ಶಿರಸಿ ಆಸ್ಪತ್ರೆ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ನನಗೆ ಶಾಸಕರಿಂದ ಲೀಗಲ್‌ ನೋಟಿಸ್‌ : ಅನಂತಮೂರ್ತಿ ಹೆಗಡೆ

ಶಿರಸಿ: ಶಿರಸಿಯ ಪಂಡಿತ ಸರ್ಕಾರಿ ಆಸ್ಪತ್ರೆಯ ಬಗ್ಗೆ ನಾನು ಪ್ರಶ್ನೆ ಮಾಡಿದ್ದಕ್ಕೆ ಶಾಸಕ ಭೀಮಣ್ಣ ನಾಯ್ಕ ಅವರು ನನಗೆ ಲೀಗಲ್‌ ನೋಟಿಸ್‌ ಕಳುಹಿಸಿದ್ದಾರೆ ಎಂದು ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಸ್ಪತ್ರೆ ವಿಚಾರದಲ್ಲಿ ಶಾಸಕರನ್ನು ಪ್ರಶ್ನಿಸಿದ್ದಕ್ಕೆ ನನ್ನ ಪ್ರತಿಕೃತಿ ದಹಿಸಿದ್ದಾರೆ, ನನ್ನ ಮೇಲೆ ನಾನ್ ಬೇಲೇಬಲ್ … Continued

ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ವಿರುದ್ಧ ಪ್ರಕರಣ : ಹೈಕೋರ್ಟ್‌ ತಡೆಯಾಜ್ಞೆ

ಶಿರಸಿ: ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಮೇಲೆ ಶಿರಸಿಯ ಕಾಂಗ್ರೆಸ್ ಮುಖಂಡರು ದಾಖಲಿಸಿದ್ದ ಪ್ರಕರಣದ ತನಿಖೆಗೆ ಶುಕ್ರವಾರ ಧಾರವಾಡದ ಹೈಕೋರ್ಟ್‌ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಬಗ್ಗೆ ಅನಂತಮೂರ್ತಿ ಹೆಗಡೆಯವರು ಮಾಹಿತಿ ನೀಡಿದ್ದಾರೆ. ತಮ್ಮ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಪ್ರಶ್ನಿಸಿ ಅನಂತಮೂರ್ತಿ ಹೆಗಡೆಯವರು ಕೋರ್ಟ್‌ ಮೆಟ್ಟಿಲೇರಿದ್ದರು. ಶಿರಸಿಯಲ್ಲಿ ಇತ್ತೀಚಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಅನಂತಮೂರ್ತಿ ಹೆಗಡೆ, … Continued

ಶಿರಸಿ | ಶಾಸಕರಿಗೆ ಅವಹೇಳನ ಮಾಡಿದ ಆರೋಪ ; ಅನಂತಮೂರ್ತಿ ಹೆಗಡೆ ವಿರುದ್ಧ ದೂರು

ಶಿರಸಿ ; ಬಿಜೆಪಿ ಮುಖಂಡ ಹಾಗೂ ಹೋರಾಟಗಾರ ಅನಂತಮೂರ್ತಿ ಹೆಗಡೆ ಮೇಲೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ. ಅನಂತಮೂರ್ತಿ ಹೆಗಡೆ ಸುದ್ದಿಗೋಷ್ಠಿಯಲ್ಲಿ ಶಾಸಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಶಿರಸಿ ನಗರ ಪೊಲೀಸ್‌ ಠಾಣೆಯಲ್ಲಿ ಶಿರಸಿ ನಗರ ಸಭೆ ಸದಸ್ಯರಾದ ಪ್ರದೀಪ ಶೆಟ್ಟಿ ಎಂಬವರು ದೂರು ನೀಡಿದ್ದಾರೆ. ರಾಜ್ಯದ 224 ಶಾಸಕರಲ್ಲಿ ಹೆಚ್ಚು … Continued

ಶಿರಸಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ : ಉತ್ತರ ನೀಡಲು ಶಾಸಕರಿಗೆ ಫೆ.20ರ ವರೆಗೆ ಗಡುವು, ಕೊಡದಿದ್ರೆ ಹೋರಾಟ ಅನಿವಾರ್ಯ : ಅನಂತಮೂರ್ತಿ ಹೆಗಡೆ

ಶಿರಸಿ: ಬಡವರ ಹೆಸರು ಹೇಳಿ ಅಧಿಕಾರಕ್ಕೆ ಬಂದ ನಿಮಗೆ ಹಾಗೂ ನಿಮ್ಮ ಸರ್ಕಾರಕ್ಕೆ ಬಡವರ ಬಗ್ಗೆ ಕಾಳಜಿ ಇದ್ದರೆ ಸುಳ್ಳು ಹೇಳುವುದನ್ನು, ಸುಳ್ಳು ಭರವಸೆಗಳನ್ನು ನೀಡುವುದನ್ನು ಬಿಟ್ಟು ಶಿರಸಿಯಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು (super-speciality hospital) ಮೊದಲು ನಿರ್ಮಿಸಿ ಎಂದು ಶಾಸಕ ಭೀಮಣ್ಣ ನಾಯ್ಕ ಅವರಿಗೆ ಸಾಮಾಜಿಕ ಹೋರಾಟಗಾರ ಅನಂತ ಮೂರ್ತಿ ಹೆಗಡೆ ಸವಾಲು ಹಾಕಿದ್ದಾರೆ. … Continued

ಶಿರಸಿ ಹೈಟೆಕ್‌ ಆಸ್ಪತ್ರೆ | ಅನಂತಮೂರ್ತಿ ಹೆಗಡೆ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ; ಸತ್ಯಾಗ್ರಹ ಸ್ಥಳದಲ್ಲಿ ಸಂಸದ ಕಾಗೇರಿ ಘೋಷಣೆ

ಶಿರಸಿ : ನಗರದ ಹೈಟೆಕ್ ಆಸ್ಪತ್ರೆಗೆ ಸಂಬಂಧಿಸಿದಂತೆ ಹೋರಾಟಗಾರ ಅನಂತಮೂರ್ತಿ ಹೆಗಡೆ ನಡೆಸುತ್ತಿರುವ ಎಲ್ಲ ಹೋರಾಟಕ್ಕೆ, ಉಪವಾಸ ಸತ್ಯಾಗ್ರಹಕ್ಕೆ ನನ್ನ ಸಂಪೂರ್ಣ ಬೆಂಬಲವಿದ್ದು, ಅವರು ಸಮಾಜಕ್ಕೆ ಒಳ್ಳೆಯದಾಗುವ ಯಾವುದೇ ನಿರ್ಣಯ ಕೈಗೊಂಡರೂ ಅದನ್ನು ನಾನು ಬೆಂಬಲಿಸುತ್ತೇನೆ. ಜಿಲ್ಲಾ ಬಿಜೆಪಿ ಸಹ ಈ ನಿಟ್ಟಿನಲ್ಲಿ ಸದಾ ಅವರ ಬೆನ್ನಿಗೆ ನಿಲ್ಲುತ್ತದೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ … Continued

ಶಿರಸಿ ಹೈಟೆಕ್ ಆಸ್ಪತ್ರೆ ವಿಚಾರದಲ್ಲಿ ಸತ್ಯಕ್ಕಾಗಿ ಆಗ್ರಹಿಸಿ ಜನವರಿ 13 ರಂದು ಉಪವಾಸ ಸತ್ಯಾಗ್ರಹ : ಅನಂತಮೂರ್ತಿ ಹೆಗಡೆ

ಶಿರಸಿ: ಶಿರಸಿ ಹೈಟೆಕ್ ಆಸ್ಪತ್ರೆಗೆ ಸಂಬಂಧಿಸಿ ಸತ್ಯಕ್ಕಾಗಿ ಆಗ್ರಹಿಸಿ ಜನವರಿ 13 ರಂದು ಬೆಳಿಗ್ಗೆ 9 ಗಂಟೆಗೆ ಬಿಡ್ಕಿ ಬಯಲಿನಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಶಿರಸಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ತಹಶೀಲ್ದಾರರ ಕಚೇರಿಯಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುತ್ತದೆ ಎಂದು ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಹೇಳಿದ್ದಾರೆ. ಬುಧವಾರ ಶಿರಸಿಯಲ್ಲಿ … Continued

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಫೆ.೧೬ರ ಬಜೆಟ್‌ ನಲ್ಲೇ ಹಣ ನೀಡಿ : ಪಾದಯಾತ್ರೆಯಲ್ಲಿ ಸಾಗಿ ಸಚಿವರಿಗೆ ಮನವಿ ನೀಡಿ ಅನಂತಮೂರ್ತಿ ಹೆಗಡೆ ಒತ್ತಾಯ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅತ್ಯಗತ್ಯವಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಅತಿ ಶೀಘ್ರದಲ್ಲಿ ಆರಂಭಿಸಬೇಕು, ಆಸ್ಪತ್ರೆ ನಿರ್ಮಾಣಕ್ಕೆ ಈ ವರ್ಷದ ಬಜೆಟ್‌ನಲ್ಲಿ ಹಣ ಮೀಸಲಿಡಬೇಕು ಎಂದು ಆಗ್ರಹಿಸಿ ಕುಮಟಾದಿಂದ ಭಟ್ಕಳದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರ ಕಚೇರಿ ವರೆಗೆ ಮೂರು ದಿನಗಳ ಕಾಲ ಪಾದಯಾತ್ರೆ ನಡೆಸಿದ ಸಾಮಾಜಿಕ ಹೋರಾಟಗಾರ ಬುಧವಾರ ಸಚಿವರಿಗೆ ಮನವಿ … Continued

ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ : ನನ್ನ ಹೋರಾಟ ಜಿಲ್ಲೆಯ ಲಕ್ಷಾಂತರ ಜನರ ಹಕ್ಕೊತ್ತಾಯದ ಧ್ವನಿ- ಅನಂತಮೂರ್ತಿ ಹೆಗಡೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕು ಎಂದು ನಾನು ಮಾಡುತ್ತಿರುವ ಹೋರಾಟದಲ್ಲಿ ಲಕ್ಷಾಂತರ ಜನರ ಒಳಿತು ಹಾಗೂ ಹಿತಾಸಕ್ತಿ ಅಡಗಿದೆ. ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಬೇಕು ಎಂಬುದು ಈ ಜಿಲ್ಲೆಯ ಜನರ ಭಾವನೆ ಹಾಗೂ ಬಹುದಿನಗಳ ಬೇಡಿಕೆ. ಜನರ ಭಾವನೆಯ ಪ್ರತೀಕವಾಗಿಯೇ ನಾನು ಹೋರಾಟ ಮಾಡುತ್ತಿದ್ದೇನೆಯೇ ಹೊರತು ಇದರಲ್ಲಿ ಉಳಿದ ಯಾವುದೇ … Continued