ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ : ವಾಂಟೆಡ್‌ ಆರೋಪಿ ಬಂಧನ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ತನಿಖೆ ಮುಂದುವರೆಸಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಶನಿವಾರ (ಮಾರ್ಚ್​ 4) ರಾತ್ರಿ ಬೆಂಗಳೂರಿನ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ತೌಫಿಲ್​ ಎಂಬಾತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಈತನನ್ನು ಹುಡುಕಿಕೊಟ್ಟವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. … Continued