ಕಾಂಗ್ರೆಸ್‌ ನಾಯಕ ಅಧೀರ್‌ ಹೇಳಿಕೆ ತಿರಸ್ಕರಿಸಿದ ನಂತರ ಪಶ್ಚಿಮ ಬಂಗಾಳ ಕಾಂಗ್ರೆಸ್ ಕಚೇರಿ ಮುಂದಿನ ಮಲ್ಲಿಕಾರ್ಜುನ ಖರ್ಗೆ ಪೋಸ್ಟರ್‌ಗಳಿಗೆ ಮಸಿ

ಕೋಲ್ಕತ್ತಾ : ಇಂಡಿಯಾ ಮೈತ್ರಿಕೂಟಕ್ಕೆ ಮಮತಾ ಬ್ಯಾನರ್ಜಿ ಅವರು ಸೇರುವ ಬಗ್ಗೆ ಅಧೀರ್ ರಂಜನ್ ಚೌಧರಿ ಅವರು ನಿರ್ಧಾರ ತೆಗೆದುಕೊಳ್ಳುವವರಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ವಿರೋಧಿಸಿ ಖರ್ಗೆಯವರ ಚಿತ್ರಕ್ಕೆ ಕೋಲ್ಕತ್ತಾದಲ್ಲಿ ಮಸಿ ಬಳಿಯಲಾಗಿದೆ. ಕೋಲ್ಕತ್ತಾದಲ್ಲಿನ ಕಾಂಗ್ರೆಸ್ ರಾಜ್ಯ ಕಚೇರಿಯ ಮುಂಭಾಗದಲ್ಲಿದ್ದ ಹಲವು ಪೋಸ್ಟರ್ ಗಳಲ್ಲಿನ ಖರ್ಗೆ ಭಾವಚಿತ್ರಕ್ಕೆ ಮಸಿ ಬಳಿಯಲಾಗಿದೆ. … Continued

ವೀಡಿಯೊ…| ‘ತೃಣಮೂಲ ಕಾಂಗ್ರೆಸ್ಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ’ ಎಂದ ಕಾಂಗ್ರೆಸ್‌ ಹಿರಿಯ ನಾಯಕ…! ಟಿಎಂಸಿ ಕೆಂಡ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರು, ತೃಣಮೂಲ ಕಾಂಗ್ರೆಸ್‌ಗೆ ಮತ ಹಾಕುವುದಕ್ಕಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ ಎಂದು ಬುಧವಾರ ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬುಧವಾರ ಬಹರಂಪುರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಧೀರ್ ರಂಜನ್ ಚೌಧರಿ ಅವರು ಟಿಎಂಸಿಗಿಂತ ಬಿಜೆಪಿಗೆ ಮತ ಹಾಕುವುದು … Continued

ಭಾರತ ಜೋಡೋ ನ್ಯಾಯ ಯಾತ್ರೆ : ಪಶ್ಚಿಮ ಬಂಗಾಳದಲ್ಲಿ ರ್ಯಾಲಿಗಳಿಗೆ ಅನುಮತಿ ನಿರಾಕರಣೆ-ಕಾಂಗ್ರೆಸ್ ಆರೋಪ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಭಾರತ ಜೋಡೊ ನ್ಯಾಯಯಾತ್ರೆಯ ಭಾಗವಾಗಿ ಕೆಲವು ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ಅನುಮತಿ ಕೋರಿದ್ದ ಕಾಂಗ್ರೆಸ್‌ಗೆ ಈಗ ಾನುಮತಿ ಪಡೆಯಲು ಸಮಸ್ಯೆಗಳು ಎದುರಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್‌ ಚೌಧರಿ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪಕ್ಷವು ಕೆಲವು ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ಬಯಸಿದೆ, … Continued