ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿ..!

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲೇ ಎರಡು ಬಣಗಳ ಕಾಂಗ್ರೆಸ್ ಕಾರ್ಯಕರ್ತರು ಹೊಡೆದಾಡಿಕೊಂಡ ಘಟನೆ ಶನಿವಾರ ನಡೆದಿದೆ. ರಾಜಾಜೀನಗರ ಕಾಂಗ್ರೆಸ್ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಬಣಗಳ ನಡುವೆ ಗದ್ದಲ ನಡೆದಿದೆ.
ಮಾಜಿ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ರಾಜಾಜಿನಗರ ಕ್ಷೇತ್ರದ ಕಾರ್ಯಕರ್ತರ ಸಭೆ ಕರೆಯಲಾಗಿತ್ತು. ಟಿಕೆಟ್ ಆಕಾಂಕ್ಷಿಗಳ ಆಯ್ಕೆ ಸಂಬಂಧ ಕರೆದಿದ್ದ ಸಭೆಯಲ್ಲಿ ಬಣಗಳ ನಡುವೆ ಪರಸ್ಪರ ಕಿತ್ತಾಟ-ನೂಕಾಟ ನಡೆಯುತು. ಅದು ವಿಕೋಪಕ್ಕೆ ಹೋಗಿ ಹೊಡೆದಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಮುಂಬರುವ ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಸಮಿತಿಗಳನ್ನು ರಚನೆ ಮಾಡಿದೆ. ಆ ಸಮಿತಿಗಳು ಸಭೆ ನಡೆಸಿ ನಾಳೆಯೊಳಗೆ ಪ್ರತಿಕ್ಷೇತ್ರಕ್ಕೆ ಮೂವರು ಆಕಾಂಕ್ಷಿಗಳ ಹೆಸರನ್ನು ಸೂಚಿಸಬೇಕಿದೆ. ಅದರ ಪ್ರಕಾರ ಬೆಂಗಳೂರು ನಗರದ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಭೆಗಳು ನಡೆಯುತ್ತಿವೆ. ಅದರ ಪ್ರಕಾರ, ಇಂದು ಶನಿವಾರ ರಾಜಾಜೀನಗರ ಕ್ಷೇತ್ರದ ಆಕಾಂಕಿಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲು ಕೆಪಿಸಿಸಿ ಕಚೇರಿಯಲ್ಲಿ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಭೆ ನಡೆಯುತ್ತಿತ್ತು.

ಸಭೆಯಲ್ಲಿ ಬೆಂಬಲಿಗರು ಹಾಗೂ ಕಳೆದ ಚುನಾವಣೆಯ ಅಭ್ಯರ್ಥಿ ಪದ್ಮಾವತಿ ಬೆಂಬಲಿಗರು ಹಾಗೂ ಮತ್ತೊಂದು ಗುಂಪಿನ ನಡುವೆ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ಹೋಯಿತು. ಸಭೆಯಲ್ಲಿ ಏಕಾಏಕಿ ತಳ್ಳಾಟ ನೂಕಾಟ ನಡೆದು ಪರಸ್ಪರ ಹಲ್ಲೆ ಮಾಡಲು ಕಾರ್ಯಕರ್ತರು ಮುಂದಾದರು. ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಸಭೆಯಲ್ಲಿ ಹಾಜರಿದ್ದ ರಾಮಲಿಂಗಾ ರೆಡ್ಡಿ ಅವರು ದೂರವಾಣಿ ಕರೆ ಬಂದ ನಂತರ ಕೆಲಕಾಲ ಹೊರ ಹೋದ ಸಮಯದಲ್ಲಿ ಗಲಾಟೆ ನಡೆದಿದೆ. ತಕ್ಷಣವೇ ಒಳಗೆ ಬಂದ ರಾಮಲಿಂಗಾ ರೆಡ್ಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.ಈ ನಡುವೆ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆಯ ವೀಡಿಯೊ ಚಿತ್ರೀಕರಿಸುತ್ತಿದ್ದ ಮಾಧ್ಯಮದವರ ಮೇಲೂ ಹಲ್ಲೆಗೆ ಯತ್ನ ನಡೆಯಿತು ಎಂಬ ಆರೋಪವೂ ಕೇಳಿಬಂತು.

ಪ್ರಮುಖ ಸುದ್ದಿ :-   ಬೆಂಗಳೂರಿನ ಹಲವೆಡೆ ಜೋರಾಗಿ ಮಳೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement