ಮೂರನೇ ಅಲೆ: ವಾರದಲ್ಲಿ ಕಾರ್ಯಪಡೆಯಿಂದ ವರದಿ ಸಲ್ಲಿಕೆ

ಬೆಂಗಳೂರು:ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬುಧವಾರ ಕೋವಿಡ್ 3ನೇ ಅಲೆಗೆ ಸಂಬಂಧಿಸಿದ ಪೂರ್ವ ಸಿದ್ಧತೆ ಕುರಿತಂತೆ ರಚಿಸಲಾಗಿರುವ ಡಾ. ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಕಾರ್ಯಪಡೆಯೊಂದಿಗೆ ಸಭೆ ನಡೆಸಿ, ಚರ್ಚಿಸಿದರು. ಕೋವಿಡ್ 3ನೇ ಅಲೆ ತಡೆಗಟ್ಟಲು ಕೈಗೊಳ್ಳಬೇಕಾಗಿರುವ ಮುಂಜಾಗರೂಕತಾ ಕ್ರಮಗಳು, ಕಲ್ಪಿಸಬೇಕಾದ ಮೂಲಸೌಕರ್ಯ ಹಾಗೂ ಚಿಕಿತ್ಸಾ ಸೌಲಭ್ಯಗಳು, ಅಗತ್ಯವಿರುವ ಮಾನವ ಸಂಪನ್ಮೂಲ, ಔಷಧಗಳು ಮೊದಲಾದ ವಿಷಯಗಳ ಕುರಿತು ಚರ್ಚಿಸಲಾಯಿತು. … Continued