ಲೋಕಸಭೆ ಚುನಾವಣೆ : ಕೈತಪ್ಪಿದ ಬಿಜೆಪಿ ಟಿಕೆಟ್ ; ಭಾವನಾತ್ಮಕ ಪತ್ರ ಬರೆದ ಸಂಸದ ಅನಂತಕುಮಾರ ಹೆಗಡೆ

ಶಿರಸಿ : ಲೋಕಸಭೆ ಚುನಾವಣೆಗೆ 111 ಅಭ್ಯರ್ಥಿಗಳ ಬಿಜೆಪಿಯ ಐದನೇ ಪಟ್ಟಿ ಬಿಡುಗಡೆಯಾಗಿದ್ದು, ಉತ್ತರ ಕನ್ನಡ ಕ್ಷೇತ್ರದಲ್ಲಿ ಹಾಲಿ ಸಂಸದರಾಗಿರುವ ಅನಂತಕುಮಾರ ಹೆಗಡೆ ಅವರಿಗೆ ಟಿಕೆಟ್‌ ತಪ್ಪಿದೆ. ಅವರ ಬದಲಿಗೆ ವಿಧಾನಸಭೆ ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್‌ ನೀಡಲಾಗಿದೆ. ಇದರ ಬೆನ್ನಲ್ಲೇ ಅನಂತಕುಮಾರ ಹೆಗಡೆ ಅವರು ಭಾವುಕ ಪತ್ರ ಬರೆದಿದ್ದು, ಸೇವೆ … Continued

ಭಟ್ಕಳ : ತೆರವು ಮಾಡಿದ ಸ್ಥಳದಲ್ಲೇ ಮತ್ತೆ ಹನುಮ ಧ್ವಜ ಹಾರಿಸಿದ ಸಂಸದ ಅನಂತಕುಮಾರ ಹೆಗಡೆ-ಇತರರು…!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿದ ಸ್ಥಳದಲ್ಲೇ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಸಮ್ಮುಖದಲ್ಲಿ ಮತ್ತೆ ಹನುಮ ಧ್ವಜವನ್ನು ಹಾರಿಸಲಾಗಿದೆ ಎಂದು ವರದಿಯಾಗಿದೆ. ಸೋಮವಾರ ಕಾರ್ಯಕರ್ತರ ಸಭೆಗೆ ಸಂಸದ ಅನಂತಕುಮಾರ ಹೆಗಡೆ ಅವರು ತೆಂಗಿನಗುಂಡಿ ಗ್ರಾಮಕ್ಕೆ ಭೇಟಿ ನೀಡಿದ ಸಮಯದಲ್ಲಿ ಅವರ ನೇತೃತ್ವದಲ್ಲಿ ಹನುಮ … Continued

ಕಾಂಗ್ರೆಸ್ಸಿನವರಿಗೆ ಇಲ್ಲದ ಸಭ್ಯತೆ ಬಿಜೆಪಿಯವರಿಗೆ ಮಾತ್ರ ಯಾಕೆ..? ಸಭ್ಯತೆ ವಿಷಯದಲ್ಲಿ ಸಿದ್ದರಾಮಯ್ಯ ಬಹಿರಂಗ ಚರ್ಚೆಗೆ ಬರಲಿ: ಅನಂತಕುಮಾರ ಹೆಗಡೆ

ಶಿರಸಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇರೆಯವರ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದು ಸರಿ ಎಂದಾದರೆ ನಾನು ಏಕವಚನದಲ್ಲಿ ಮಾತನಾಡಿದ್ದು ಹೇಗೆ ತಪ್ಪಾಗುತ್ತದೆ ಎಂದು ಸಂಸದ ಅನಂತಕುಮಾರ ಹೆಗಡೆ ಪ್ರಶ್ನಿಸಿದ್ದಾರೆ. ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಹಾಗೂ ಸಿದ್ದರಾಮಯ್ಯ ಅವರಿಗೆ ಇಲ್ಲದ ಸಭ್ಯತೆ ಬಿಜೆಪಿಯವರಿಗೆ ಮಾತ್ರ ಯಾಕೆ ಎಂದು ಕೇಳಿದ್ದಾರೆ.ಸಂಸ್ಕೃತಿ ಹಾಗೂ ಸಭ್ಯತೆ ಬಗ್ಗೆ ಪಾಠ … Continued

ಮುಸ್ಕಾನ್‌ ತನಿಖೆ ಮಾಡಿದರೆ ತಪ್ಪೇನೂ ಇಲ್ಲ, ಆದರೆ ರಾಜಕಾರಣ ಮಾಡಿ ಶಾಂತಿ ಹದಗೆಡಿಸಬಾರದು: ಸುಮಲತಾ ಅಂಬರೀಷ್

ಬೆಂಗಳೂರು: ಮಂಡ್ಯದ ಮುಸ್ಕಾನ್‌ ಅವರನ್ನು ತನಿಖೆ ನಡೆಸಿದರೆ ತಪ್ಪೇನೂ ಇಲ್ಲ. ತನಿಖೆ ನಡೆದರೆ ಸತ್ಯ ಹೊರಗೆ ಬರುತ್ತದೆ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ಮಾಡುವುದರಲ್ಲಿ ತಪ್ಪೇನಿಲ್ಲ, ತನಿಖೆ ಆಗಿ ನಿಜ ಹೊರಗೆ ಬರಬೇಕು. ಆದರೆ ರಾಜಕಾರಣ ಮಾಡಿ ವಾತಾವರಣ ಹದಗೆಡಿಸುವ ಕೆಲಸ ಮಾಡಬಾರದು ಎಂದು ಸ್ಪಷ್ಟಪಡಿಸಿದರು. ಮಂಡ್ಯ ಹಾಗೂ … Continued

ಶಸ್ತ್ರ ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿರುವ ಸಂಸದ ಹೆಗಡೆ

ಕಾರವಾರ: ಉತ್ತರ ಕನ್ನಡ ಕ್ಷೇತ್ರದ ಸಂಸದ, ಕೇಂದ್ರದ ಮಾಜಿ ಸಚಿವ ಅನಂತಕುಮಾರ ಹೆಗಡೆ ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿರುವ ಸಂಸದರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಅನಂತಕುಮಾರ್ ಹೆಗಡೆ ಆರೋಗ್ಯದ ಬಗ್ಗೆ ಆಪ್ತ ಸಹಾಯಕರು ಪ್ರಕಟಣೆ ಬಿಡುಗಡೆ ಮಾಡಿದ್ದು, ಕೆಲವು ತಿಂಗಳುಗಳಿಂದ ಬೆನ್ನು ನೋವು ಮತ್ತು ಕಾಲು ನೋವು … Continued