ಚಂಡೀಗಢ ಮೇಯರ್ ಚುನಾವಣೆ | ಬಿಜೆಪಿ ಅಭ್ಯರ್ಥಿಯ ಅಚ್ಚರಿಯ ಗೆಲುವು ; ಬಹುಮತ ಇದ್ರೂ ಮಂಡಿಯೂರಿದ ಎಎಪಿ-ಕಾಂಗ್ರೆಸ್‌ ಮೈತ್ರಿಕೂಟ…!

ಚಂಡೀಗಢ: ಎಎಪಿ-ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಹುಮತವಿದ್ದರೂ ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು ಸಾಧಿಸಿದೆ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್‌ಪ್ರೀತ್ ಕೌರ್ ಬಬ್ಲಾ ಅವರು ಎಎಪಿಯ ಪ್ರೇಮ್ ಲತಾ ವಿರುದ್ಧ 19 -17 ಮತಗಳಿಂದ ಜಯಗಳಿಸಿದ್ದಾರೆ. ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಎಪಿ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ಪೈಪೋಟಿ ಏರ್ಪಟ್ಟಿತ್ತು. ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್‌ನ ಅಸೆಂಬ್ಲಿ … Continued

ಇಂದು ರಾತ್ರಿ 8 ಗಂಟೆಯೊಳಗೆ ʼಯಮುನಾ ವಿಷ ಮಿಶ್ರಣʼದ ಬಗ್ಗೆ ಪುರಾವೆ ನೀಡಿ: ಕೇಜ್ರಿವಾಲಗೆ ಚುನಾವಣಾ ಆಯೋಗ ಸೂಚನೆ

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಹರಿಯಾಣದ ಬಿಜೆಪಿ ಸರ್ಕಾರವು ಯಮುನಾ ನೀರನ್ನು ವಿಷಪೂರಿತಗೊಳಿಸಿದೆ ಎಂಬ ಎಂದು ಗಂಭೀರ ಆರೋಪ ಮಾಡಿದ್ದು, ಈ ಆರೋಪಕ್ಕೆ ಪುರಾವೆಗಳನ್ನು ಒದಗಿಸುವಂತೆ ಚುನಾವಣಾ ಆಯೋಗವು ಸೂಚಿಸಿದೆ. ಬಿಜೆಪಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ 8 ಗಂಟೆಯೊಳಗೆ ಸಾಕ್ಷ್ಯಾಧಾರಗಳನ್ನು ಪ್ರಸ್ತುಪಡಿಸುವಂತೆ ಸೂಚಿಸಿರುವ ಚುನಾವಣಾ ಆಯೋಗವು, ಇದು … Continued

ರಾಹುಲ್ ಗಾಂಧಿ ವಿರುದ್ಧ ಎಎಪಿಯ ಅವಹೇಳನಕಾರಿ ಪೋಸ್ಟ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್‌

ನವದೆಹಲಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅದರ ದೆಹಲಿಯ ಉನ್ನತ ನಾಯಕತ್ವದ ವಿರುದ್ಧ ಆಮ್ ಆದ್ಮಿ ಪಕ್ಷದ (ಎಎಪಿ) ‘ಅಪ್ರಾಮಾಣಿಕ’ ಎಂದು ಗೇಲಿ ಮಾಡಿ ಪೋಸ್ಟರ್‌ ಅಂಟಿಸಿದ್ದಕ್ಕೆ ಕೆರಳಿರುವ ಕಾಂಗ್ರೆಸ್ ಪಕ್ಷವು ಶನಿವಾರ ಚುನಾವಣೆ ಆಯೋಗ (EC)ಕ್ಕೆ ತನ್ನ ದೂರನ್ನು ದಾಖಲಿಸಿದೆ. ಕಾಂಗ್ರೆಸ್ ನಾಯಕರ ನಿಯೋಗವು ವಕೀಲರ ತಂಡದ ಜೊತೆ … Continued

ಪ್ರಧಾನಿ ಮೋದಿ, ಅಮಿತ್‌ ಶಾ ಅವರ ಎಐ ರಚಿತ ವೀಡಿಯೊ ಪೋಸ್ಟ್‌ ; ಎಎಪಿ ವಿರುದ್ಧ ಎಫ್‌ ಐಆರ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಎಐ-ರಚಿಸಿದ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ … Continued

ಅರವಿಂದ ಕೇಜ್ರಿವಾಲ್‌, ಸಿಸೊಡಿಯಾಗೆ ಹೊಸ ಸಂಕಷ್ಟ ; ದೆಹಲಿ ಮದ್ಯನೀತಿ ಪ್ರಕರಣದಲ್ಲಿ ಇ.ಡಿ.ವಿಚಾರಣೆಗೆ ಕೇಂದ್ರದ ಒಪ್ಪಿಗೆ

ನವದೆಹಲಿ: ದೆಹಲಿ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಹೊಸ ಸಂಕಷ್ಟ ಎದುರಾಗಿದೆ. ಕೇಂದ್ರ ಗೃಹ ಸಚಿವಾಲಯವು ಈಗ ರದ್ದಾಗಿರುವ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿದೆ. … Continued

ಹೀಗಾದ್ರೆ ಇಂಡಿಯಾ ಮೈತ್ರಿಕೂಟ ವಿಸರ್ಜಿಸುವುದು ಒಳಿತು…: ದೆಹಲಿ ಚುನಾವಣೆಯಲ್ಲಿ ಎಎಪಿ-ಕಾಂಗ್ರೆಸ್ ಪ್ರತ್ಯೇಕ ಸ್ಪರ್ಧೆ ಬಗ್ಗೆ ಒಮರ್ ಅಬ್ದುಲ್ಲಾ

ನವದೆಹಲಿ: ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ನಾಯಕತ್ವ ಅಥವಾ ಕಾರ್ಯಸೂಚಿಯ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಮತ್ತು ಕಳೆದ ವರ್ಷ ಸಂಸತ್ತಿನ ಚುನಾವಣೆಗಾಗಿ ಇಂಡಿಯಾ ಮೈತ್ರಿಕೂಟ ರಚಿಸಿದ್ದರೆ ಅದನ್ನು ವಿಸರ್ಜಿಸಬೇಕು ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ಹೇಳಿದ್ದಾರೆ. ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಹೋರಾಟಕ್ಕೆ ಸಾಕ್ಷಿಯಾಗಿರುವ ದೆಹಲಿ ವಿಧಾನಸಭಾ … Continued

ದೆಹಲಿ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ; ಒಂದೇ ಹಂತದಲ್ಲಿ ಮತದಾನ

ನವದೆಹಲಿ: ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗವು ಪ್ರಕಟಿಸಿದ್ದು, ಫೆಬ್ರವರಿ 5 ರಂದು ಒಂದೇ ಹಂತದಲ್ಲಿ ನಡೆಯಲಿದೆ ಎಂದು ಮಂಗಳವಾರ ತಿಳಿಸಿದೆ. ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ಅವರು, “ನಾವು ಶೀಘ್ರದಲ್ಲೇ ಒಂದು ಶತಕೋಟಿ ಮತದಾರರ ಹೊಸ ದಾಖಲೆ ಮಾಡಲಿದ್ದೇವೆ” ಎಂದು ಅವರು … Continued

ವೀಡಿಯೊ..| ಬೆಲ್ಟ್‌ ತೆಗೆದುಕೊಂಡು ತನಗೆ ತಾನೇ ಹೊಡೆದುಕೊಂಡ ಎಎಪಿ ನಾಯಕ…!

ಸೂರತ್‌ : ಆಮ್ ಆದ್ಮಿ ಪಕ್ಷದ ನಾಯಕ ಗೋಪಾಲ ಇಟಾಲಿಯಾ ಅವರು ಸೋಮವಾರ ಗುಜರಾತಿನ ಸೂರತ್‌ನಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಗುಜರಾತಿನಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ ಎಸಗಿದ ವಿವಿಧ ಅಪರಾಧಗಳ ಸಂತ್ರಸ್ತರಿಗೆ “ನ್ಯಾಯ ದೊರಕಿಸಿಕೊಡಲು ವಿಫಲವಾದ” ಕಾರಣದಿಂದ ಪಶ್ಚಾತ್ತಾಪಕ್ಕಾಗಿ ಮತ್ತು ಜನರನ್ನು ನಿದ್ದೆಯಿಂದ ಎಬ್ಬಿಸಲು ತಮಗೆ ತಾವೇ ಬೆಲ್ಟ್‌ನಿಂದ ಹೊಡೆದುಕೊಂಡಿದ್ದಾರೆ. ವೇದಿಕೆಯಲ್ಲಿ ಕ್ಷಮೆ ಕೋರಿದ ಎಎಪಿ … Continued

ವೀಡಿಯೊ..| ತಂದೆಯನ್ನು ಬದಲಾಯಿಸಿದ್ದಾರೆ ಎಂಬ ಬಿಜೆಪಿ ನಾಯಕನ ಹೇಳಿಕೆಗೆ ಉತ್ತರ ನೀಡುವಾಗ ಕಣ್ಣೀರು ಹಾಕಿದ ದೆಹಲಿ ಸಿಎಂ ಅತಿಶಿ

ನವದೆಹಲಿ: ಬಿಜೆಪಿ ನಾಯಕ ರಮೇಶ ಬಿಧುರಿ ಅವರು ಭಾನುವಾರ ಅತಿಶಿ ತಮ್ಮ ತಂದೆಯನ್ನು ಬದಲಾಯಿಸಿದ್ದಾರೆ ಎಂದು ವೈಯಕ್ತಿಕವಾಗಿ ವಾಗ್ದಾಳಿ ನಡೆಸಿದ ನಂತರ ದೆಹಲಿ ಮುಖ್ಯಮಂತ್ರಿ ಅತಿಶಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಕಣ್ಣೀರಾದರು. ರಮೇಶ ಬಿಧುರಿ ತಮ್ಮ ಉಪನಾಮದ (ಅಡ್ಡ ಹೆಸರು) ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ದೆಹಲಿ ಮುಖ್ಯಮಂತ್ರಿ ಅತಿಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲ್ಕಾಜಿ ವಿಧಾನಸಭಾ ಕ್ಷೇತ್ರದ … Continued

ಹಣ ಸುಲಿಗೆ ಪ್ರಕರಣ ; ದೆಹಲಿ ಎಎಪಿ ಶಾಸಕ ನರೇಶ ಬಲ್ಯಾನ್ ಬಂಧನ

ನವದೆಹಲಿ : ಕಳೆದ ವರ್ಷ ದಾಖಲಾದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ನರೇಶ ಬಲ್ಯಾನ್ ಅವರನ್ನು ಶನಿವಾರ ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಉತ್ತಮ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ನರೇಶ ಬಲ್ಯಾನ್ ಅವರನ್ನು ವಿಚಾರಣೆಗಾಗಿ ಆರ್ ಕೆ ಪುರಂನಲ್ಲಿರುವ ದೆಹಲಿ ಪೊಲೀಸರ ಅಪರಾಧ ವಿಭಾಗದ ಕಚೇರಿಗೆ ಕರೆಸಲಾಯಿತು ಮತ್ತು ನಂತರ … Continued