ಬೆಂಗಳೂರು: ದೂರು ನೀಡಲು ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ಎದುರಿಸುತ್ತಿರುವ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ನ್ಯ ನಡೆಸಿದ ವೀಡಿಯೊ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಡಿವೈಎಸ್‌ಪಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿತ್ತು.
ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಸಂಬಂಧ ವಿಚಾರಿಸುವ ಸಲುವಾಗಿ ಮಹಿಳೆಯನ್ನು ಕಚೇರಿಗೆ ಕರೆಯಿಸಿ ನಂತರ ಆಕೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾದ ವೀಡಿಯೊ ವೈರಲ್ ಆಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರದಿ ಸಲ್ಲಿಸಿದ್ದರು. ವರದಿ ಆಧರಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಹೇಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ