ಅಡಿಕೆ ಬೇಯಿಸುವಾಗ ಹಂಡೆಗೆ ಬಿದ್ದಿದ್ದ ವ್ಯಕ್ತಿ ಸಾವು
ಶಿವಮೊಗ್ಗ: ಅಡಿಕೆ ಬೇಯಿಸುವ ವೇಳೆ ಆಕಸ್ಮಿಕವಾಗಿ ಕುದಿಯುತ್ತಿದ್ದ ಚೊಗರಿನ ಹಂಡೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ನಗರದ ವಡ್ಡಿನಕೊಪ್ಪದ ನಿವಾಸಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ರುದ್ರಪ್ಪ ಅವರ ಪುತ್ರ ಜೇನುಕುಮಾರ ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 8ರಂದು ಮನೆ ಸಮೀಪದ ಶೆಡ್‌ನಲ್ಲಿ ಅಡಿಕೆ ಬೇಯಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಂದ ಅಡಿಕೆಯನ್ನು ಹಂಡೆಯಿಂದ ಹೊರತೆಗೆದ ಬಳಿಕ … Continued