ವೀಡಿಯೊ..| ಆಟವಾಡುತ್ತಿದ್ದ ಮಗುವಿನ ಮೇಲೆ ಕಾರು ಹತ್ತಿಸಿದ ಮಹಿಳೆ, ನಂತರ ಅಲ್ಲಿಂದ ಪರಾರಿ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಹೌಸಿಂಗ್‌ ಸೊಸೈಟಿಯೊಂದರಲ್ಲಿ ಆಟವಾಡುತ್ತಿದ್ದ ಐದು ವರ್ಷದ ಮಗುವಿಗೆ ಕಾರು ಡಿಕ್ಕಿ ಹೊಡೆದು ಅದು ತೀವ್ರವಾಗಿ ಗಾಯಗೊಂಡಿದೆ. ಫೆಬ್ರವರಿ 24 ರಂದು ಸಂಜೆ 4:30 ರ ಸುಮಾರಿಗೆ ಗಾಜಿಯಾಬಾದ್‌ನ ರಾಜೇಂದ್ರ ನಗರ ವಿಸ್ತರಣೆಯಲ್ಲಿರುವ ಎಸ್‌ಜಿ ಗ್ರ್ಯಾಂಡ್ ಸೊಸೈಟಿಯಲ್ಲಿ ಸಂಭವಿಸಿದ ಘಟನೆಯ ನಂತರ ಕಾರು ಚಲಾಯಿಸುತ್ತಿದ್ದ ಮಹಿಳೆ ಸ್ಥಳದಿಂದ ಪರಾರಿಯಾಗಿದ್ದಾಳೆ. ಇಡೀ ಘಟನೆಯು ಸೊಸೈಟಿಯಲ್ಲಿ … Continued

ವೀಡಿಯೊ..| ದ್ವಿಚಕ್ರ ವಾಹನಕ್ಕೆ ವೇಗವಾಗಿ ಡಿಕ್ಕಿ ಹೊಡೆದ ಕಾರು ; ಗಾಳಿಯಲ್ಲಿ ಎಸೆಯಲ್ಪಟ್ಟ ಬೈಕ್‌ ಸವಾರರು

ಆಘಾತಕಾರಿ ಘಟನೆಯೊಂದರಲ್ಲಿ, ಪುಣೆಯ ವಕಾಡ್ ಪ್ರದೇಶದ ಜನನಿಬಿಡ ಮುಂಬೈ-ಪುಣೆ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಇಬ್ಬರು ವ್ಯಕ್ತಿಗಳು ಗಾಳಿಯಲ್ಲಿ ಹಾರಿಹೋಗಿ ಬಿದ್ದಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮತ್ತೊಂದು ಕಾರಿನ ಡ್ಯಾಶ್ ಕ್ಯಾಮ್‌ನಲ್ಲಿ ಈ ಘಟನೆ ಸೆರೆಯಾಗಿದೆ. ದೃಶ್ಯಾವಳಿಗಳ ಪ್ರಕಾರ, ವಕಾಡ್ ಪ್ರದೇಶದ … Continued

ಕುಂಭಮೇಳಕ್ಕೆ​ ತೆರಳುತ್ತಿದ್ದ ​ ವಾಹನ ಅಪಘಾತ: ಗೋಕಾಕದ 6 ಮಂದಿ ಸಾವು

ಬೆಳಗಾವಿ :ಪ್ರಯಾಗರಾಜ್‌ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ(Gokak)ದ ಆರು ಮಂದಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ಜಬಲಪುರ ಪೆಹರಾ‌ ಟೋಲ್ ನಾಕಾ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಗೋಕಾಕ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ‌ ಗೌಡರ (50), ಸುನೀಲ … Continued

ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಕ್ಕೀಡಾದ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಕಾರು

ಕೋಲ್ಕತ್ತಾ : ಭಾರತ ತಂಡದ ಮಾಜಿ ನಾಯಕ ಸೌರವ ಗಂಗೂಲಿ ಗುರುವಾರ (ಫೆಬ್ರವರಿ 20) ರಾತ್ರಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿದೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಅವರು ಪಶ್ಚಿಮ ಬಂಗಾಳದ ಬರ್ದ್ವಾನ್‌ಗೆ ತೆರಳುತ್ತಿದ್ದಾಗ ದಂತನಪುರದ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ನಡೆದಿದೆ. ಅವರ ಕಾರು ಅಪಘಾತಕ್ಕೀಡಾಗಿದ್ದು, ಕಾರು ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಗಂಗೂಲಿ ತಮ್ಮ ರೇಂಜ್ … Continued

ತರಬೇತಿ ವೇಳೆ ಪವರ್‌ಲಿಫ್ಟರ್‌ ಕುತ್ತಿಗೆ ಮೇಲೆ ಬಿದ್ದ 270 ಕೆಜಿ ರಾಡ್; 17 ವರ್ಷದ ಚಿನ್ನದ ಪದಕ ವಿಜೇತ ಅಥ್ಲೀಟ್ ಸಾವು

ಜೈಪುರ : ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ಜೂನಿಯರ್ ರಾಷ್ಟ್ರೀಯ ಕ್ರೀಡಾಕೂಟದ ಚಿನ್ನದ ಪದಕ ವಿಜೇತ ಪವರ್-ಲಿಫ್ಟರ್ ಅಭ್ಯಾಸದ ವೇಳೆ ಕುತ್ತಿಗೆಯ ಮೇಲೆ 270 ಕೆಜಿ ತೂಕದ ರಾಡ್ ಬಿದ್ದಿದ್ದರಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮಹಿಳಾ ಪವರ್‌ಲಿಫ್ಟರ್ ಯಾಷ್ಟಿಕಾ ಆಚಾರ್ಯ (17) ಜಿಮ್‌ನಲ್ಲಿ ಭಾರ ಎತ್ತುವುದನ್ನು ಅಭ್ಯಾಸ ಮಾಡುವ ವೇಳೆ ಸಾವಿಗೀಡಾಗಿದ್ದಾರೆ. ಮಂಗಳವಾರ 270 … Continued

ಯಲ್ಲಾಪುರ | ಅರಬೈಲ್ ಘಟ್ಟದಲ್ಲಿ ಭೀಕರ ಅಪಘಾತ ; ಒಂದೇ ಕುಟುಂಬದ ಮೂವರು ಸಾವು

ಕಾರವಾರ : ಭೀಕರ ಅಪಘಾತದಲ್ಲಿ (Accident) ಒಂದೇ ಕುಟುಂಬದ ಮೂವರು ಸಾವಿಗೀಡಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ (Uttara Kannada) ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಓವರ್​ಟೇಕ್ ಮಾಡುವ ಭರದಲ್ಲಿ ವೇಗದಲ್ಲಿ ಬಂದ ಲಾರಿ ಕಾರಿಗೆ ಗುದ್ದಿದೆ ಎಂದು ಹೇಳಲಾಗಿದೆ. ಲಾರಿ ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿ ಹೋಗಿದೆ.  ಕಾರಿನಲ್ಲಿದ್ದ ಮೂವರು … Continued

ವೀಡಿಯೊ…| 80 ಜನರಿದ್ದ ಡೆಲ್ಟಾ ಏರ್ಲೈನ್ಸ್ ವಿಮಾನ ಲ್ಯಾಂಡಿಂಗ್‌ ಮಾಡುವಾಗ ಪಲ್ಟಿಯಾದ ಕ್ಷಣದ ವೀಡಿಯೊ ವೈರಲ್‌

76 ಪ್ರಯಾಣಿಕರು ಮತ್ತು ನಾಲ್ಕು ಸಿಬ್ಬಂದಿ ಸೇರಿ 80 ಜನರನ್ನು ಹೊತ್ತ ಡೆಲ್ಟಾ ಏರ್ಲೈನ್ಸ್ ವಿಮಾನವು ಟೊರೊಂಟೊದ ಪಿಯರ್ಸನ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಗುವಾಗ ಪಲ್ಟಿ ಹೊಡೆಯಿತು. ಅದು ಇಳಿಯಲು ಪ್ರಯತ್ನಿಸುತ್ತಿರುವಾಗ, ವಿಮಾನವು ಪಲ್ಟಿಯಾಗಿದ್ದು, ಅದೃಷ್ವಶಾತ್‌. ಎಲ್ಲಾ ಪ್ರಯಾಣಿಕರು ಬದುಕುಳಿದಿದ್ದಾರೆ. ಆದರೂ 18 ಮಂದಿ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವಿಮಾನವು ಮಿನ್ನಿಯಾಪೋಲಿಸ್‌ನಿಂದ ಹೊರಟಿತು … Continued

ಬೆಚ್ಚಿಬೀಳಿಸುವ ವೀಡಿಯೊ…| ಕಾರಿಗೆ ಬೈಕ್ ಡಿಕ್ಕಿ ಹೊಡೆದ ನಂತರ ಗಾಳಿಯಲ್ಲಿ ಎಸೆಯಲ್ಪಟ್ಟ ಬೈಕ್‌ ಸವಾರ….!

ಲಕ್ನೋ : ಲಕ್ನೋದ ಇಂದಿರಾ ನಗರದಲ್ಲಿ ಸಂಭವಿಸಿದ ಬೆಚ್ಚಿಬೀಳುವ ಘಟನೆಯೊಂದರ ಸಿಸಿಟಿವಿ ದೃಶ್ಯಾವಳಿಗಳುವೈರಲ್ ಆಗಿದ್ದು, ಕಾರು ಹಾಗೂ ಮೋಟರ್‌ ಸೈಕಲ್‌ ಡಿಕ್ಕಿಯ ಸಮಯದಲ್ಲಿ ಮೋಟಾರ್‌ ಸೈಕ್ಲಿಸ್ಟ್‌ ಗಾಳಿಯಲ್ಲಿ ಹಾರಿಬಿದ್ದ ದೃಶ್ಯ ಸೆರೆಯಾಗಿದೆ. ಲಕ್ನೋದ ಇಂದಿರಾ ನಗರದ ಸೆಕ್ಟರ್ 13 ರಲ್ಲಿನ ತಿರುವಿನಲ್ಲಿ ರಾಪಿಡೊ ಚಾಲಕನು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ನಂತರ ಗಾಳಿಯಲ್ಲಿ ಚಿಮ್ಮಿ ನಂತರ … Continued

ವೀಡಿಯೊ…| ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಭೀಕರ ಅಪಘಾತ : ಒಂದರ ಮೇಲೆ ಏರಿ ನಿಂತ ಮತ್ತೊಂದು ಕಾರು…!

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Expressway) ಸಿನಿಮೀಯ ರೀತಿಯಲ್ಲಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕಣ್ವ ರಸ್ತೆ ಬಳಿ ನಡೆದಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಸ್ವಚ್ಛಗೊಳಿಸುವ ವೇಳೆ ಈ ಅಪಘಾತ ಸಂಭವಿಸಿದೆ. ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರಿನ ಚಾಲಕ ಬ್ಯಾರಿಕೇಡ್ ಗಮನಿಸಲಿಲ್ಲ. ಕೊನೆ ಕ್ಷಣದಲ್ಲಿ ಒಮ್ಮೆಲೇ ಬ್ರೇಕ್ … Continued

ಪಟಿಯಾಲ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ರೈತ ಮುಖಂಡ ಕುರುಬೂರು ಶಾಂತಕುಮಾರ ಬೆಂಗಳೂರಿಗೆ ಏರ್‌ಲಿಫ್ಟ್‌

ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ ಅವರನ್ನು ಭಾನುವಾರ ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.‌ ಚಿಕಿತ್ಸೆಗಾಗಿ ಶಾಂತಕುಮಾರ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಕುರುಬೂರು ಶಾಂತಕುಮಾರ ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. … Continued