ತನಗಿಂತ 20 ವರ್ಷ ಕಿರಿಯ ವಯಸ್ಸಿನ ಯುವತಿ ಮದುವೆಯಾಗಿ ಸುದ್ದಿಯಲ್ಲಿದ್ದ ಶಂಕರಣ್ಣ ಆತ್ಮಹತ್ಯೆ

ತುಮಕೂರು: ತನಗಿಂತ 20 ವರ್ಷ ಕಿರಿಯ ವಯಸ್ಸಿನ ಯುವತಿಯನ್ನು ಮದುವೆಯಾಗಿ ಸುದ್ದಿಯಾಗಿದ್ದ ತುಮಕೂರು ಜಿಲ್ಲೆ ಕುಣಿಗಲ್​ ತಾಲೂಕಿನ ಚೌಡನಕುಪ್ಪೆ ಗ್ರಾಮ ಸಮೀಪದ ಅಕ್ಕಿಮರಿಪಾಳ್ಯದ ಶಂಕರಣ್ಣ(45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಣಿಗಲ್​ ತಾಲೂಕಿನ ಚೌಡನಕುಪ್ಪೆ ಗ್ರಾಮದ ಹೊಲವೊಂದರಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಶಂಕರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2021ರ ಅಕ್ಟೋಬರ್​ನಲ್ಲಿ ಸಂತೆಮಾವತ್ತೂರು ಗ್ರಾಮದ ಮೇಘನಾ ಮತ್ತು ಅಕ್ಕಿಮರಿಪಾಳ್ಯದ ಶಂಕರಪ್ಪ ಅವರ ಮದುವೆ … Continued