ಹುಣಸೂರು: ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ಮೈಸೂರು: ಕೆ ಎಸ್ ಆರ್ ಟಿಸಿ ಬಸ್ ಹಾಗೂ ಜೀಪ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪಿರಿಯಾಪಟ್ಟಣಕ್ಕೆ ಶುಂಠಿ ಕೆಲಸಕ್ಕೆ ಕೂಲಿಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಮತ್ತೊಂದು ವಾಹನವನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ … Continued

ಅಫಜಲಪುರ-ಕಲಬುರಗಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು

ಕಲಬುರಗಿ: ಜೀಪ್​ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆ ಅಫಜಲ​ಪುರ ತಾಲೂಕಿನ ಹೊರವಲಯದ ನೀರಾವರಿ ಕಚೇರಿ ಬಳಿ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಜೀಪ್​ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಸಂತೋಷ (40), ಶಂಕರ (55), … Continued

ಶಿರಸಿ : ಬಂಡಲ ಬಳಿ ಬಸ್‌-ಕಾರು ಡಿಕ್ಕಿ, ಐವರು ಸಾವು

ಶಿರಸಿ: ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಐವರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕುಮಟಾ-ಶಿರಸಿ ಹೆದ್ದಾರಿಯ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಮಂಗಳೂರು ತಾಲೂಕಿನ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಕಾರು ಚಾಲಕ ಚೆನ್ನೈ ಮೂಲದವರು ಎಂದು ಹೇಳಲಾಗಿದೆ. ಮೃತರನ್ನು … Continued

ಸಿಂಧನೂರು : ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರು ಸಾವು

ರಾಯಚೂರು : ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಸಿಂಧನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದೆ. ಮೃತರನ್ನು ಇಸ್ಮಾಯಿಲ್(25), ಚನ್ನಬಸವ (26), ರವಿ(21) ಮತ್ತು ಅಂಬರೀಷ(20) ಎಂದು ಗುರುತಿಸಲಾಗಿದೆ. ಟಾಟಾ ಏಸ್ ವಾಹನದಲ್ಲಿ ಐದು ಮಂದಿ ಸಿಂಧನೂರಿನಿಂದ ಮಸ್ಕಿ ತಾಲೂಕಿನ … Continued

ಬೆಳಗಾವಿ ಬಳಿ ಭೀಕರ ಅಪಘಾತ : ಇಬ್ಬರು ಸಜೀವ ದಹನ

ಬೆಳಗಾವಿ: ದೇವಗಿರಿ ಹಾಗೂ ಬಂಬರಗಾ ಗ್ರಾಮಗಳ ಮಧ್ಯೆ ಇರುವ ಸರ್ಕಲ್ ನಲ್ಲಿ ಟಿಪ್ಪರ್- ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 11 ವರ್ಷದ ಬಾಲಕಿ, 26 ವರ್ಷದ ಯುವಕ ಕಾರಿನಲ್ಲೇ ಸಜೀವ ದಹನವಾಗಿದ್ದಾರೆ. ಬುಧವಾರ ರಾತ್ರಿ 10 : 30 ಗಂಟೆ ಸುಮಾರಿಗೆ ಕಂಗ್ರಾಳಿ ಕೆ.ಎಚ್. ಗ್ರಾಮದ ಕಡೆಯಿಂದ ಸಂಬಂಧಿಕರೊಬ್ಬರ ಮದುವೆ ಮುಗಿಸಿಕೊಂಡು ಕಾರಿನಲ್ಲಿ ಸ್ವಗ್ರಾಮ … Continued

ವೀಡಿಯೊ…| ಅವನ ಬಗ್ಗೆ ಯೋಚನೆ ಮಾಡ್ತೀಯಲ್ಲ, 1.5 ಕೋಟಿ ರೂ. ಗಾಡಿ ಡ್ಯಾಮೇಜ್ ಯಾರ್ ಕೊಡ್ತಾರೆ : ಕಾರಿಗೆ ಗುದ್ದಿದ ಬೈಕ್‌ ಸವಾರನ ಮೇಲೆ ಒದರಾಡಿದ ಭವಾನಿ ರೇವಣ್ಣ

ಮೈಸೂರು: ಕಾರಿಗೆ ಡಿಕ್ಕಿ ಹೊಡೆದ ಬೈಕ್‌ ಸವಾರನ ಮೇಲೆ ಜೆಡಿಎಸ್‌ ನಾಯಕಿ ಭವಾನಿ ರೇವಣ್ಣ ಕೆಂಡಾಮಂಡಲವಾಗಿದ್ದು, ಈ ಕುರಿತ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಭಾನುವಾರ (ಡಿಸೆಂಬರ್‌3) ಮೈಸೂರು ಜಿಲ್ಲೆ ಸಾಲಿಗ್ರಾಮ ಸಮೀಪ ಭವಾನಿ ರೇವಣ್ಣ ಅವರು ಸಂಚರಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕಾರಿನ ಮುಂಭಾಗಕ್ಕೆ … Continued

ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ರಕ್ಷಿಸಿದ ಕ್ರಿಕೆಟಿಗ ಮೊಹಮ್ಮದ್ ಶಮಿ

ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಭಾರತೀಯರ ಮನಗೆದ್ದಿದ್ದ ವೇಗಿ ಮೊಹಮ್ಮದ್ ಶಮಿ ನೈನಿತಾಲ್‌ನಲ್ಲಿ ಅಪಘಾತಕ್ಕೀಡಾದ ವ್ಯಕ್ತಿಯನ್ನು ಕಾಪಾಡಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಶಮಿ ಶನಿವಾರ ತಡರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ವೀಡಿಯೊ ಹಂಚಿಕೊಂಡಿದ್ದಾರೆ. ತಾನು ಮತ್ತು ತನ್ನ ಜೊತೆಗಿದ್ದ ಕೆಲವರು ಜೊತೆಗೂಡಿ ಬೆಟ್ಟದಲ್ಲಿ ಕೆಳಗಿಳಿದು ಅಪಘಾತದಲ್ಲಿ ಬೆಟ್ಟದಿಂದ ಕೆಳಗೆ ಬಿದ್ದಿದ್ದ ಕಾರಿನ … Continued

ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಬಸ್ -ಓಮ್ನಿಬಸ್ ಮಧ್ಯೆ ಡಿಕ್ಕಿ ; ಐವರು ಸಾವು, 60 ಮಂದಿಗೆ ಗಾಯ

ಚೆನ್ನೈ: ಮುಂಜಾನೆ ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ತಮಿಳುನಾಡು ಸರ್ಕಾರಿ ಬಸ್ ಮತ್ತು ಓಮ್ನಿಬಸ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಸಾವಿಗೀಡಾಗಿದ್ದು, ಸುಮಾರು 60 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಓರ್ವ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಗುಡುವಂಚೇರಿಯ ರಿತಿಕಾ (32), ವಾಣಿಯಂಬಾಡಿಯ ಮೊಹಮ್ಮದ್ ಫಿರೋಜ್ (37), ಎಸ್‌ಇಟಿಸಿ ಬಸ್ ಚಾಲಕ ಕೆ.ಎಲುಮಲೈ (47) … Continued

ಚಿತ್ತಾಪುರ : ಭೀಕರ ಅಪಘಾತ, 3 ತಿಂಗಳ ಮಗು ಸೇರಿ ಒಂದೇ ಕುಟುಂಬದ 6 ಮಂದಿ ಸಾವು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ‌ ಸಿಮೆಂಟ್ ತುಂಬಿದ ಟ್ಯಾಂಕರ್ ಹಾಗೂ ಆಟೋ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ನಜ್ಮಾ ಬೇಗಂ (28), ಬಿಬಿ ಫಾತೀಮಾ (12) , ಅಬುಬಕರ್ (4) ಬೀಬಿ ಮರಿಯಮ್ಮ … Continued

ವೀಡಿಯೊ…| ಪ್ಲಾಟ್‌ಫಾರ್ಮ್ ಒಳಗೆ ನುಗ್ಗಿದ ಬಸ್‌ ; ನಿಲ್ದಾಣದಲ್ಲಿದ್ದ ಮೂವರು ಪ್ರಯಾಣಿಕರು ಸಾವು, ಅನೇಕರಿಗೆ ಗಾಯ

ವಿಜಯವಾಡ: ಸೋಮವಾರ (ನವೆಂಬರ್ 6) ವಿಜಯವಾಡ ಬಸ್ ನಿಲ್ದಾಣದಲ್ಲಿ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ಲಾಟ್‌ಫಾರ್ಮ್‌ಗೆ ನುಗ್ಗಿ ಜನರಿಗೆ ಡಿಕ್ಕು ಹೊಡೆದು ಬೀಳಿಸುತ್ತಿರುವ ಆಘಾತಕಾರಿ ಘಟನೆಯ ದೃಶ್ಯವು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಬಸ್‌ನಲ್ಲಿ ಕುಳಿತಿದ್ದ 24 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಈ ಭಯಾನಕ ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ. … Continued