ವಯಸ್ಸಿನ ಕಾರಣ: ಖ್ಯಾತ ವಕೀಲ ನಾರಿಮನ್ ಸೇವೆಯಿಂದ ನಿವೃತ್ತಿ..?

ಬೆಂಗಳೂರು: ದಶಕಗಳ ಕಾಲ ನ್ಯಾಯಾಲಯಗಳಲ್ಲಿ ಕಾವೇರಿ, ಕೃಷ್ಣಾ ಸೇರಿದಂತೆ ರಾಜ್ಯದ ಜಲ ವಿವಾದಗಳ ಬಗ್ಗೆ ಸಮರ್ಪಕವಾಗಿ ವಾದ ಮಂಡಿಸಿದ್ದ ಖ್ಯಾತ ವಕೀಲ ಪಾಲಿ ನಾರಿಮನ್ ಸೇವೆಯಿಂದ ನಿವೃತ್ತರಾಗಲಿದ್ದಾರೆ.
ತಮಗೆ ವಯಸ್ಸಾದ ಹಿನ್ನೆಲೆಯಲ್ಲಿ ನ್ಯಾಯಾಲಯಗಳಲ್ಲಿ ತಾವು ಕರ್ನಾಟಕದ ಪರ ವಾದ ಮಂಡಿಸಲು ಸಾಧ್ಯವಾಗದ ಕಾರಣ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಬೇರೆ ವಕೀಲರನ್ನು ನೇಮಿಸಿಕೊಳ್ಳಿ ಎಂದು ನಾರಿಮನ್ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಇದೀಗ ಸರ್ಕಾರ ಪಾಲಿ ನಾರಿಮನ್ ಅವರಂತಹ ಸಮರ್ಥರನ್ನೇ ನೇಮಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ. 92 ವರ್ಷದ ನಾರಿಮನ್ ರಾಜ್ಯದ ಜಲ ವಿವಾದದಗಳನ್ನು ಸುಪ್ರೀಂಕೋರ್ಟ್‍ನಲ್ಲಿ ರಾಜ್ಯದ ಪರವಾಗಿ ವಾದ ಮಂಡಿಸಿದ್ದರು. ಸುಮಾರು ಮೂರು ದಶಕಗಳಿಗೂ ಹೆಚ್ಚು ಕಾಲ ಜಲವಿವಾದಗಳಿಗೆ ರಾಜ್ಯವನ್ನು ಪ್ರತಿನಿಧಿಸಿದ್ದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಐಟಿ ಅಧಿಕಾರಿಗಳ ದಾಳಿ, ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement