ಉತ್ತರ ಪ್ರದೇಶ ದಲಿತ ಸಹೋದರಿಯರ ಅತ್ಯಾಚಾರ-ಹತ್ಯೆ ಪ್ರಕರಣ: ಒಟ್ಟು 6 ಜನರ ಬಂಧನ, ಎನ್‌ಕೌಂಟರ್‌ನಲ್ಲಿ ಓರ್ವ ಆರೋಪಿ ಬಂಧಿಸಿದ ಪೊಲೀಸರು

ಲಖಿಂಪುರ ಖೇರಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಲಖಿಂಪುರದಲ್ಲಿ 17 ಮತ್ತು 15 ವರ್ಷದ ಇಬ್ಬರು ದಲಿತ ಸಹೋದರಿಯರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಗಂಟೆಗಳ ನಂತರ, ಆರು ಯುವಕರನ್ನು ಅತ್ಯಾಚಾರ ಮತ್ತು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ. ಬಾಲಕಿಯರ ಕತ್ತು ಹಿಸುಕಿ ನಾಲ್ವರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಹೇಲ್, ಜುನೈದ್, ಹಫೀಜುಲ್ … Continued

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ, 6 ಮಂದಿ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು, ಲೈಂಕಿಕ ದೌರ್ಜನ್ಯವೆಸಗಿದ ಆರು ಮಂದಿ ಆರೋಪಿಗಳನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರು ಬಾಲಕರನ್ನೂ ಸಹ ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ವಿಚಾರಣೆ ಮಾಡಿ ತನಿಖೆ ಮುಂದುವರೆಸಿದ್ದಾರೆ. ಸುಮಾರು 15 ವರ್ಷದ ಅಪ್ರಾಪ್ತ ಬಾಲಕಿ 25 ವರ್ಷದ ಯುವಕನನ್ನು ಪ್ರೀತಿಸುತ್ತಿದ್ದಳು. … Continued

ಬೆಂಗಳೂರು: ೩೮ ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ, ಆರು ಜನರ ಬಂಧನ

ಬೆಂಗಳೂರು: ಡ್ರಗ್ಸ್ ಮಾರಾಟ ಹಾಗೂ ಸೇವನೆ ವಿರುದ್ಧ ಸಮರ ಸಾರಿರುವ ಪೊಲೀಸರು ಮೂವರು ಅಂತಾರಾಜ್ಯ ಡ್ರಗ್ ಪೆಡ್ಲರ್‌ಗಳೂ ಸೇರಿದಂತೆ ೬ ಮಂದಿಯನ್ನು ಬಂಧಿಸಿ ೩೮.೪೫ ಕೋಟಿ ರೂ.ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡಿದ್ದಾರೆ. ಬಂಧಿತ ಅಂತಾರಾಜ್ಯ ಮೂವರು ಡ್ರಗ್ಸ್ ಪೆಡ್ಲರ್‌ಗಳಿಂದ ೩೭ ಕೋಟಿ ಮೌಲ್ಯದ ೬.೫ ಕೆಜಿ ಎಂಡಿಎಂಎ, ೩೦೦ ಗ್ರಾಂ ಪ್ರೊಮೊಡಲ್, ೭೫ ಗ್ರಾಂ ಕೊಕೇನ್, ೭೬ … Continued

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಈವರೆಗೆ 6 ಆರೋಪಿಗಳ ಬಂಧನ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್​​ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಕಾಸಿಮ್, ನದೀಮ್ ಎಂಬುವರನ್ನು ಬಂಧಿಸಲಾಗಿತ್ತು, ಉಳಿದ ನಾಲ್ವರು ಆರೋಪಿಗಳನ್ನು ಇಂದು ಬಂಧಿಸಲಾಗಿದೆ. ಬಂಧಿತ ಆರೋಪಿಗಳೆಲ್ಲರೂ ಶಿವಮೊಗ್ಗ ನಗರದ ನಿವಾಸಿಗಳು. … Continued

ಮೈಸೂರು ದರೋಡೆ ಪ್ರಕರಣ: 6 ಮಂದಿ ಬಂಧನ

ಮೈಸೂರು: ನಗರದ ಚಿನ್ನಾಭರಣ ಅಂಗಡಿಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ತಿಳಿಸಿದ್ದಾರೆ. ಇಲ್ಲಿನ ಅಮೃತ್‌ ಜ್ಯುವೆಲರ್ಸ್‌ನಲ್ಲಿ ದರೋಡೆ ನಡೆದಿತ್ತು. ಈ ವೇಳೆ ನಡೆದ ಶೂಟೌಟ್‌ನಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ, … Continued