ಪ್ರಜ್ವಲ್ ರೇವಣ್ಣ ಮೂರು ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು : ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಒಂದು ಜಾಮೀನು ಮತ್ತು ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ. ಪ್ರಜ್ವಲ್‌ ವಿರುದ್ಧ ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ, ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡಿದ ಆರೋಪದ ಸಂಬಂಧ ಪ್ರತ್ಯೇಕವಾಗಿ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ. … Continued

ಅಪಹರಣ ಪ್ರಕರಣ : ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟಿನಿಂದ ದೊಡ್ಡ ರಿಲೀಫ್‌

ನವದೆಹಲಿ:  ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಸಂತ್ರಸ್ತೆ ಅಪಹರಣದ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಭವಾನಿ ರೇವಣ್ಣಗೆ (Bhavani Revanna) ರಿಲೀಫ್‌ ಸಿಕ್ಕಿದೆ. ಕರ್ನಾಟಕ ಹೈಕೋರ್ಟ್‌ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಎತ್ತಿ ಹಿಡಿದಿದೆ. ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ ಮತ್ತು ಉಜ್ಜಲ್‌ ಭುಯಾನ್‌ … Continued

ಅತ್ಯಾಚಾರ ಆರೋಪ ಪ್ರಕರಣ : ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು : ನ್ಯಾಯಾಂಗ ಬಂಧನದಲ್ಲಿರುವ ಅತ್ಯಾಚಾರದ ಪ್ರಕರಣದಲ್ಲಿ ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಜಾಮೀನು ಅರ್ಜಿಗಳ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ಕಾಯ್ದಿರಿಸಿದೆ. ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ಜಾಮೀನು ಕೋರಿದ್ದಾರೆ. ಉಳಿದಂತೆ ಮತ್ತೊಂದು ಅತ್ಯಾಚಾರ ಎಸಗಿರುವ ಆರೋಪ ಮತ್ತು ಅಶ್ಲೀಲ ವೀಡಿಯೊ ಹಂಚಿಕೆಯ ಸಂಬಂಧ ದಾಖಲಾಗಿರುವ ಎರಡು ಪ್ರತ್ಯೇಕ … Continued

ಮಹಿಳೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್‌

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ನ್ಯದ ಪ್ರಕರಣದ ಸಂತ್ರಸ್ತೆ ಅಪಹರಿಸಿದ ಆರೋಪಿತ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಶಾಸಕ ಎಚ್‌. ಡಿ. ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಶುಕ್ರವಾರ ಆಲಿಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಕೃಷ್ಣ ಎಸ್. … Continued

ಮಧ್ಯಂತರ ನಿರೀಕ್ಷಣಾ ಜಾಮೀನು ಬೆನ್ನಲ್ಲೇ ಎಸ್ಐಟಿ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ…

ಬೆಂಗಳೂರು: ಸುಮಾರು ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ (Bhavani Revanna) ಅವರು ಕೆ.ಆರ್‌.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದ ವಿಚಾರಣೆಗಾಗಿ ಎಚ್ಐಟಿ ಮುಂದೆ ಹಾಜರಾಗಿದ್ದಾರೆ. ಈ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್‌ ಅವರಿಗೆ ಒಂದು ವಾರದ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು … Continued

ಸಂತ್ರಸ್ತೆ ಅಪಹರಣ ಪ್ರಕರಣ : ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್‌ ಕದತಟ್ಟಿದ ಭವಾನಿ ರೇವಣ್ಣ..

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಹಗರಣಕ್ಕೆ ಸಂಬಂಧಿಸಿದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಅರ್ಜಿ ವಿಚಾರಣೆಗೆ ನಿಗದಿಯಾಗಬೇಕಿದೆ. ವಿಶೇಷ ನ್ಯಾಯಾಲಯವು ಮೇ 31ರಂದು ಭವಾನಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಭವಾನಿ ಹೈಕೋರ್ಟ್‌ ಕದತಟ್ಟಿದ್ದಾರೆ. ವಿಶೇಷ … Continued

ಸಂತ್ರಸ್ತೆ ಅಪಹರಣ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಭವಾನಿ ರೇವಣ್ಣಗೆ ಬಂಧನದ ಭೀತಿ

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಅವರಿಗೂ ಬಂಧನದ ಭೀತಿ ಎದುರಾಗಿದೆ. ವಿಶೇಷ ತನಿಖಾ ದಳದಿಂದ ಬಂಧನ ಭೀತಿ … Continued

ಮಹಿಳೆ ಅಪಹರಣ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ ಭವಾನಿ ರೇವಣ್ಣ

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನಿರೀಕ್ಷಣಾ ಮತ್ತು ಸಾಮಾನ್ಯ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ … Continued

ಪ್ರಜ್ವಲ್‌ ಅಶ್ಲೀಲ ವೀಡಿಯೊ ಪ್ರಕರಣ : ನಿರೀಕ್ಷಣಾ ಜಾಮೀನು ಕೋರಿ ನಾಲ್ವರಿಂದ ಹೈಕೋರ್ಟ್‌ ಗೆ ಅರ್ಜಿ

ಬೆಂಗಳೂರು : ಹಾಸನ ಲೋಕಸಭಾ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೊ ಮತ್ತು ಚಿತ್ರಗಳ ಪೆನ್‌ಡ್ರೈವ್‌ ಮತ್ತು ಸಿ ಡಿ ಹಂಚಿಕೆ ಪ್ರಕರಣದ ನಾಲ್ವರು ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಆರೋಪಿಗಳಾದ ನವೀನ ಗೌಡ ಅಲಿಯಾಸ್‌ ಎನ್‌.ಆರ್‌. ನವೀನಕುಮಾರ, ಎನ್‌.ಕಾರ್ತಿಕ, ಬಿ ಸಿ ಚೇತನಕುಮಾರ ಮತ್ತು … Continued

ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಮುರುಘಾ ಶರಣರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯ ಶುಕ್ರವಾರಕ್ಕೆ ಮುಂದೂಡಿದೆ. ನಾಳೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್‌ ಅವಕಾಶ ನೀಡಿದ್ದು, ಈ ಸಂಬಂಧ ಸರ್ಕಾರಿ ಅಭಿಯೋಜಕರಿಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಆಗಸ್ಟ್‌ 30ರಂದು ಶ್ರೀಗಳು ಅರ್ಜಿ … Continued