ವೀಡಿಯೊ..| ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಅಂಕೋಲಾ : ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಭಾರಿ ದುರಂತ ಸಂಭವಿಸಿದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಪ್ರದೇಶಕ್ಕೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಯಾಚರಣೆಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದ ಅವರು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಎಸ್‌ಡಿಆರ್‌ಎಫ್ (SDRF) ಹಾಗೂ ಎನ್‌ಡಿಆರ್‌ಎಫ್ (NDRF) ಜೊತೆ ಚರ್ಚಿಸಿದರು. … Continued