ರೇಖಾತೀತ ಪರಿಣಾಮಗಳು-ಅಸಮ್ಮಿತ ಸಾವಯವ ಸಂಶ್ಲೇಷಣೆಗೆ ಹೆನ್ರಿ ಕಗನ್, ಕೆನ್ಸೊ ಸೋಯಿಗೆ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

ಸ್ಟಾಕ್‌ಹೋಮ್: ರೇಖಾತೀತ ಪರಿಣಾಮಗಳು (non-linear effects) ಮತ್ತು ಅಸಮ್ಮಿತ ಸಾವಯವ ಸಂಶ್ಲೇಷಣೆಯಲ್ಲಿ (asymmetric organic synthesis) ಸ್ವಯಂ-ವೇಗವರ್ಧನೆಯ (autocatalysis) ಕುರಿತು ಮಹತ್ವದ ಸಂಶೋಧನೆ ನಡೆಸಿದ ಹೆನ್ರಿ ಬಿ. ಕಗನ್ ಮತ್ತು ಕೆನ್ಸೊ ಸೋಯಿ ಅವರಿಗೆ ಈ ವರ್ಷದ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಿಸಲಾಗಿದೆ. ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಬುಧವಾರ ಸ್ಟಾಕ್‌ಹೋಮ್‌ನಲ್ಲಿ ರಸಾಯನಶಾಸ್ತ್ರದ ಈ … Continued

ಭಾರಿ ಮಳೆ ಮುನ್ಸೂಚನೆ : ಆಗಸ್ಟ್‌ 1ರಂದು ದಕ್ಷಿಣ ಕನ್ನಡ ಜಿಲ್ಲೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರಿ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ- ಪಿಯು ಕಾಲೇಜುಗಳಿಗೆ ಶನಿವಾರ (ಆಗಸ್ಟ್ 1 ರಂದು) ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯು ಆಗಸ್ಟ್‌ 1ರಂದು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿಯಿಂದ ಹಿಡಿದು ದ್ವಿತೀಯ ಪಿಯು ಕಾಲೇಜಿನ ವರೆಗೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ದಕ್ಷಿಣ … Continued

ಗುರುಪೂರ್ಣಿಮೆ: ಗುರುವಿನ ಮಹತ್ವ ಸಾರುವ ಭಾರತೀಯ ಸಂಸ್ಕೃತಿಯ ಅಮೂಲ್ಯ ಪರಂಪರೆ

(ಇಂದು ಗುರು ಪೂರ್ಣಿಮೆಯನ್ನು (೨೯-೦೭-೨೦೨೬) ಆಚರಿಸಲಾಗುತ್ತಿದ್ದು, ಈ ನಿಮಿತ್ತ ಲೇಖನ) “ಗುರುಬ್ರಹ್ಮ ಗುರುರ್ವಿಷ್ಣು ಗುರುರ್ದೇವೋಃ ಮಹೇಶ್ವರಃ, ಗುರು ಸಾಕ್ಷತಾ ಪರಂ ಬ್ರಹ್ಮಃ ತಸ್ಮೆೈಶ್ರೀ ಗುರುವೇ ನಮಃ” ಎಂದು ಗುರುಗಳನ್ನು ನಿರಂತರವಾಗಿ ನೆನೆಯುತ್ತೇವೆ.  ಭಾರತದಲ್ಲಿ ಗುರು ಪೂರ್ಣಿಮೆಯನ್ನು ಆಧ್ಯಾತ್ಮಿಕ ಅಥವಾ ಶೈಕ್ಷಣಿಕ ಗುರುಗಳ ಗೌರವಾರ್ಥವಾಗಿ, ನಮನ ಸಲ್ಲಿಸಲು ಮತ್ತು ಗೌರವವನ್ನು ತೋರಿಸಲು ಆಚರಿಸಲಾಗುತ್ತದೆ. ಪ್ರಾಚೀನ ಕಾಲದಿಂದಲೂ ಭಾರತದಲ್ಲಿ … Continued

ವ್ಯಾಪಕ ಮಳೆ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆ-ಪಿಯುಸಿ ಕಾಲೇಜುಗಳಿಗೆ ಜುಲೈ 7ರಂದು ರಜೆ ಘೋಷಣೆ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ಅಂಗನವಾಡಿ ಕೇಂದ್ರಗಳು/ಪ್ರಾಥಮಿಕ/ಪ್ರೌಢಶಾಲೆಗಳು ಹಾಗೂ ಪಿಯುಸಿ (12ನೇ ತರಗತಿಯವರೆಗಿನ) ಕಾಲೇಜುಗಳಿಗೆ ಮಂಗಳವಾರ(ಜುಲೈ 7) ರಜೆ ಘೋಷಿಸಲಾಗಿದೆ. ಈ ತಾಲೂಕುಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ನಗರ ಹಾಗೂ … Continued

ಭಾರಿ ಮಳೆ ಮುನ್ಸೂಚನೆ : ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳಿಗೆ ಜುಲೈ 7ರಂದು ರಜೆ ಘೋಷಣೆ

ಶಿರಸಿ: ಭಾರಿ ಮಳೆ ಮುನ್ಸೂಚನೆ ಇರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜುಲೈ 7 (ಮಂಗಳವಾರ)ರಂದು ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಮಂಗಳವಾರ ಹವಾಮಾನ ಇಲಾಖೆಯು ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ರೆಡ್‌ ಅಲರ್ಟ್‌ ಘೋಷಿಸಿದೆ. … Continued

ಕರ್ನಾಟದಲ್ಲಿ ಈವರೆಗೂ ಮುಂಗಾರು ನೀರಸ ; 17 ಜಿಲ್ಲೆಗಳು, 129 ತಾಲೂಕುಗಳಲ್ಲಿ ಮಳೆ ಕೊರತೆ

ಬೆಂಗಳೂರು : ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಕೊರತೆ ಮುಂದುವರಿದಿದ್ದು, ಜೂನ್ 1ರಿಂದ ಜುಲೈ 6ರ ವರೆಗೆ ಮುಂಗಾರು ಮಳೆ ಬಿದ್ದ ಪ್ರಮಾಣ ಗಮಿಸಿದರೆ 31 ಜಿಲ್ಲೆಗಳ ಪೈಕಿ 17 ಜಿಲ್ಲೆಗಳಲ್ಲಿ ಮಳೆ ಕೊರತೆ(Deficit)ಯಾಗಿದೆ. 13 ಜಿಲ್ಲೆಗಳಲ್ಲಿ ಬಹುತೇಕ ವಾಡಿಕೆ (Normal)ಯಷ್ಟು ಮಳೆಯಾಗಿದ್ದರೆ ಒಂದು ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆ ಎದುರಾಗಿದೆ ಎಂದು ಕರ್ನಾಟಕ ರಾಜ್ಯ … Continued

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲಿ ಮಳೆಯಿಲ್ಲದೆ ಕಂಗಾಲಾಗಿಸಿದ ಜೂನ್ ತಿಂಗಳಿಗೆ ಈ ವರ್ಷದ ಜೂನ್‌ ತಿಂಗಳೂ ಸೇರ್ಪಡೆ…!

ನವದೆಹಲಿ: ಭಾರತದಲ್ಲಿ ಈ ವರ್ಷದ (2026) ಮುಂಗಾರು ಆರಂಭದಲ್ಲೇ ತೀವ್ರ ನಿರಾಸೆ ಮೂಡಿಸಿದೆ. ಜೂನ್ ತಿಂಗಳಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಮಳೆಯಾಗಿದ್ದು, ವಾಯುವ್ಯ ಭಾರತದ ಹಲವು ಭಾಗಗಳಿಗೆ ಮುಂಗಾರು ಮಾರುತಗಳ ಆಗಮನ ಮತ್ತಷ್ಟು ವಿಳಂಬವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಮುಂಗಾರಿನ ಪ್ರಗತಿ ತೀವ್ರ ಅಸಮತೋಲನದಿಂದ ಕೂಡಿದ್ದು, ದೇಶದ ಬಹುದೊಡ್ಡ ಭಾಗಗಳು ಇನ್ನೂ ಮಳೆಯ … Continued

ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ (Karnataka SSLC Result 2026) ಗುರುವಾರ (ಏ.23) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in/ ಮತ್ತು ಕರ್ನಾಟಕ ಒನ್‌ ಆ್ಯಪ್‌ (KarnatakaOne Mobile App) ಮೂಲಕ ನೋಡಬಹುದಾಗಿದೆ. ಹಾಗೂ ವಿದ್ಯಾರ್ಥಿಗಳ ನೊಂದಾಯಿತ … Continued

ಕಪ್ಪೆಕೆರೆ ಸೇರಿ ಮೂವರು ಸಾಧಕರು ಯಕ್ಷಮಂಗಳ ಪ್ರಶಸ್ತಿಗೆ ಆಯ್ಕೆ, ಕೃಷ್ಣಪ್ರಕಾಶರಿಗೆ ಕೃತಿ ಪ್ರಶಸ್ತಿ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2025-26ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಭಾಗವತರಾದ ಕಪ್ಪೆಕೆರೆ ಸುಬ್ರಾಯ ಭಾಗವತ, ಯಕ್ಷಗಾನ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹಿರಿಯ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಕೃಷ್ಣಪ್ರಕಾಶ ಉಳಿಯತ್ತಾಯ ಅವರ … Continued

ಟಿ20 ವಿಶ್ವಕಪ್ : ಭಾರತದ ವಿರುದ್ಧದ ಪಂದ್ಯ ಬಹಿಷ್ಕಾರ ; ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮೂರು ಪ್ರಮುಖ ಬೇಡಿಕೆಗಳನ್ನು ತಿರಸ್ಕರಿಸಿದ ಐಸಿಸಿ

ಕೊಲಂಬೊ/ಲಾಹೋರ್: ಫೆಬ್ರವರಿ 15ರಂದು ಶ್ರೀಲಂಕಾದ ಕೊಲಂಬೊದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಆಡಲು ನಿರಾಕರಿಸಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (PCB) ಹಠಮಾರಿ ಧೋರಣೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಬಿಸಿ ಮುಟ್ಟಿಸಿದೆ. ಬಿಕ್ಕಟ್ಟು ಶಮನಗೊಳಿಸಲು ಪಿಸಿಬಿ ಮಂಡಿಸಿದ್ದ ಮೂರು ಪ್ರಮುಖ ಬೇಡಿಕೆಗಳನ್ನು ಐಸಿಸಿ ನೇರವಾಗಿ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಭಾನುವಾರ ಲಾಹೋರ್‌ನಲ್ಲಿ ನಡೆದ … Continued