ಶಿರೂರು ಗುಡ್ಡ ಕುಸಿತ ಪ್ರಕರಣ: ಹೈಕೋರ್ಟ್‌ ಗೆ ಕೇಂದ್ರ ಸರ್ಕಾರದಿಂದ ಮಾಹಿತಿ ಸಲ್ಲಿಕೆ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-66ರ ಅಂಚಿನಲ್ಲಿ ಉಂಟಾದ ಗುಡ್ಡ ಕುಸಿತದ ಪ್ರಕರಣದಲ್ಲಿ ಮಣ್ಣಿನಡಿ ಸಿಲುಕಿದ್ದವರ ಪೈಕಿ ಎಂಟು ಜನರ ಶವ ಪತ್ತೆಯಾಗಿದ್ದು, ರಕ್ಷಣಾ ಕಾರ್ಯ ಕಾರ್ಯಾಚರಣೆ ತ್ವರಿತವಾಗಿ ಸಾಗಿದೆ ಎಂದು ಕೇಂದ್ರ ಸರ್ಕಾರವು ಹೈಕೋರ್ಟ್‌ಗೆ ಬುಧವಾರ ತಿಳಿಸಿದೆ. ವಕೀಲ ಶಿಜಿ ಮಲಯಾಳಿ ಹಾಗೂ ನವದೆಹಲಿಯ … Continued

ಅಂಕೋಲಾ | ಶಿರೂರು ಗುಡ್ಡ ಕುಸಿತ ದುರಂತ : ನಾಪತ್ತೆಯಾಗಿದ್ದ ಟ್ರಕ್ ನದಿಯೊಳಗಿರುವ ಬಗ್ಗೆ ಸಿಕ್ಕ ಸುಳಿವು ; ಸಚಿವರಿಂದ ಟ್ವೀಟ್‌

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ದುರಂತದಲ್ಲಿ ಇನ್ನೂ ನಾಪತ್ತೆಯಾಗಿರುವ ಇಬ್ಬರ ಶೋಧಕ್ಕೆ ಸೇನೆ ಮತ್ತು ಎನ್.ಡಿ.ಆರ್ ಎಫ್ ತಂಡ ಬುಧವಾರ ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಆರಂಭ ಮಾಡಿದ್ದು, ಇದರ ಮಧ್ಯೆಯೇ ಟ್ರಕ್  ಒಂದು ಗಂಗಾವಳಿ ನದಿ ನೀರಿನಲ್ಲಿ ಮುಳುಗಿರುವ ಸಾಧ್ಯತೆಯ ಸುಳಿವು ಸಿಕ್ಕಿದೆ. ಈ ಬಗ್ಗೆ ಕಂದಾಯ … Continued

ಅಂಕೋಲಾ | ಶಿರೂರು ಗುಡ್ಡ ಕುಸಿತದ ದುರಂತ ; ನಾಪತ್ತೆಯಾಗಿದ್ದ ಮಹಿಳೆಯ ಶವ ಪತ್ತೆ : ಮೃತರ ಸಂಖ್ಯೆ 8ಕ್ಕೆ ಏರಿಕೆ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ದುರಂತದಲ್ಲಿ ಕಣ್ಮರೆಯಾಗಿದ್ದ ಮಹಿಳೆಯ ಮೃತ ದೇಹ ಗಂಗಾವಳಿ ಬಳಿ ನದಿ ತೀರದಲ್ಲಿ ಮಂಗಳವಾರ ಮುಂಜಾನೆ ಪತ್ತೆಯಾಗಿದೆ. ಗಂಗಾವಳಿ ನದಿಯ ಅಳಿವೆ ಪ್ರದೇಶವಾದ ಗಂಗೆಕೊಳ್ಳದಲ್ಲಿ ಉಳುವರೆ ನಿವಾಸಿ ಸಣ್ಣಿ ಗೌಡ ಎಂಬವರ ಮೃತದೇಹ ಮಂಗಳವಾರ ನಸುಕಿನ ಜಾವ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಜುಲೈ 16 … Continued

ತ್ವರಿತ ಕಾರ್ಯಾಚರಣೆಗೆ ಸೂಚನೆ ; ಕ್ಷಿಪ್ರಗತಿಯಲ್ಲಿ ಮಣ್ಣು ತೆರವು, ಶೋಧ ಕಾರ್ಯಾಚರಣೆಗೆ ಮಿಲಿಟರಿ-ನೌಕಾಪಡೆ ನೆರವು ; ಸಿಎಂ ಸಿದ್ದರಾಮಯ್ಯ

 ಅಂಕೋಲಾ : ಶಿರೂರು ಭೂಕುಸಿತದ ಮಣ್ಣು ತೆರವು ಮತ್ತು ಸಿಲುಕಿಕೊಂಡಿರಬಹುದಾದವರ ಶೋಧ ಕಾರ್ಯಾಚರಣೆಯಲ್ಲಿ ಎಸ್.ಡಿ.ಆರ್. ಎಫ್ ನಿಂದ 46 ಜನ ಎನ್.ಡಿ.ಆರ್.ಎಫ್ ನಿಂದ 24 ಸಿಬ್ಬಂದಿ ತೊಡಗಿಕೊಂಡಿದ್ದಾರೆ. ಇದಕ್ಕೆ 44 ಜನ ಮಿಲಿಟರಿ ಹಾಗೂ ನೌಕಾಪಡೆ ಯವರೂ ಕೂಡ ಕೈಜೋಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಭಾನುವಾರ (ಜುಲೈ 21) ಶಿರೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ … Continued

ವೀಡಿಯೊ..| ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಅಂಕೋಲಾ : ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಭಾರಿ ದುರಂತ ಸಂಭವಿಸಿದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಪ್ರದೇಶಕ್ಕೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಯಾಚರಣೆಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದ ಅವರು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಎಸ್‌ಡಿಆರ್‌ಎಫ್‌ (SDRF) ಹಾಗೂ ಎನ್‌ಡಿಆರ್‌ಎಫ್‌ (NDRF) ಜೊತೆ ಚರ್ಚಿಸಿದರು. … Continued

ಶಿರೂರು ಗುಡ್ಡ ಕುಸಿತ | ರಾಡಾರ್ ಮೂಲಕ ಸಿಲುಕಿರುವವರ ಶೋಧ ಕಾರ್ಯ ಆರಂಭಿಸಿದ ತಜ್ಞರ ತಂಡ : ಕೇರಳದಿಂದ ಬಂದ ರಕ್ಷಣಾ ಪರಿಣಿತರು

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಗುಡ್ಡ ಕುಸಿತದಲ್ಲಿ ಸಿಲುಕಿರುವವನ್ನು ಪತ್ತೆಹಚ್ಚಲು ಸುರತ್ಕಲ್ ನಿಂದ ರಾಡಾರ್ ಯಂತ್ರದೊಂದಿಗೆ ಆಗಮಿಸಿರುವ ತಜ್ಞರ ತಂಡ ಪತ್ತೆಕಾರ್ಯ ನಡೆಸುತ್ತಿದೆ. ಅಲ್ಲದೆ, ಕೇರಳದಿಂದ ಆಗಮಿಸಿರುವ ಪರಿಣಿತ ರಕ್ಷಣಾ ಕಾರ್ಯಕರ್ತರ ತಂಡ ಕೂಡಾ ಈ ಪ್ರದೇಶದಲ್ಲಿ ವ್ಯಾಪಕ ಪರಿಶೀಲನೆ ನಡೆಸುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ರಾಜ್ಯ ವಿಪತ್ತು … Continued

ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಭೇಟಿ ; ಇದು ರಾಜಕಾರಣದ ಸಮಯವಲ್ಲ, ಸರ್ಕಾರ ಜನರ ನೆರವಿಗೆ ನಿಲ್ಲಬೇಕು : ಕುಮಾರಸ್ವಾಮಿ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರು ರಾಷ್ಟ್ರೀಯ ಹೆದ್ದಾರಿ ಬಳಿ ಗುಡ್ಡ ಕುಸಿತವಾದ ಸ್ಥಳಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇಂತಹ ದುರಂತದ ಸಂದರ್ಭದಲ್ಲಿಪುಡಿಗಾಸು ಪರಿಹಾರ ನೀಡುವುದರ ಬದಲು ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡವರಿಗೆ, ಬೆಳೆ ಹಾನಿ ಸಂಭವಿಸಿದ ರೈತರಿಗೆ … Continued

ಅಂಕೋಲಾ ; ಶಿರೂರು ಗುಡ್ಡ ಕುಸಿತದ ಸ್ಥಳದಲ್ಲಿ ಬೆಂಜ್ ಲಾರಿ, ಚಾಲಕನಿಗಾಗಿ ಹುಡುಕಾಟ

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ಬೆಂಜ್ ಲಾರಿ ಮತ್ತು ಕೇರಳ ಕೋಝೀಕ್ಕೋಡ್ ನ ಚಾಲಕ ಅರ್ಜುನ್ ಪತ್ತೆಗಾಗಿ ಬಾಂಬ್ ನಿಷ್ಕ್ರೀಯ ಮೆಟಲ್ ಡಿಟೆಕ್ಟರ್‌ ಮೂಲಕ ಪತ್ತೆ ಕಾರ್ಯ ನಡೆದಿದೆ. ನೌಕಾ ಪಡೆ ಅಧಿಕಾರಿಗಳು , ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ತಂಡ , ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ … Continued

ನಾಳೆ ಅಂಕೋಲಾಕ್ಕೆ ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ  ದುರಂತ ಸ್ಥಳ ಪರಿಶೀಲಿಸಲು ನಾಳೆ (ಜುಲೈ 21) ಭಾನುವಾರ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆಯಿಂದ ರಸ್ತೆ, ಮನೆ ಬಿದ್ದಿರುವುದು ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ ಎಂದು ತಿಳಿಸಿದರು. ಹಾಗೂ ಉತ್ತರ ಕನ್ನಡ ಜಿಲ್ಲೆಯ … Continued

ಶಿರೂರು ಗುಡ್ಡ ಕುಸಿತ ದುರಂತ : 10 ಮಂದಿ ಕಣ್ಮರೆ , ಅವರಲ್ಲಿ ಆರು ಮಂದಿ ಮೃತದೇಹ ಪತ್ತೆ : ಜಿಲ್ಲಾಧಿಕಾರಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದ ಅವಘಡದ ಬಗ್ಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಮಾಹಿತಿ ನೀಡಿದ್ದಾರೆ. ಶಿರೂರಿನಲ್ಲಿ ಗುಡ್ಡ ಕುಸಿತದ ದುರಂತದಲ್ಲಿ ಈವರೆಗೆ ಹತ್ತು ಮಂದಿ ಕಣ್ಮರೆಯಾಗಿರುವ ಮಾಹಿತಿ ಸಿಕ್ಕಿದ್ದು, ಈ ಪೈಕಿ ಆರು ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, … Continued