5, 8, 9ನೇ ತರಗತಿ ಬೋರ್ಡ್‌ ಪರೀಕ್ಷೆ : ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ; ಫಲಿತಾಂಶ ಪ್ರಕಟಿಸಿದಂತೆ ಆದೇಶ

ನವದೆಹಲಿ: 5, 8 ಮತ್ತು 9ನೇ ತರಗತಿ ಬೋರ್ಡ್‌ ಪರೀಕ್ಷೆ ಕುರಿತು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅಲ್ಲದೆ, ಈ ತರಗತಿಗಳ ಬೋರ್ಡ್‌ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಪೀಠ ಆದೇಶಿಸಿದೆ. ಈ ಕುರಿತು ಎರಡು ವಾರಗಳಲ್ಲಿ ಉತ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದೆ. ರಾಜ್ಯ … Continued

ಮದರಸಾಗೆ ತೆರಳುತ್ತಿದ್ದ ಬಾಲಕಿಯನ್ನು ಎತ್ತಿ ನೆಲಕ್ಕೆ ಅಪ್ಪಳಿಸಿದ ಕಿರಾತಕನ ಬಂಧನ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಾಸರಗೋಡು: ಮದರಸಾಕ್ಕೆ ತೆರಳಲು ನಿಂತಿದ್ದ 8ರ ಹರೆಯದ ಬಾಲಕಿಯನ್ನು ಎತ್ತಿ ರಸ್ತೆಗೆ ಎಸೆದ 31 ವರ್ಷದ ವ್ಯಕ್ತಿಯನ್ನು ಈ ಜಿಲ್ಲೆಯ ಮಂಜೇಶ್ವರದಲ್ಲಿ ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಬೆಳಗ್ಗೆ ಎಂಟು ವರ್ಷದ ಬಾಲಕಿ ತನ್ನನ್ನು ಕರೆದುಕೊಂಡು ಹೋಗಲು ಬರುವ ಚಿಕ್ಕಪ್ಪನಿಗಾಗಿ ಮದರಸಾದ ಹೊರಗೆ ಕಾಯುತ್ತಿದ್ದಾಗ ಈ ಭಯಾನಕ ಘಟನೆ ನಡೆದಿದೆ. ಆರೋಪಿ ಸ್ಥಳೀಯ … Continued

ಕನ್ನಡ ಸಾಹಿತ್ಯ ಸಮ್ಮೇಳನ ಮತ್ತೆ ಮುಂದೂಡಿಕೆ: ಈಗ ಹಾವೇರಿಯಲ್ಲಿ ಜನವರಿ 6, 7, 8ಕ್ಕೆ ನಡೆಸಲು ನಿರ್ಧಾರ

ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 6, 7, 8ರಂದು ನಡೆಯಲಿದೆ. ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಚರ್ಚೆ ನಡೆಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲಕುಮಾರ ಅವರು ಈಗ ದಿನಾಂಕ ಅಂತಿಮಗೊಳಿಸಿದ್ದಾರೆ. ಸಮ್ಮೇಳನಕ್ಕೆ 8 ರಿಂದ 10 ಲಕ್ಷ ಜನರು ಸೇರುವ ನಿರೀಕ್ಷೆ ಇದರುವುದರಿಂದ ಅಕ್ಟೋಬರ್‌ 20 ರಂದು ಈ … Continued

ಅಂಬುಲೆನ್ಸ್ ಸಿಗದೆ 2 ವರ್ಷದ ತಮ್ಮನ ಶವ ಮಡಿಲಲ್ಲಿಟ್ಟುಕೊಂಡು ವಾಹನಕ್ಕೆ ಕಾಯುತ್ತ ಕುಳಿತ 8 ವರ್ಷದ ಬಾಲಕ…!

ಭೋಪಾಲ್: ಎಂಟು ವರ್ಷದ ಬಾಲಕನೊಬ್ಬ ತನ್ನ 2 ವರ್ಷದ ತಮ್ಮನ ಶವವನ್ನು ತೊಡೆಯ ಮೇಲೆ ಮಲಗಿಸಿಕೊಂಡು ಕಾಯುತ್ತಾ ಕುಳಿತ ಕರುಣಾಜನಕ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶನಿವಾರ ಮಧ್ಯಪ್ರದೇಶದ ಮೊರೆನಾ ಬೀದಿಯಲ್ಲಿ ಎಂಟು ವರ್ಷದ ಬಾಲಕ ತನ್ನ ಎರಡು ವರ್ಷದ ಕಿರಿಯ ಸಹೋದರನ ಶವದೊಂದಿಗೆ ಕುಳಿತಿರುವ ದೃಶ್ಯ ಕಂಡುಬಂದಿದೆ. ಪೂಜಾರಾಮ್ ಜಾಧವ್ ಎಂಬವರು ತನ್ನ ಕಿರಿಯ ಮಗ … Continued