ತುಂಗಭದ್ರಾ ಜಲಾಶಯದಿಂದ 36,217 ಕ್ಯೂಸೆಕ್ ನೀರು ಬಿಡುಗಡೆ, ಡ್ಯಾಂ ಕೆಳಗಡೆ ಪ್ರದೇಶದಲ್ಲಿ ಪ್ರವಾಹದ ಭೀತಿ

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಗೆ ಕೆಲವೇ ಅಡಿಗಳು ಬಾಕಿ ಇದ್ದು, ಮುಂಜಾಗ್ರತಾ ಕ್ರಮವಾಗಿ ತುಂಗಭದ್ರಾ ಜಲಾಶಯದ 12 ಕ್ರಸ್ಟ್ ಗೇಟ್​​ಗಳ ಮೂಲಕ ಸದ್ಯ 36,217 ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ. ಭಾನುವಾರ ಜಲಾಶಯದಿಂದ ನದಿಗೆ ನೀರು ಬಿಡಲಾಗಿದೆ. ತುಂಗಭದ್ರಾ ಜಲಾಶಯ ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಜೀವನಾಡಿಯಾಗಿದೆ. ಅಪಾರ ಪ್ರಮಾಣದ ನೀರು … Continued