರದ ಮಾಗ೯ಸೂಚಿಯನ್ವಯ ಅಗತ್ಯ ಕ್ರಮ ಕೈಗೊಳ್ಳುದರೊಂದಿಗೆ ಪ್ರತಿಶತ 50ರಷ್ಟು ಪ್ರಯಾಣಿಕರ  ಸಾಮಥ್ಯ೯ದೊಂದಿಗೆ  ಪ್ರಯಾಣಿಕರ ಬೇಡಿಕೆಗನುಗುಣವಾಗಿ ಕಾಯಾ೯ಚರಣೆ ನಡಯಲಿದೆ.
ಪ್ರಯಾಣಿಕರು ಕಡ್ಡಾವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಬೇಕು.  ಪ್ರಯಾಣಿಕರ ಕುಳಿತುಕೊಳ್ಳುವ ಮೂರು ಆಸನಗಳಲ್ಲಿ ಇಬ್ಬರಿಗೆ ಹಾಗೂ ಎರಡು ಆಸನದಲ್ಲಿ ಒಬ್ಬರಿಗೆ ಮಾತ್ರ ಕುಳಿತುಕೊಳ್ಳಲು ಅವಕಾಶವಿರುತ್ತದೆ.  ಚಾಲನಾ ಸಿಬ್ಬಂದಿ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿರುತ್ತದೆ. ಅಂತಹ ಸಿಬ್ಬಂದಿಗೆ ಮಾತ್ರ ಕತ೯ವ್ಯ ನಿಯೋಜಿಸುವಂತೆ ಕಟ್ಟು ನಿಟ್ಟಾಗಿ ಘಟಕ ವ್ಯವಸ್ಥಾಪಕರಿಗೆ ಸೂಚಿಸಲಾಗಿದೆ.
ವಾರಾಂತ್ಯ ಹಾಗೂ ರಾತ್ರಿ ವೇಳೆ ಬಸ್ಸುಗಳ ಸಂಚಾರಕ್ಕೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆ ಹೊರತುಪಡಿಸಿ ಎಲ್ಲ ಜಿಲ್ಲೆಗಳಿಗೂ ಬಸ್ಸುಗಳು ಸಂಚಾರ ಮಾಡಲಿವೆ. ಬಸ್ಸುಗಳ  ಕಾಯಾ೯ಚರಣೆಗೆ ವಾರಾಂತ್ಯ ಕಪ್ಯೂ೯ ಅನ್ವಯಿಸುವದಿಲ್ಲ ಪ್ರಯಾಣಿಕರ ಬೇಡಿಕೆಗನುಗುಣವಾಗಿ ಅಗತ್ಯವೆನಿಸಿದಲ್ಲಿ ಮಾತ್ರ ಕೋವಿಡ್ ಮಾಗ೯ಸೂಚಿ ಕಟ್ಟು ನಿಟ್ಟಾಗಿ ಪಾಲಿಸಿ ಬಸ್ಸುಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ವಿಡಿಯೊಗಳು | ಶಿವಮೊಗ್ಗ ದಸರಾ ಜಂಬೂ ಸವಾರಿ ವೇಳೆ ದಿಕ್ಕಾಪಾಲಾಗಿ ಓಡಿದ ಅಂಬಾರಿ ಹೊತ್ತ ಆನೆ ; ಬೆಳ್ಳಿ ಅಂಬಾರಿ ಕೆಳಕ್ಕೆ, ವಾಹನ ಜಖಂ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement