ಮಹತ್ವದ ಸುದ್ದಿ ..ಹಿಜಾಬ್ ವಿವಾದ ನಡುವೆಯೇ ಕರ್ನಾಟಕದ ಶಾಲಾ- ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಸರ್ಕಾರದಿಂದ ಆದೇಶ

ಬೆಂಗಳೂರು: ಕರ್ನಾಟಕದಲ್ಲಿ ಹಿಜಾಬ್ ವಿವಾದ ಭುಗಿಲೆದ್ದ ಬೆನ್ನಲ್ಲೇ ವಿವಾದಕ್ಕೆ ಸರ್ಕಾರ ತಾರ್ಕಿಕ ಅಂತ್ಯ ನೀಡಲು ಮುಂದಾಗಿದ್ದು, ಎಲ್ಲ ಸರ್ಕಾರಿ ಖಾಸಗಿ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ವಸ್ತ್ರ ಸಂಹಿತೆಗೆ ಸಂಬಂಧಪಟ್ಟಂತೆ ಶಿಕ್ಷಣ ಇಲಾಖೆಯಿಂದ ಶನಿವಾರ ಸಂಜೆ ಆದೇಶ ಹೊರಡಿಸಲಾಗಿದ್ದು, ವಿವಿಧ ರಾಜ್ಯಗಳ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಆಧರಿಸಿ ಈ ಆದೇಶವನ್ನು ಸಿದ್ದಪಡಿಸಲಾಗಿದೆ. ಶಾಲಾ ಅಭಿವೃದ್ಧಿ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ನಿಗದಿ ಮಾಡಿದ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸುವಂತೆ ಆದೇಶಿಸಲಾಗಿದೆ. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರವನ್ನೇ ಧರಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಕಾಲೇಜು ಸಮವಸ್ತ್ರ ನಿಗದಿಪಡಿಸದಿದ್ದರೆ ಸಮರ್ಪಕ ಉಡುಪು ಧರಿಸಬೇಕು. ಸಮಾನತೆ, ಐಕ್ಯತೆ ಜೊತೆ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಉಡುಪು ಧರಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಲಾಗಿದೆ.
ಪದವಿ ಪೂರ್ವ ಕಾಲೇಜುಗಳಿಗೂ ಕಡ್ಡಾಯ ಸಮವಸ್ತ್ರವನ್ನು ಸರ್ಕಾರ ನಿಗದಿಪಡಿಸಿದೆ. ಕರ್ನಾಟಕ ಶಿಕ್ಷಣ ಕಾಯ್ದೆ 1983 ರ ಅನ್ವಯ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಖಾಸಗಿ ಶಾಲೆಗಳು ಆಡಳಿತ ಮಂಡಳಿ ನಿರ್ಧರಿಸಿರುವ ಸಮವಸ್ತ್ರ ಧರಿಸಬೇಕು. ಪದವಿ ಪೂರ್ವ ಕಾಲೇಜುಗಳಲ್ಲಿ ಸಿಡಿಸಿ ಅಥವಾ ಮಂಡಳಿ ನಿಗದಿಪಡಿಸಿರುವ ಸಮವಸ್ತ್ರ ಧರಿಸಬೇಕು. ಕಾಲೇಜುಗಳಲ್ಲಿ ಸಿಡಿಸಿ (CDC) ಅಥವಾ ಆಡಳಿತ ಮಂಡಳಿ ಸಮವಸ್ತ್ರ ನಿಗದಿಪಡಿಸದಿದ್ದರೆ ಸಮಾನತೆ ಹಾಗೂ ಐಕ್ಯತೆಯನ್ನು ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಂತೆ ಇರುವ ಉಡುಪು ಧರಿಸಬೇಕೆಂದು ಆದೇಶಿಸಲಾಗಿದೆ.

ಪ್ರಮುಖ ಸುದ್ದಿ :-   ಕೆಪಿಎಸ್‌ಸಿ ಹಗರಣ; ಐಎಎಸ್‌ ಅಧಿಕಾರಿ ಜ್ಞಾನೇಂದ್ರಕುಮಾರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸರ್ಕಾರದ ಅನುಮತಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement