ಕುಮಟಾ: ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೆ ಹೊರಟ ಶಿಕ್ಷಕ ಅಪಘಾತದಲ್ಲಿ ಸಾವು

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಗುಡೆ ಅಂಗಡಿಯ ಪ್ರಾಥಮಿಕ ಶಾಲಾ ಶಿಕ್ಷಕ ಗೋಪಾಲ ಪಟಗಾರ (50) ಅಪಘಾತದಲ್ಲಿ ನಿಧನರಾಗಿದ್ದಾರೆ. ಆಗಸ್ಟ್‌ ೧೫ರಂದು ಮುಂಜಾನೆ 7 ಗಂಟೆಗೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಗುಡೆ ಅಂಗಡಿ ಶಾಲೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಅಘನಾಶನಿ ರಸ್ತೆಯ ಹಳಕಾರ ತಿರುವಿನ ಸಮೀಪ ಬೊಲೆರೊ ವಾಹನ ದ್ವಿಚಕ್ರ ವಾಹನಕ್ಕೆ … Continued

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಸುರಕ್ಷತಾ ಕಾಮಗಾರಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲಿದ್ದು, ನವೆಂಬರ್ ನಂತರ ಕೆಲಸ ಆರಂಭವಾಗಲಿದೆ ಎಂದರು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶನಿವಾರ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಕ್ಸ್ ಪ್ರೆಸ್ ವೇ ನಲ್ಲಿ ಕೆಲವು ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕಿದ್ದು … Continued

ಉಡುಪಿ: ಹಿಂಬದಿ ಡಂಪರ್‌‌ಗೆ ಸಿಲುಕಿದ ಕಾರನ್ನು 2 ಕಿಮೀ ಎಳೆದೊಯ್ದ ಟಿಪ್ಪರ್‌ | ವೀಕ್ಷಿಸಿ

ಉಡುಪಿ : ಟಿಪ್ಪರಿನ ಹಿಂಬದಿಯ ಡಂಪರ್‌‌ಗೆ ಸಿಲುಕಿದ ಸ್ಯಾಂಟ್ರೋ ಕಾರನ್ನು ಕಿಲೋಮೀಟರ್ ದೂರದ ವರೆಗೆ ಟಿಪ್ಪರ್ ಎಳೆದೊಯ್ದ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದೆ. , ಕಾರನ್ನು ಎಳೆದೊಯ್ಯವ ಭಯಾನಕ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಸ್ಯಾಂಟ್ರೋ ಕಾರು ಹಾಗೂ ಬೆಳ್ಮಣ್ಣಿನಿಂದ ಬೈಕಂಪಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್ ನಡುವೆ … Continued

ಅಕ್ಕಲಕೋಟೆ ಬಳಿ ಭೀಕರ ರಸ್ತೆ ಅಪಘಾತ; ಮಗು ಸೇರಿ 6 ಮಂದಿ ಸಾವು

ಕಲಬುರಗಿ: ಆಳಂದ ತಾಲೂಕಿನ ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟೆ ತಾಲೂಕಿನ ಶಿರವಾಳ ವಾಡಿ ಬಳಿ ಕ್ರೂಸರ್ ಮತ್ತು ಸಿಮೆಂಟ್ ಬಲ್ಕರ್ ಲಾರಿ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ 6 ಜನರು ಸಾವಿಗೀಡಾದ ಘಟನೆ ಶುಕ್ರವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಆಳಂದ ತಾಲೂಕಿನ ಅಣೂರು ಗ್ರಾಮದವರು ಎಂದು ಹೇಳಲಾಗಿದೆ. ಅಪಘಾತದ ತೀವ್ರತೆಗೆ … Continued

ಎರಡು ಆಟೋ-ಲಾರಿ ನಡುವೆ ಭೀಕರ ಅಪಘಾತ: ಏಳು ಮಂದಿ ಸಾವು

ವಿಜಯನಗರ : ಎರಡು ಆಟೋ ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಸಾವಿಗೀಡಾದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಸಹ ಗಾಯಗೊಂಡಿದ್ದು, ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಳ್ಳಾರಿಯಿಂದ ತುಂಗಭದ್ರಾ ಡ್ಯಾಮ್​ ಕಡೆಗೆ ಆಟೋ … Continued

ಬೆಳಗಾವಿ: ಕಾಡಸಿದ್ದೇಶ್ವರ ಸ್ವಾಮೀಜಿ ಕಾರು ಅಪಘಾತ, ಇಬ್ಬರ ಸಾವು, ಸ್ವಾಮೀಜಿಗೆ ಗಂಭೀರ ಗಾಯ

ಬೆಳಗಾವಿ : ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಿದ್ದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಶನಿವಾರ ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಆಗಮಿಸುತ್ತಿದ್ದ ಶಿವಾಪುರ ಗ್ರಾಮದ ಮುಪ್ಪಿನ ಕಾಡ ಸಿದ್ದೇಶ್ವರ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗಳ ಕಾರು, ಎರಡು ಲಾರಿಗಳ ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕಾರಲ್ಲಿದ್ದ ಇಬ್ಬರು ಮೃತಪಟ್ಟಿದ್ದು ಸ್ವಾಮೀಜಿ … Continued

ಸಾರಿಗೆ ಬಸ್- ಕಾರು ನಡುವೆ ಭೀಕರ ಅಪಘಾತ: ಇಬ್ಬರು ಮಕ್ಕಳು ಸೇರಿ ಆರು ಮಂದಿ ಸಾವು

ಮಡಿಕೇರಿ: ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಮಾರುತಿ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಜನರು ಮೃತಪಟ್ಟ ಘಟನೆ ಗಡಿ ಗ್ರಾಮವಾದ ಸಂಪಾಜೆಯಲ್ಲಿ ನಡೆದಿದೆ. ಮಡಿಕೇರಿ ತಾಲೂಕಿನ ಸಂಪಾಜೆ ಪೆಟ್ರೋಲ್ ಬಂಕ್ ಬಳಿ ಈ ದುರ್ಘಟನೆ ನಡೆದಿದ್ದು, ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಮಾರುತಿ … Continued

ತುಮಕೂರು : ಭೀಕರ ಅಪಘಾತಕ್ಕೆ ನವದಂಪತಿ ದುರ್ಮರಣ

ತುಮಕೂರು: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತದಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನವದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ಸಂಭವಿಸಿದೆ. ಇಂದು, ಶನಿವಾರ ಮಧ್ಯಾಹ್ನ ಅಪಘಾತ ಸಂಭವಿಸಿದ್ದು, ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಸಾಫ್ಟ್ ವೇರ್ ಟೆಕ್ಕಿ ದಂಪತಿ ಮೃತಪಟ್ಟಿದ್ದಾರೆ. ಮೃತರನ್ನು ಅರಸಿಕೆರೆ ಮೂಲದ ರಘು(35) ಮತ್ತು … Continued

ಬೊಲೆರೊ ಡಿಕ್ಕಿ: ಮೂವರು ಮಹಿಳೆಯರು ಸಾವು

ಕಾರವಾರ : ಭೀಕರ ಅಪಘಾತವೊಂದರಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಸೀತಾವಾಡದಲ್ಲಿ ನಡೆದ ವರದಿಯಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಖಾನಾಪುರದ ಫಾರ್ಲಿಯ ಪಾರ್ವತಿ ಗಾವಡಾ (55), ದುರ್ಗೆ ಕೋಲ್ಸೇಕರ್ (55), ತುಳಸಿ ಗಾವಡಾ (50) ಎಂದು ಗುರುತಿಸಲಾಗಿದೆ. ಬಿಪಿನ್‌ ತಾಳ್ವೆ ಎಂಬ … Continued

ಯಲ್ಲಾಪುರ: ಅಪಘಾತದಲ್ಲಿ ಖ್ಯಾತ ಯಕ್ಷಗಾನ ಭಾಗವತ ತಿಮ್ಮಪ್ಪ ಬಾಳೆಹದ್ದ ನಿಧನ

ಯಲ್ಲಾಪುರ: ಬಡಗುತಿಟ್ಟಿನ ಖ್ಯಾತ ಯಕ್ಷಗಾನ ಭಾಗವತ ತಿಮ್ಮಪ್ಪ  ಬಾಳೆಹದ್ದ (59) ಅವರು ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಯಲ್ಲಾಪುರ ಮಧ್ಯದ ರಾಜ್ಯ ಹೆದ್ದಾರಿಯಲ್ಲಿ ಹಿತ್ಳಳ್ಳಿಯಲ್ಲಿ ಬಳಿ ಸಂಭವಿಸಿದ ಅಪಘಾತದಲ್ಲಿ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಯಕ್ಷಗಾನ ಭಾಗವತಿಕೆ ಹಾಗೂ ಸಂಗೀತಗಾರರೂ ಆಗಿದ್ದ ಯಲ್ಲಾಪುರ ತಾಲ್ಲೂಕಿನ ತಿಮ್ಮಪ್ಪ ಭಾಗವತ ಬಾಳೆಹದ್ದ ಎರಡು ಕಾರುಗಳ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ನಿಧನರಾದರು. ಶಿರಸಿ … Continued