ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ಎ. ವಿ. ಬಾಳಿಗಾ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ಫಲಿತಾಂಶ ಪ್ರಕಟಿತವಾಗಿದ್ದು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಕಾಲೇಜಿನ ನವ್ಯಾ ಹೆಬ್ಬಾರ ಶೇ. 97.33% ಅಂಕ ಮತ್ತು ಅನನ್ಯ ಭಟ್ಟ (97.33%)ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರಣತಿ ಭಟ್ಟ ಶೇ. 95.33% ಹಾಗೂ ಸಾತ್ವಿಕ್ ಭಟ್ಟ (94.34% ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. 12 ವಿದ್ಯಾರ್ಥಿಗಳು ಡಿಸ್ಟಿಂಗ್ಶನ್, 31 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ 19 ವಿದ್ಯಾರ್ಥಿ ಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಕಾಲೇಜಿಗೆ ಕೀರ್ತಿ ತಂದ ಇವರನ್ನು ಪ್ರಾಚಾರ್ಯರು, ಉಪನ್ಯಾಸಕರು, ಹಾಗೂ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ