ಅತ್ಯಾಚಾರ ಸಂತ್ರಸ್ತೆಗೆ ೨೬ ವಾರಗಳ ನಂತರ ಗರ್ಭಪಾತ ಸುರಕ್ಷಿತವೇ: ವರದಿ ಕೇಳಿದ ಸುಪ್ರೀಂ ಕೋರ್ಟ್‌

ನವದೆಹಲಿ: ೧೪ ವರ್ಷದ ಅತ್ಯಾಚಾರ ಸಂತ್ರಸ್ತೆಗೆ, ಗರ್ಭಧಾರಣೆಯಾದ 26 ವಾರಗಳ ನಂತರ ಗರ್ಭಪಾತ ಮಾಡುವುದು ಅವಳಿಗೆ ಸುರಕ್ಷಿತವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಹರಿಯಾಣದ ಕರ್ನಾಲ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯು ವೈದ್ಯಕೀಯ ಸಮಿತಿ ರಚಿಸಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬ್ಡೆ, ಎ.ಎಸ್.ಬೋಪಣ್ಣ ಹಾಗೂ ವಿ. ರಾಮಸುಬ್ರಹ್ಮಣಿಯನ್ ಅವರನ್ನೊಳಗೊಂಡ ಪೀಠವು, ಈ ಪ್ರಕರಣಕ್ಕೆ … Continued