ಏಪ್ರಿಲ್‌-ಜೂನ್‌ ಅವಧಿಯಲ್ಲಿ ದೇಶದಲ್ಲಿ ಭಾರೀ ಬಿಸಿಲು ; ಕರ್ನಾಟಕದ ಈ ಭಾಗಗಳಲ್ಲಿ ಬಿಸಿಗಾಳಿಯ ಕೆಟ್ಟ ಪರಿಣಾಮ ; ಹವಾಮಾನ ಇಲಾಖೆ

ನವದೆಹಲಿ : ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ಮುಂದಿನ ಹಲವು ದಿನಗಳಲ್ಲಿ ಬಿಸಿಲಿನ ಧಗೆ ಏರಲಿದೆ ಎಂದಿರುವ ಹವಾಮಾನ ಇಲಾಖೆ ಉಷ್ಣ ಮಾರುತದ ಎಚ್ಚರಿಕೆ ನೀಡಿದೆ. ಏಪ್ರಿಲ್‌ ಮೊದಲ ವಾರದಿಂದಲೇ ದೇಶದ ದಕ್ಷಿಣ, ಉತ್ತರ, ಕೇಂದ್ರ ಭಾಗಗಳಲ್ಲಿ ಉಷ್ಣ ಗಾಳಿ ಹೆಚ್ಚಲಿದೆ. ಏಪ್ರಿಲ್‌-ಜೂನ್‌ ತಿಂಗಳಲ್ಲಿ ಸಾಮನ್ಯಕ್ಕಿಂತ ಹೆಚ್ಚಿನ ತಾಪಮಾನ ಕಂಡು ಬರಲಿದೆ. ಕರ್ನಾಟಕ, ಆಂಧ್ರಪ್ರದೇಶ, ಗುಜರಾತ್‌, … Continued

ಲೋಕಸಭೆ ಚುನಾವಣೆ : ಆಂಧ್ರಪ್ರದೇಶದಲ್ಲಿ ಟಿಡಿಪಿ-ಬಿಜೆಪಿ-ಜನಸೇನೆ ನಡುವೆ ಸೀಟು ಹಂಚಿಕೆ ಒಪ್ಪಂದ ಅಂತಿಮ

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡಿರುವ ಎನ್‌ಡಿಎಯನ್ನು ಇನ್ನಷ್ಟು ವಿಸ್ತರಿಸಲು ಪ್ರಯತ್ನಿಸುತ್ತಿರುವ ಬಿಜೆಪಿಗೆ ಆಂಧ್ರಪ್ರದೇಶದಲ್ಲಿ ತೆಲುಗು ದೇಶಂ ಮತ್ತು ಜನಸೇನಾ ಪಕ್ಷದ ಬೆಂಬಲ ಘೋಷಿಸಿದ್ದು, ಈ ಮೂರೂ ಪಕ್ಷಗಳು ಮೈತ್ರಿಯನ್ನು ಅಂತಿಮಗೊಳಿಸಿದೆ. ಒಪ್ಪಂದಕ್ಕೆ ಅಂತಿಮ ಮುದ್ರೆ ಒತ್ತಲಾಗಿದೆ ಎಂದು ಘೋಷಿಸಿದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಲೋಕಸಭೆ ಚುನಾವಣೆ … Continued

ಕ್ರಿಕೆಟ್‌ : ಒಂದೇ ಓವರ್‌ನಲ್ಲಿ 6 ಸಿಕ್ಸರ್‌ಗಳು…! ಇತಿಹಾಸ ನಿರ್ಮಿಸಿದ ಆಂಧ್ರದ ಯುವ ಆಟಗಾರ | ವೀಕ್ಷಿಸಿ

ಕ್ರಿಕೆಟ್‌ನಲ್ಲಿ, ಆಟಗಾರ ಒಂದು ಓವರ್‌ನಲ್ಲಿ ಬರೋಬ್ಬರಿ ಆರು ಸಿಕ್ಸರ್‌ಗಳನ್ನು ಬಾರಿಸಿ ದಾಖಲೆ ಮಾಡಿದ್ದಾರೆ. ಕರ್ನಲ್ CK ನಾಯುಡು ಟ್ರೋಫಿಯು U-23 ಕ್ರಿಕೆಟ್‌ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ವಂಶಿ ಕೃಷ್ಣ ಎಂಬ ಆಟಗಾರ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮೊದಲು ವೆಸ್ಟ್ ಇಂಡೀಸ್ ದಂತಕಥೆ ಸರ್ ಗ್ಯಾರಿ ಸೋಬರ್ಸ್ 1968 ರಲ್ಲಿ ನಾಟಿಂಗ್‌ಹ್ಯಾಮ್‌ಶೈರ್‌ಗಾಗಿ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಆಡುವಾಗ, ಗಾರ್ಫೀಲ್ಡ್ … Continued

ಅಯೋಧ್ಯೆ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೂ ಮುನ್ನ ಆಂಧ್ರದ ರಾಮಾಯಣದ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಹಿಂದೂ ಮಹಾಕಾವ್ಯ ರಾಮಾಯಣದಲ್ಲಿ ಮಹತ್ವದ ಸ್ಥಾನ ಪಡೆದಿರುವ ಆಂಧ್ರಪ್ರದೇಶದ ಲೇಪಾಕ್ಷಿಯಲ್ಲಿರುವ ವೀರಭದ್ರ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಭೇಟಿ ನೀಡಿದರು. ರಾವಣನಿಂದ ಸೀತಾದೇವಿಯನ್ನು ಅಪಹರಿಸಿದ ನಂತರ ಜಟಾಯು ಸೀತಾದೇವಿಯನ್ನು ಹಿಂಬಾಲಿಸಿದ ಸ್ಥಳ ಲೇಪಾಕ್ಷಿ ಎಂದು ನಂಬಲಾಗಿದೆ. ಸಾಯುತ್ತಿರುವ ಜಟಾಯು, ಸೀತಾ ದೇವಿಯ ಸೆರೆಯಲ್ಲಿರುವ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ತಿಳಿಸಿದ ನಂತರ, ಲೇಪಾಕ್ಷಿಯಲ್ಲಿ … Continued

ಆಂಧ್ರ ಕಾಂಗ್ರೆಸ್ ಅಧ್ಯಕ್ಷರಾಗಿ ವೈ.ಎಸ್. ಶರ್ಮಿಳಾ ನೇಮಕ

ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ಅವರನ್ನು ಮಂಗಳವಾರ ಆಂಧ್ರಪ್ರದೇಶದ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಶರ್ಮಿಳಾ ಅವರು ತಮ್ಮ ವೈಎಸ್ಆರ್ ತೆಲಂಗಾಣ ಪಕ್ಷವನ್ನು (ವೈಎಸ್‌ಆರ್‌ಟಿಪಿ) ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವುದಾಗಿ ಘೋಷಿಸಿ ಜನವರಿ 4 ರಂದು ಕಾಂಗ್ರೆಸ್‌ಗೆ ಸೇರಿದ್ದರು. ಆಂಧ್ರಪ್ರದೇಶದ ಅಧ್ಯಕ್ಷ ಸ್ಥಾನಕ್ಕೆ ಗಿಡುಗು ರುದ್ರರಾಜು ರಾಜೀನಾಮೆ ನೀಡಿದ ಒಂದು … Continued

ಸೇರಿದ 10 ದಿನಕ್ಕೇ ಜಗನ್ ರೆಡ್ಡಿ ವೈಎಸ್‌ಆರ್‌ಸಿಪಿ ಪಕ್ಷ ತೊರೆದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು

ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷಕ್ಕೆ (ವೈಎಸ್‌ಆರ್‌ಸಿಪಿ) ಸೇರಿದ ಕೇವಲ ಎಂಟು ದಿನಗಳ ನಂತರ ಕ್ರಿಕೆಟಿಗ ಅಂಬಟಿ ರಾಯುಡು ಅವರು ಶನಿವಾರ ಪಕ್ಷ ತೊರೆಯುವ ನಿರ್ಧಾರ ಪ್ರಕಟಿಸಿದ್ದಾರೆ. ರಾಯುಡು ಜೂನ್ 2023 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು ಮತ್ತು ರಾಜಕೀಯಕ್ಕೆ ಸೇರುವ ಆಸಕ್ತಿಯನ್ನು ವ್ಯಕ್ತಪಡಿಸಿದರು. ರಾಯುಡು ತಮ್ಮ ಎಕ್ಸ್ ಪೋಸ್ಟ್‌ನಲ್ಲಿ, “ನಾನು ವೈಎಸ್‌ಆರ್‌ಸಿಪಿ ಪಕ್ಷವನ್ನು … Continued

ಕಾಂಗ್ರೆಸ್‌ ಸೇರಿದ ಆಂಧ್ರ ಸಿಎಂ ಜಗನ್ಮೋಹನ ರೆಡ್ಡಿ ಸಹೋದರಿ

ನವದೆಹಲಿ: ವೈ.ಎಸ್. ಆರ್. ತೆಲಂಗಾಣ ಪಕ್ಷದ ಸಂಸ್ಥಾಪಕಿ ಹಾಗೂ ಆಂಧ್ರ ಮುಖ್ಯಮಂತ್ರಿ ವೈ.ಎಸ್‌. ಜಗನ್ಮೋಹನ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರು ಬುಧವಾರ ತಡರಾತ್ರಿ ನವದೆಹಲಿಗೆ ಆಗಮಿಸಿದ್ದರು. ಸೇರ್ಪಡೆ ಸಮಾರಂಭದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ವರಿಷ್ಠ ನಾಯಕ ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅವರು ತಮ್ಮ … Continued

ಆಂಧ್ರ ಸಿಎಂ ಜಗನ್ಮೋಹನ್ ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾ ಜನವರಿ 4 ರಂದು ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ನವದೆಹಲಿ : ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ಅವರು ಜನವರಿ 4 ರಂದು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ವೈ.ಎಸ್. ಶರ್ಮಿಳಾ ಅವರು ವೈ ಎಸ್ ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕ ಅಧ್ಯಕ್ಷರೂ ಆಗಿದ್ದಾರೆ. ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಿ, ರಾಜ್ಯದಲ್ಲಿ ಭಾರತ ರಾಷ್ಟ್ರ … Continued

ತನ್ನ ಕಪಾಳಕ್ಕೆ ತಾನೇ ಚಪ್ಪಲಿಯಿಂದ ಹೊಡೆದುಕೊಂಡ ಪುರಸಭೆ ಸದಸ್ಯ : ಹಾಗೆ ಮಾಡಿದ್ದಕ್ಕೆ ಕಾರಣ ನೀಡಿದ ಕೌನ್ಸಿಲರ್‌ | ವೀಕ್ಷಿಸಿ

ಅನಕಾಪಲ್ಲಿ: ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ವಿಫಲವಾದ ಕಾರಣಕ್ಕೆ ಅನಕಾಪಲ್ಲಿ ಜಿಲ್ಲೆಯ ಕೌನ್ಸಿಲರ್‌ ಒಬ್ಬರು ಸೋಮವಾರ ಚಪ್ಪಲಿಯಿಂದ ತಮಗೆ ತಾವೇ ಕಪಾಳಮೋಕ್ಷ ಮಾಡಿಕೊಂಡ ಘಟನೆ ನಡೆದಿದೆ..! ನರಸೀಪಟ್ಟಣ ಪುರಸಭೆಯ (ವಾರ್ಡ್ 20) ಕೌನ್ಸಿಲರ್ ಮುಲಪರ್ತಿ ರಾಮರಾಜು ಅವರು ಕೌನ್ಸಿಲ್ ಸಭೆಯಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದರು. ಈ ಕೃತ್ಯದ ವೀಡಿಯೊ ವೈರಲ್ ಆಗಿದೆ. ಪಾಲಿಕೆ ಸದಸ್ಯನಾಗಿ ಆಯ್ಕೆಯಾಗಿ … Continued

ಕಡಲ ಕಿನಾರೆಗೆ ಬಂದ ಬರೋಬ್ಬರಿ 25 ಅಡಿ ಉದ್ದದ ಬೃಹತ್‌ ತಿಮಿಂಗಿಲ; ವೀಡಿಯೋ ವೈರಲ್

ಗುರುವಾರ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಮೇಘಾವರಂ ಕಡಲತೀರದಲ್ಲಿ ನೀಲಿ ತಿಮಿಂಗಿಲವೊಂದು ದಡದಲ್ಲಿ ನಿರ್ಜೀವ ಸ್ಥಿತಿಯಲ್ಲಿ ಕಂಡುಬಂದಿದೆ. ಐದು ಟನ್ ತೂಕದ 25 ಅಡಿ ಉದ್ದದ ಈ ಬೃಹತ್‌ ಜೀವಿಯ ಮೃತದೇಹವನ್ನು ಮರಳಿನ ಮೇಲೆ ನೋಡಿದ ಅಲ್ಲಿನ ಜನರಿಗೆ ಈ ಘಟನೆ ಅಪರೂಪದ ದೃಶ್ಯವಾಗಿತ್ತು. ಬಂಗಾಳಕೊಲ್ಲಿಯಲ್ಲಿ ಇಂತಹ ತಿಮಿಂಗಿಲಗಳು ಅಪರೂಪವಾಗಿದ್ದು, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ … Continued