‘ಬ್ರಿಟಿಷ್ ಪ್ರಜೆ’ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ರಕ್ಷಣೆ : ಪ್ರಧಾನಿ ಮೋದಿ, ಅಮಿತ್ ಶಾಗೆ ʼಕಾನೂನು ಕ್ರಮʼದ ಎಚ್ಚರಿಕೆ ನೀಡಿದ ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುಬ್ರಮಣಿಯನ್ ಸ್ವಾಮಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅವರಿಬ್ಬರು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ರಕ್ಷಿಸುತ್ತಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. … Continued

ಪ್ರತಿವರ್ಷ ಜೂನ್ 25ರಂದು ʼಸಂವಿಧಾನ ಹತ್ಯಾ ದಿವಸʼ ಆಚರಣೆ; ಅಮಿತ್ ಶಾ ಘೋಷಣೆ

ನವದೆಹಲಿ : ತುರ್ತು ಪರಿಸ್ಥಿತಿಯ ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೇಂದ್ರ ಸರ್ಕಾರ, ಜೂನ್ 25 ಅನ್ನು ಪ್ರತಿ ವರ್ಷ ‘ಸಂವಿಧಾನ ಹತ್ಯಾ ದಿವಸ’ ಎಂದು ಆಚರಿಸಲಾಗುವುದು ಎಂದು ಶುಕ್ರವಾರ ಪ್ರಕಟಿಸಿದೆ. X ನಲ್ಲಿ ಈ ಬಗ್ಗೆ ಪ್ರಕಟಿಸಿರುವ ಗೃಹ ಸಚಿವ ಅಮಿತ್ ಶಾ ಅವರು ಗೆಜೆಟ್ ಅಧಿಸೂಚನೆಯನ್ನು ಪೋಸ್ಟ್ ಮಾಡಿದ್ದಾರೆ. “ಜೂನ್ 25, … Continued

ಎನ್​ ಡಿ ಎ ನಾಯಕರಾಗಿ ಪ್ರಧಾನಿ ಮೋದಿ ಸರ್ವಾನುಮತದಿಂದ ಆಯ್ಕೆ : ನಾಯ್ಡು, ನಿತೀಶ ಸೇರಿ ಎನ್‌ಡಿಎ ಪಕ್ಷಗಳ ನಾಯಕರಿಂದ ಲಿಖಿತ ಬೆಂಬಲ ಪತ್ರ

ನವದೆಹಲಿ: ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಪ್ರಮುಖ ಪಕ್ಷಗಳಾದ ಟಿಡಿಪಿ, ಜೆಡಿಯು ಸೇರಿದಂತೆ ಮಿತ್ರಪಕ್ಷಗಳು ಅವರ ನಾಯಕತ್ವಕ್ಕೆ ತಮ್ಮ ಲಿಖಿತ ಬೆಂಬಲದ ಪತ್ರ ನೀಡಿವೆ. ಹೊಸ ಸರ್ಕಾರ ರಚನೆಗೆ ಜೂನ್​ 7ರಂದು ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಹಕ್ಕು ಮಂಡಿಸಲಿದೆ. ಶನಿವಾರ (ಜೂನ್​ 8ರಂದು) ಹೊಸ ಸರ್ಕಾರ ರಚನೆಯಾಗಿ ನರೇಂದ್ರ … Continued

ಅಮಿತ್ ಶಾ ವೀಡಿಯೊ ತಿರುಚಿದ ಆರೋಪ: ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಸಿಎಂಗೆ ಸಮನ್ಸ್

ನವದೆಹಲಿ : ಗೃಹ ಸಚಿವ ಅಮಿತ್‌ ಶಾ ಅವರ ತಿರುಚಿದ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಅವರಿಗೆ ದೆಹಲಿ ಪೊಲೀಸರು ಬುಧವಾರ ಸಮನ್ಸ್‌ ಜಾರಿ ಮಾಡಿದ್ದಾರೆ. ತೆ ಲಂಗಾಣ ಮೂಲದ ಇತರ ನಾಲ್ವರಿಗೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಸಮನ್ಸ್ ಅನ್ನು ನಿರಾಕರಿಸಿದ ರೇವಂತ ರೆಡ್ಡಿ, ದೆಹಲಿ ಪೊಲೀಸರು “ಬಿಜೆಪಿಗೆ … Continued

ದೆಹಲಿಗೆ ಹೋದರೂ ಈಶ್ವರಪ್ಪ ಭೇಟಿಯಾಗದ ಅಮಿತ್‌ ಶಾ….!

ಬೆಂಗಳೂರು: ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಅವರು ಆಹ್ವಾನದ ಮೇರೆಗೆ ಬುಧವಾರ ದೆಹಲಿಗೆ ತೆರಳಿದರೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಲು ಸಾಧ್ಯವಾಗದೆ ವಾಪಸ್‌ ಬಂದಿದ್ದಾರೆ. ಮಂಗಳವಾರ ದೂರವಾಣಿ ಕರೆ ಮಾಡಿದ್ದ ಅಮಿತ್‌ ಶಾ ಅವರು ತಮಗೆ ಬುಧವಾರ ದೆಹಲಿಗೆ ಬರುವಂತೆ ಸೂಚಿಸಿದ್ದರು ಎಂಬುದಾಗಿ ಈಶ್ವರಪ್ಪ ಹೇಳಿದ್ದರು. … Continued

ಶಿವಮೊಗ್ಗದಲ್ಲಿ ಬಂಡಾಯ : ಈಶ್ವರಪ್ಪಗೆ ಅಮಿತ್ ಶಾ ಕರೆ, ದೆಹಲಿಗೆ ಬುಲಾವ್‌ ; ಈಶ್ವರಪ್ಪ ಮುಂದಿನ ನಡೆ ಏನು..?

ಬೆಂಗಳೂರು : ಯಡಿಯೂರಪ್ಪ ವಿರುದ್ಧ ತಿರುಗಿಬಿದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯವಾಗಿ ಸ್ಪರ್ಧಿಸಲು ಮುಂದಾಗಿರುವ ಕೆ.ಎಸ್‌. ಈಶ್ವರಪ್ಪ ಅವರಿಗೆ ಕೇಂದ್ರ ಸಚಿವ ಅಮಿತ್ ಶಾ ಅವರು ಕರೆ ಮಾಡಿದ್ದು, ನಾಳೆ (ಏಪ್ರಿಲ್‌ ೩) ಈಶ್ವರಪ್ಪ ಅವರನ್ನು ದೆಹಲಿಗೆ ಬುಲಾವ್‌ ಮಾಡಿದ್ದಾರೆ. ಹೀಗಾಗಿ ಈಶ್ವರಪ್ಪ ದೆಹಲಿಗೆ ತೆರಳಲಿದ್ದಾರೆ. ಮಗ ಕಾಂತೇಶ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ … Continued

ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್

ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಗೂಂಡಾ, ರೌಡಿ ಎಂದು ಕರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಚುನಾವಣಾ ಆಯೋಗ ನೋಟಿಸ್‌ ಜಾರಿ ಮಾಡಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಶಿಲ್ಪಾ ನಾಗ್‌ ನೋಟಿಸ್‌ ಜಾರಿ ಮಾಡಿದ್ದಾರೆ. … Continued

ಸಿಎಎ ಕಾನೂನಿನ ಅಡಿ ಮುಸ್ಲಿಮರು ಯಾಕೆ ಪೌರತ್ವಕ್ಕೆ ಅರ್ಹರಲ್ಲ? : ವಿವರಣೆ ನೀಡಿದ ಅಮಿತ್‌ ಶಾ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನದ ಸುತ್ತಲಿನ ವಿವಾದದ ಮಧ್ಯೆ, ಗೃಹ ಸಚಿವ ಅಮಿತ್ ಶಾ ಪ್ರಮುಖ ಪ್ರಶ್ನೆಗೆ ಇಂದು ಗುರುವಾರ ಉತ್ತರಿಸಿದ್ದಾರೆ. ಪಾರ್ಸಿಗಳು ಮತ್ತು ಕ್ರೈಸ್ತರು ಸಿಎಎ ಅಡಿಯಲ್ಲಿ ಏಕೆ ಅರ್ಹರು, ಆದರೆ ಮುಸ್ಲಿಮರುಯಾಕೆ ಅರ್ಹರಲ್ಲ? ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯು ಡಿಸೆಂಬರ್ 31, 2014 ರ ಮೊದಲು … Continued

ಫೆ. 11ರಂದು ಮೈಸೂರಿಗೆ ಅಮಿತ್ ಶಾ ಭೇಟಿ

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಫೆ.11 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರ (ಫೆಬ್ರವರಿ 10) ಮೈಸೂರಿಗೆ ಆಗಮಿಸಲಿದ್ದಾರೆ. ಭಾನುವಾರ ರಾತ್ರಿ 10:50 ಗಂಟೆಗೆ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ರಸ್ತೆ ಮಾರ್ಗವಾಗಿ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಫೆಬ್ರವರಿ 11 ರಂದು ಬೆಳಿಗ್ಗೆ 11 … Continued

ಲೋಕಸಭೆ ಚುನಾವಣೆಗೂ ಮುನ್ನವೇ ಸಿಎಎ ಜಾರಿ : ಅಮಿತ್ ಶಾ

ನವದೆಹಲಿ : 2019 ರಲ್ಲಿ ಜಾರಿಗೊಳಿಸಲಾದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಈ ಸಂಬಂಧ ನಿಯಮಗಳನ್ನು ಹೊರಡಿಸಿದ ನಂತರ ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ. ET NOW ಜಾಗತಿಕ ವ್ಯಾಪಾರ ಶೃಂಗಸಭೆ 2024ರಲ್ಲಿ ಮಾತನಾಡಿದ ಅವರು, “ನಮ್ಮ ಮುಸ್ಲಿಂ ಸಹೋದರರನ್ನು ದಾರಿತಪ್ಪಿಸಲಾಗುತ್ತಿದೆ … Continued