ವೀಡಿಯೊ | ನಾನೇಕೆ ಸ್ಫೋಟಿಸಿದ್ದೇನೆಂದರೆ, ಅವರು..: ಕೊಚ್ಚಿ ತ್ರಿವಳಿ ಸ್ಫೋಟಕ್ಕೆ ಹೊಣೆ ಹೊತ್ತ ಮಾರ್ಟಿನ್ ಎಂಬಾತನಿಂದ ವೀಡಿಯೊ ಬಿಡುಗಡೆ

ತಿರುವನಂತಪುರ: ಕೊಚ್ಚಿಯ ಕಲಮಸ್ಸೇರಿ ಕ್ರಿಶ್ಚಿಯನ್ ಧಾರ್ಮಿಕ ಸಮಾವೇಶದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ಸ್ಫೋಟ ಮಾಡಿದ ಹೊಣೆ ಹೊತ್ತಿದ್ದು, ಈ ಸಂಬಂಧ ವೀಡಿಯೊ ಬಿಡುಗಡೆ ಮಾಡಿದ್ದಾನೆ. ಡೊಮಿನಿಕ್ ಮಾರ್ಟಿನ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬ ಸರಣಿ ಸ್ಫೋಟದ ಹೊಣೆ ಹೊತ್ತುಕೊಂಡು ಪೊಲೀಸರ ಮುಂದೆ ಶರಣಾಗಿದ್ದಾನೆ. ಹಲವಾರು ಟಿವಿ ಚಾನೆಲ್‌ಗಳಲ್ಲಿ ಪ್ರಸಾರವಾದ ವೀಡಿಯೊ ಪ್ರಕಾರ, … Continued

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿ ಬಂಧನ

ಬೆಂಗಳೂರು : ರಾಜ್ಯದ ಕೆಲವು ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಕೇಂದ್ರ ಅಪರಾಧ ಪತ್ತೆದಳ (ಸಿಸಿಬಿ) ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದೆ. ದಾವಣಗೆರೆಯ ಶಿವಾಜಿರಾವ್ ಜಾಧವ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಈತ ಹಿಂದೂ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ ಎನ್ನಲಾಗಿದ್ದು, ಕಳೆದ ಎರಡು ವರ್ಷಗಳಿಂದ ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಈತನ … Continued

ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಸಂತೋಷ ರಾವ್‌ ಖುಲಾಸೆಗೊಳಿಸಿದ ನ್ಯಾಯಾಲಯ

ಬೆಂಗಳೂರು: ರಾಜ್ಯದಾದ್ಯಂತ ಸಂಚಲನ ಮೂಡಿಸಿದ್ದ ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಸಂತೋಷ್‌ ರಾವ್‌ ಅವರನ್ನು ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. ಸಿಆರ್‌ಪಿಸಿ ಸೆಕ್ಷನ್‌ 235(1)ರ ಅಡಿ ಆರೋಪಿ ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಲಾಗಿದೆ ಎಂದು 50ನೇ ಹೆಚ್ಚುವರಿ ಸತ್ರ ನ್ಯಾಯಾಧೀಶರಾದ ಸಿ ಬಿ ಸಂತೋಷ … Continued