ಜಲ ವಿವಾದಗಳ ಕುರಿತು ನಡೆದ ಸರ್ವಪಕ್ಷ ಸಭೆ : ಕಾನೂನು ಹೋರಾಟಕ್ಕೆ ವಿಪಕ್ಷಗಳ ಬೆಂಬಲ

ಬೆಂಗಳೂರು : ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಜಲ ವಿವಾದಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ರಾಜ್ಯ ಸರ್ಕಾರದ ಕಾನೂನು ಹೋರಾಟಕ್ಕೆ ವಿಪಕ್ಷಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ. ರಾಜಕೀಯ ಒತ್ತಡಕ್ಕಾಗಿ ಕೇಂದ್ರದ ಬಳಿಗೆ ಸರ್ವಪಕ್ಷದ ನಿಯೋಗವನ್ನು ಕರೆದುಕೊಂಡು ಹೋಗಲು ಸಹಕಾರ ನೀಡುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. … Continued

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಪ್ರತಿಪಕ್ಷದ ನಾಯಕರ ಜೊತೆ ಚರ್ಚಿಸಿ ಸರ್ವಪಕ್ಷಗಳ ಸಭೆ ನಿಗದಿ-ಸಿಎಂ ಬೊಮ್ಮಾಯಿ

ಬೆಂಗಳೂರು: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಕಾನೂನಿನ ಸಮರಕ್ಕೆ ಎಲ್ಲ ರೀತಿಯಲ್ಲಿ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಭಾನುವಾರ ಮುಖ್ಯಮಂತ್ರಿ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ಇದೇ 30 ರಂದು ವಿಚಾರಣೆಗೆ ಬರಲಿರುವ ಗಡಿ ವಿಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ನ್ಯಾಯಮೂರ್ತಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. 2004 … Continued

ಜಿಪಂ, ತಾಪಂ ಚುನಾವಣಾ ಮೀಸಲಾತಿ: ಮಾ.31ರಂದು ಸರ್ವ ಪಕ್ಷಗಳ ಸಭೆ

ಬೆಂಗಳೂರು: ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ರಾಜಕೀಯ ಮೀಸಲಾತಿ ನಿರಾಕರಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಬಗ್ಗೆ ಮಾರ್ಚ್‌ 31 ರಂದು ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿಧಾನಸಭೆಗೆ ಸೋಮವಾರ ತಿಳಿಸಿದರು. … Continued

ಕೊರೊನಾ ಉಲ್ಬಣ: ನಾಳೆ ಮಹತ್ವದ ಸರ್ವಪಕ್ಷ ಸಭೆ

ಬೆಂಗಳೂರು: ಕೊರೊನಾ ಮಹಾಮಾರಿ ರಣಕೇಕೆ ಹಾಕುತ್ತಿರುವ ಹಿನ್ನೆಲೆ ಯಲ್ಲಿ ಕಂಡುಕೊಳ್ಳಬೇಕಾದ ಮಾರ್ಗೋಪಾಯದ ಕುರಿತಾಗಿಮಂಗಳವಾರ (ಏ.೨೦)ಮಹತ್ವದ ಸರ್ವಪಕ್ಷ ಸಭೆ ನಡೆಯಲಿದೆ. ಈ ಸಭೆ ವರ್ಚ್ಯುಲ್ ಮೂಲಕ ನಡೆಯಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಆರ್.ಅಶೋಕ್, ಡಾ.ಕೆ.ಸುಧಾಕರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸರ್ಕಾರದ … Continued

ಪರಿಸ್ಥಿತಿ ಕೈಮೀರಿದ ಮೇಲೆ ಸರ್ವಪಕ್ಷಗಳ ಸಭೆ ಕರೆದ ಸಿಎಂ; ಡಿಕೆಶಿ ಟೀಕೆ

ಬೆಂಗಳೂರು: ಕೋವಿಡ್ ಚರ್ಚೆಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಸರ್ವಪಕ್ಷ ಸಭೆ ಕರೆದಿರುವುದು ದೊಡ್ಡ ವಿಚಾರವೇನಲ್ಲ. ಈಗ ಸಮಯ ಮೀರಿ ಹೋದ ಮೇಲೆ ಮುಖ್ಯಮಂತ್ರಿಗಳು ಸರ್ವಪಕ್ಷ ನಾಯಕರ ಸಭೆ ಕರೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸಭೆ ಎನ್ನುವುದು ವೈಯಕ್ತಿಕ ವಿಚಾರವಲ್ಲ. ಇದು ರಾಜ್ಯ ವಿಚಾರ. ಸರ್ಕಾರ … Continued

ಕೊರೊನಾ ಉಲ್ಬಣ: ಸರ್ವಪಕ್ಷಗಳ ಸಭೆ ಕರೆದ ಸಿಎಂ, ಲಾಕ್‌ಡೌನ್‌ ಆಗುತ್ತಾ..?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಕೊರೊನಾ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ವಪಕ್ಷ ಸಭೆ ಕರೆಯಲಾಗುವುದು. ಏಪ್ರಿಲ್ 18, 19ರಂದು ಸಭೆ ಕರೆದು ಚರ್ಚಿಸಲಾಗುವುದು ಎಂದು ತಿಳಿಸಿದರು.ರಾಜ್ಯದಲ್ಲಿ ಕೊರೊನಾ ಸೋಂಕು … Continued