ನೀತಿ ಆಯೋಗದ ಭಾರತ ಆವಿಷ್ಕಾರ ಸೂಚ್ಯಂಕ 2021ರ ಶ್ರೇಯಾಂಕದಲ್ಲಿ ಕರ್ನಾಟಕಕ್ಕೆ ಮೊದಲನೇ ಸ್ಥಾನ

ನವದೆಹಲಿ: ಕರ್ನಾಟಕ, ಮಣಿಪುರ ಮತ್ತು ಚಂಡೀಗಡವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ನೀತಿ (NITI) ಆಯೋಗದ ಶ್ರೇಯಾಂಕದಲ್ಲಿ ಆರ್ಥಿಕ ಬೆಳವಣಿಗೆಯಲ್ಲಿ ನಾವೀನ್ಯತೆ, ವ್ಯಾಪಾರ ಮತ್ತು ಸ್ಪರ್ಧಾತ್ಮಕತೆಯನ್ನು ಉತ್ತೇಜಿಸುವುದು ಮತ್ತು ಇತರ ನಿಯತಾಂಕಗಳಲ್ಲಿ ಅಗ್ರಸ್ಥಾನ ಪಡೆದಿವೆ. ಪ್ರಮುಖ ರಾಜ್ಯಗಳ ವಿಭಾಗದಲ್ಲಿ ಭಾರತ ಆವಿಷ್ಕಾರ ಸೂಚ್ಯಂಕ 2021 ರಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ, ಈಶಾನ್ಯ ಮತ್ತು ಗುಡ್ಡಗಾಡು ರಾಜ್ಯಗಳಲ್ಲಿ ಮಣಿಪುರ … Continued

ಕರ್ನಾಟಕ ಸಾಹಿತ್ಯ ಅಕಾಡೆಮಿ ವಿವಿಧ ಪ್ರಶಸ್ತಿಗಳು ಪ್ರಕಟ: ಜಿನದತ್ತ ದೇಸಾಯಿ, ನಾ.ಮೊಗಸಾಲೆ ಸೇರಿ ಐವರಿಗೆ 2021ನೇ ಸಾಲಿನ ಗೌರವ ಪ್ರಶಸ್ತಿ, ಸಂಪೂರ್ಣ ಪಟ್ಟಿ ಇಲ್ಲಿದೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ 2021ನೇ ಸಾಲಿನ ವರ್ಷದ ಗೌರವ ಪ್ರಶಸ್ತಿ, ಸಾಹಿತ್ಯ ಶ್ರೀ ಹಾಗೂ 2020ನೇ ಸಾಲಿನ ಪುಸ್ತಕ ಬಹುಮಾನ ಮತ್ತು ವಿವಿಧ ದತ್ತಿ ಬಹುಮಾನ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಲಾಗಿದೆ. ವರ್ಷದ ಗೌರವ ಪ್ರಶಸ್ತಿಗೆ ಧಾರಾವಾಡದ ಹಿರಿಯ ಸಾಹಿತಿ ಜಿನದತ್ತ ದೇಸಾಯಿ, ಕಾಸರಗೋಡಿನ ಡಾ. ನಾ.ಮೊಗಸಾಲೆ, ವಿಜಯಪುರದ ಡಾ. ಸರಸ್ವತಿ ಚಿಮ್ಮಲಗಿ, ಬೆಳಗಾವಿಯ ಪ್ರೊ. … Continued

ಕೊಂಕಣಿ ಲೇಖಕ ದಾಮೋದರ ಮೌಜೋ-ಅಸ್ಸಾಮೀ ಲೇಖಕ ನೀಲ್ಮಣಿಗೆ ಜ್ಞಾನಪೀಠ ಪ್ರಶಸ್ತಿ

ನವದೆಹಲಿ: ಅಸ್ಸಾಮಿ ಲೇಖಕ ನೀಲ್ಮಣಿ ಫೂಕನ್ ಅವರಿಗೆ 56ನೇ ಜ್ಞಾನಪೀಠ ಪ್ರಶಸ್ತಿ ಮತ್ತು ಕೊಂಕಣಿ ಸಣ್ಣಕಥೆಗಾರ ಮತ್ತು ಕಾದಂಬರಿಕಾರ ದಾಮೋದರ್ ಮೌಜೊ ಅವರು ಭಾರತೀಯ ಸಾಹಿತ್ಯಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ 57ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಫೂಕನ್ ಅವರಿಗೆ 56ನೇ ಜ್ಞಾನಪೀಠ ಪ್ರಶಸ್ತಿ ಲಭಿಸಿದ್ದು, ಮೌಜೊ ಅವರಿಗೆ 57ನೇ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಪ್ರಶಸ್ತಿ … Continued

ಭಾರತ್‌ ಬಂದ್‌: ಕರ್ನಾಟಕ ವಿವಿ ಪರೀಕ್ಷೆಗಳು ಮುಂದೂಡಿಕೆ

ಧಾರವಾಡ: ರೈತ ಸಂಘಟನೆಗಳು ಸೋಮವಾರ ಭಾರತ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯವು ಸೋಮವಾರ (27-09-2021) ನಡೆಸಬೇಕಿದ್ದ ಸ್ನಾತಕ ಮತ್ತು ಸ್ನಾತಕೋತ್ತರ, ವಿವಿಧ ಸೆಮಿಸ್ಟರ್ ವಿಷಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ನಂತರ ಪ್ರಕಟಿಸಲಾಗುವದು ಎಂದು ಕರ್ನಾಟಕ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎಚ್ ನಾಗರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಸೆಪ್ಟೆಂಬರ್ 15ರ ವರೆಗೂ ಮಳೆ ಜೋರು: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 15ರ ವರೆಗೂ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಖ್ಯವಾಗಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಹೆಚ್ಚು ಮಳೆಯಾಗಲಿದ್ದು,ಈ ಏಳು … Continued