ಅಮೆರಿಕದ ವಾಯು ಸಂಚಾರ ವ್ಯವಸ್ಥೆಯಲ್ಲಿ ಭಾರೀ ತಾಂತ್ರಿಕ ದೋಷ : 11 ಸಾವಿರಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತ !
ವಾಷಿಂಗ್ಟನ್: ಅಮೆರಿಕದ ವಾಯು ಸಂಚಾರ ನಿಯಂತ್ರಣ (air traffic control) ವ್ಯವಸ್ಥೆಯಲ್ಲಿನ ಸಂವಹನ ವೈಫಲ್ಯದಿಂದಾಗಿ ದೇಶಾದ್ಯಂತ ವಿಮಾನಗಳ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, 11,000ಕ್ಕೂ ಹೆಚ್ಚು ವಿಮಾನಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ. ಶುಕ್ರವಾರ ಮಧ್ಯಾಹ್ನ ಅಮೆರಿಕದ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (FAA) ದೇಶದಾದ್ಯಂತ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಆದೇಶಿಸಿತ್ತು. ಇದರಿಂದ ಲಕ್ಷಾಂತರ ಪ್ರಯಾಣಿಕರು … Continued