ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರು, ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಪಡೆಯಬಹುದು

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಜೆನ್-1 ಉಪ ತಳಿ ಪ್ರಕರಣಗಳಲ್ಲಿ ಹೆಚ್ಚಳವಾದ ಹಿನ್ನೆಲೆಯಲ್ಲಿ ಜನವರಿ 3 ರಿಂದ 60 ವರ್ಷ ಮೇಲ್ಪಟ್ಟವರು ಹಾಗೂ ದೀರ್ಘವ್ಯಾಧಿ (ಕೊಮೊರ್ಬಿಡಿಟಿ) ಬಳಲುತ್ತಿರುವವರು ಜಿಲ್ಲಾ ಆಸ್ವತ್ರೆಗಳಲ್ಲಿ ಲಸಿಕೆ ಪಡೆದುಕೊಳ್ಳಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದ್ದಾರೆ.
ಆದರೆ, ಜೆನ್-1 ಉಪ ತಳಿ ಬಗ್ಗೆ ಜನರು ಭಯಪಡುವ ಅಗತ್ಯವಿಲ್ಲ, ಆದರೆ ವೈರಸ್ ಹರಡುವಿಕೆ ತಡೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಚಿವರು ತಿಳಿಸಿದರು.
ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಮುಖ್ಯಸ್ಥರು ಮತ್ತು ಅದರ ಸದಸ್ಯರು ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ವೈದ್ಯಕೀಯ ಸಂಸ್ಥೆಗಳು, ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಮಂಗಳವಾರ ಸಭೆ ನಡೆಸಿದ ಅವರು ಸದ್ಯದ ಕೋವಿಡ್‌ ಪರಿಸ್ಥಿತಿ ಮತ್ತು ರಾಜ್ಯದಲ್ಲಿ ಕೋವಿಡ್-19 ನಿಭಾಯಿಸಲು ಕೈಗೊಳ್ಳಲಾಗಿರುವ ಸಿದ್ಧತೆಯನ್ನು ಪರಿಶೀಲಿಸಿದರು.

ಸಭೆಯ ನಂತರ ಮಾತನಾಡಿದ ಸಚಿವರು, ಹೊಸ ಲಸಿಕೆಗಳ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ನಿರ್ದೇಶನ ಬಂದಿಲ್ಲ. ಸಾಂಕ್ರಾಮಿಕ ರೋಗದ ಮೊದಲ ಮತ್ತು ಎರಡನೇ ಅಲೆ ವೇಳೆ ನೀಡಲಾದ ಲಸಿಕೆಗಳನ್ನೇ ನೀಡುತ್ತೇವೆ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಜನರು ಮತ್ತು ಕೊಮೊರ್ಬಿಡಿಟಿ ಇರುವವರು ಬುಧವಾರದಿಂದ ಜಿಲ್ಲಾ ಆಸ್ಪತ್ರೆಗಳಲ್ಲಿ ಲಸಿಕೆಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.
ಜೆಎನ್ -1 ರೂಪಾಂತರವು ವೇಗವಾಗಿ ಹರಡುತ್ತದೆ. ಆದರೆ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುವ ಸಾಧ್ಯತೆಯಿಲ್ಲ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಗಾಬರಿಯಾಗಬೇಕಿಲ್ಲ ಎಂದರು.

ಪ್ರಮುಖ ಸುದ್ದಿ :-   ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ 3-4 ದಿನ ಮಳೆ ಬೀಳುವ ಮುನ್ಸೂಚನೆ

ಜೆಎನ್-1 ರೂಪಾಂತರ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುವ ಸಾಧ್ಯತೆಯಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಅನೇಕ ಆರೋಗ್ಯ ತಜ್ಞರು ಹೇಳಿದ್ದರೂ, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಮತ್ತು ಜನರಲ್ಲಿ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ರಾಜ್ಯವು ಕೇಂದ್ರದಿಂದ 30,000 ಕೋವಿಡ್ ಲಸಿಕೆಗಳನ್ನು ಸ್ವೀಕರಿಸಿದೆ ಎಂದು ಸಚಿವರು ಹೇಳಿದರು.
ರಾಜ್ಯದಲ್ಲಿ ಇತ್ತೀಚೆಗೆ ಸಾವನ್ನಪ್ಪಿದ 10 ಜನರ ಸಾವಿಗೆ ಕಾರಣವನ್ನು ವಿವರಿಸಿದ ಡಾ ಪಾಟೀಲ ಅವರು ವಿವಿಧ ಕಾಯಿಲೆಗಳಿಂದ ತೀವ್ರವಾಗಿ ಬಳಲುತ್ತಿದ್ದರು ಎಂದು ಹೇಳಿದರು. ಹಾಗೂ ಸಾವಿಗೆ ಕೋವಿಡ್ ಕಾರಣ ಎಂಬುದನ್ನು ನಿರಾಕರಿಸಿದರು. 10 ಜನರಲ್ಲಿ ಒಂಬತ್ತು ಜನರು ಹೃದಯ, ಮೂತ್ರಪಿಂಡ ಮತ್ತು ಇತರ ಕಾಯಿಲೆಗಳಿಂದ ಬಳಲುತ್ತಿದ್ದರು ಮತ್ತು ಮಂಗಳೂರಿನ ಒಬ್ಬ ವ್ಯಕ್ತಿ ಮದ್ಯವ್ಯಸನಿಯಾಗಿದ್ದು, ಲಸಿಕೆ ಹಾಕಿರಲಿಲ್ಲ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಆಘಾತಕಾರಿ...| ಗಂಡನ ಸಾಲಕ್ಕೆ ಹೆಂಡತಿಯನ್ನು ಒತ್ತೆಯಾಳಾಗಿ ಇರಿಸಿಕೊಂಡ ಬ್ಯಾಂಕ್‌ ; ಹಣದ ಕಂತು ಕೊಟ್ಟ ಬಳಿಕವೇ ಮಹಿಳೆಯ ಬಿಡುಗಡೆ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement