ನಟ ‘ಕಿಚ್ಚ’ ಸುದೀಪ್‌ಗೆ ಬೆದರಿಕೆ ; ದೂರು ದಾಖಲು

ಬೆಂಗಳೂರು: ನಟ ಕಿಚ್ಚ ಸುದೀಪ ರಾಜಕೀಯಕ್ಕೆ ಪ್ರವೇಶದ ಬಗ್ಗೆ ಚರ್ಚೆ ನಡೆಯುತ್ತಿದ್ದು, ಇಂದು ಬುಧವಾರ(ಏ.5) ಮಧ್ಯಾಹ್ನ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗುವ ನಿರೀಕ್ಷೆ ಇದೆ. ಈ ಚರ್ಚೆ ನಡೆಯುತ್ತಿರುವಾಗಲೇ ಕಿಚ್ಚ ಸುದೀಪ ಅವರಿಗೆ ಬೆದರಿಕೆ ಪತ್ರ ಬಂದಿದ್ದು ಈ ಕುರಿತು ದೂರ ದಾಖಲಾಗಿದೆ.
ಬೆದರಿಕೆ ಪತ್ರದಲ್ಲಿ ನಿಮ್ಮ ಖಾಸಗಿ ವಿಡಿಯೋಗಳನ್ನು ಲೀಕ್ ಮಾಡುವುದಾಗಿ ಪತ್ರದಲ್ಲಿ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಅಲ್ಲದೆ, ಅವರನ್ನು ಪತ್ರದಲ್ಲಿ ಅವಾಚ್ಯ ಶಬ್ಧಗಳಿಂದ ನಿಂದಿಸಲಾಗಿದೆ ಎಂದು ಹೇಳಲಾಗಿದ್ದು, ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ.
ಈ ಸಂಬಂಧ ನಟ ಸುದೀಪ್ ಅವರ ಆಪ್ತ, ನಿರ್ಮಾಪಕ ಜಾಕ್ ಮಂಜು ಅವರು ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪತ್ರದಲ್ಲಿ ಸುದೀಪ್ ಅವರ ಮಾನಹಾನಿ ಆಗುವಂತಹ ಪದಗಳನ್ನು ಬಳಕೆ ಮಾಡಲಾಗಿದೆ. ಅವಾಚ್ಯ ಪದಗಳನ್ನು ಬಳಸಲಾಗಿದೆ. ಇದು ಸುದೀಪ್‌ ಅವರಿಗೆ ಮಾನಸಿಕ ಕಿರುಕುಳ ನೀಡುವ ಪ್ರಯತ್ನವಾಗಿದೆ ಮತ್ತು ಅವರ ಇಮೇಜ್ ಅನ್ನು ಹಾಳು ಮಾಡುವ ಹುನ್ನಾರವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಪೊಲೀಸರು ಐಪಿಸಿ ಸೆಕ್ಷನ್ 506, ಸೆಕ್ಷನ್ 504 ಅಡಿಯಲ್ಲಿ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದು, ಈ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಆದೇಶ ನೀಡಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ನಿಂದ ನಾಲ್ವರಿಗೆ ಟಿಕೆಟ್‌ ಘೋಷಣೆ

 

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement