ಉತ್ತರ ಪ್ರದೇಶ ಚುನಾವಣೆ 2022: ಅಪ್ನಾ ದಳ -ನಿಶಾದ್ ಪಕ್ಷದ ಜೊತೆ ಬಿಜೆಪಿ ಮೈತ್ರಿ

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) 2022 ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಆಪ್ನಾ ದಳ ಮತ್ತು ನಿಶಾದ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡುರಾಜ್ಯದಲ್ಲಿ ಚುನಾವಣೆ ಎದುರಿಸಲಿದೆ ಎಂದು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ.
“ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಅಪ್ನಾ ದಳ ಮತ್ತು ನಿಶಾದ್ ಪಕ್ಷವು 403 ಸ್ಥಾನಗಳಲ್ಲಿ ಜಂಟಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿವೆ” ಎಂದು ನಡ್ಡಾ ಹೇಳಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಅಪ್ನಾ ದಳದ ಮುಖ್ಯಸ್ಥೆ ಅನುಪ್ರಿಯಾ ಪಟೇಲ್ ಮತ್ತು ನಿಶಾದ್ ಪಕ್ಷದ ಮುಖ್ಯಸ್ಥ ಸಂಜಯ್ ನಿಶಾದ್ ಇದ್ದರು.
ಮೂರರಲ್ಲಿ ಸೀಟು ಹಂಚಿಕೆ ಬಗ್ಗೆ ಮೂರೂ ಪಕ್ಷಗಳು ಏನನ್ನೂ ಹೇಳಿಲ್ಲ. ಆದಾಗ್ಯೂ, ಮೈತ್ರಿಯಲ್ಲಿರುವ ಮೂರು ಪಕ್ಷಗಳು 2022 ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಮತ್ತೆ 300 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿವೆ.
ಪತ್ರಿಕಾಗೋಷ್ಠಿಯಲ್ಲಿ ನಡ್ಡಾ ಮಾತನಾಡಿ, ಉತ್ತರ ಪ್ರದೇಶದಲ್ಲಿ ಹಿಂದಿನ ಸರ್ಕಾರಗಳ ಜೊತೆಯಲ್ಲಿ ಮಾಫಿಯಾ ಸಕ್ರಿಯವಾಗಿತ್ತು. ಈಗ ರಾಜ್ಯದಲ್ಲಿ ಕಾನೂನಿನ ಆಡಳಿತವಿದೆ ಎಂದು ಹೇಳಿದ್ದಾರೆ. ಬಿಜೆಪಿಯ ‘ಡಬಲ್ ಇಂಜಿನ್’ ಸರ್ಕಾರದ ಅಡಿಯಲ್ಲಿ, ಉತ್ತರ ಪ್ರದೇಶವು ಹೂಡಿಕೆಯ ತಾಣವಾಗಿದೆ. ಸಾಮಾಜಿಕ ಸೂಚಕಗಳಲ್ಲಿ ರಾಜ್ಯವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.
ಉತ್ತರ ಪ್ರದೇಶದಲ್ಲಿ 2017ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮೈತ್ರಿಕೂಟದ ಪಾಲುದಾರರು 325 ಸ್ಥಾನಗಳನ್ನು ಗೆದ್ದಿದ್ದರು. 2022ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ 30 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಇಂದು ಬಿಡುಗಡೆ ಮಾಡಿದೆ. ಪ್ರಮುಖ ಹೆಸರುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್, ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಸ್ಮೃತಿ ಇರಾನಿ, ಮುಖ್ತಾರ್ ಅಬ್ಬಾಸ್ ನಖ್ವಿ, ದಿನೇಶ್ ಶರ್ಮಾ ಮತ್ತು ಕೇಶವ್ ಪ್ರಸಾದ್ ಮೌರ್ಯ ಪಟ್ಟಿಯಲ್ಲಿದ್ದಾರೆ.
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement