ನಾನು ಕಾಂಗ್ರೆಸ್‌ ಕಾರ್ಯಕರ್ತ, ಸಿದ್ದರಾಮಯ್ಯ ಹಿಂದೂ ವಿರೋಧಿ ಹೇಳಿಕೆಯಿಂದ ನೋವಾಗಿತ್ತು: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣದ ಬಂಧಿತ ಆರೋಪಿ

ಮಡಿಕೇರಿ: ಕೊಡಗಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪಿಯನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಈತ ತಾನು ಕಾಂಗ್ರೆಸ್‌ ಕಾರ್ಯಕರ್ತ ಎಂದು ಹೇಳಿಕೊಂಡಿದ್ದಾನೆ.
ಬಂಧಿತ ಆರೋಪಿಯನ್ನು ಸೋಮವಾರಪೇಟೆಯ ಸಂಪತ್ ಎಂದು ಗುರುತಿಸಲಾಗಿದೆ. ಮೂಲತಃ ನಾನು ಜೆಡಿಎಸ್ ಪಕ್ಷದವನು. ಮಾಜಿ ಸಚಿವ ಜೀವಿಜಯ ಬೆಂಬಲಿಗನಾಗಿದ್ದು, ಜೀವಿಜಯ ಜೊತೆಯಲ್ಲಿ ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ” ಎಂದು ಬಂಧನಕ್ಕೂ ಮೊದಲು ಸಂಪತ್ ಹೇಳಿಕೊಂಡಿದ್ದಾನೆ.

ನಾನು ಕಾಂಗ್ರೆಸ್ ಕಾರ್ಯಕರ್ತ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಂದೂ ವಿರೋಧಿ ಹೇಳಿಕೆಗಳಿಂದ ಬೇಸತ್ತು ಅವರ ಕಾರಿಗೆ ಮೊಟ್ಟೆ ಎಸೆದಿದ್ದೆ ಎಂದು ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದ ಆರೋಪಿ ಸಂಪತ್​ ಹೇಳಿದ್ದಾರೆ.
ಕೊಡಗಿನವರು ದನದ ಮಾಂಸ ತಿನ್ನುತ್ತಾರೆ ಎಂದು ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯಿಂದ ನಾನು ತೀವ್ರ ಕೋಪಗೊಂಡಿದ್ದೆ. ಕೆಲಸದ ನಿಮಿತ್ತ ಬಂದಿದ್ದ ನಾನು ಸಹ ಪ್ರತಿಭಟನೆಯ ಗುಂಪಿನಲ್ಲಿ ಸೇರಿ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆದೆ ಎಂದು ಸಂಪತ್‌ ಹೇಳಿದ್ದಾನೆ. ಸಂಪತ್ ಕುಶಾಲನಗರ ನ್ಯಾಯಾಲಯಕ್ಕೆ ಶರಣಾಗಲು ಬಂದಾಗ ಪೊಲೀಸರು ಆತನನ್ನು ಬಂಧಿಸಿದ್ದಾರೆ

ಪ್ರಮುಖ ಸುದ್ದಿ :-   ಐಟಿ ಅಧಿಕಾರಿಗಳ ದಾಳಿ, ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

ಮುಸ್ಲಿಮರ ಪ್ರದೇಶದಲ್ಲಿ ಸಾವರ್ಕರ್ ಫ್ಲೆಕ್ಸ್ ಯಾಕೆ ಹಾಕಬೇಕು ಎಂದು ಪ್ರಶ್ನಿಸಿದ್ದ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ ಬಿಜೆಪಿ ಕಾರ್ಯಕರ್ತರು, ಆಗಸ್ಟ 18 ರಂದು ಮಳೆಯಿಂದ ಹಾನಿಗೊಳಗಾದ ಕೊಡಗು ಜಿಲ್ಲೆಗಳ ಪ್ರದೇಶಗಳಿಗೆ ತರಳುತ್ತಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರು. ಹಾಗೂ ಅವರ ಕಾರಿಗೆ ಮೊಟ್ಟೆ ಎಸೆಯಲಾಗಿತ್ತು.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement