ಪೋಕ್ಸೊ ಪ್ರಕರಣ ; ವಚನಾನಂದ ಶ್ರೀಗಳ ನಿರೀಕ್ಷಣಾ ಜಾಮೀನು ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ದಾವಣಗೆರೆಯ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಗೆ ವಿಚಾರಣಾಧೀನ ನ್ಯಾಯಾಲಯವು ಎಫ್‌ಐಆರ್‌ ದಾಖಲಾಗುವುದಕ್ಕೂ ಮುನ್ನ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ. ಆರೋಪಿಯಾಗಿರುವ ಸ್ವಾಮೀಜಿಗೆ ಪ್ರಕರಣ ದಾಖಲಾಗುವುದಕ್ಕೂ ಒಂದು ವಾರ ಮುಂಚಿತವಾಗಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ದಾವಣಗೆರೆಯ ವಿಚಾರಣಾಧೀನ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು … Continued

ಪೋಕ್ಸೊ ಪ್ರಕರಣ | ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು: ಆಘಾತ ವ್ಯಕ್ತಪಡಿಸಿದ ಹೈಕೋರ್ಟ್‌

ಬೆಂಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಅಡಿ ದಾಖಲಾಗಿರುವ ಪ್ರಕರಣದಲ್ಲಿ ದಾವಣಗೆರೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ವಿಚಾರಣಾ ನ್ಯಾಯಾಲಯದ ಕ್ರಮಕ್ಕೆ ಹೈಕೋರ್ಟ್ ಮಂಗಳವಾರ ಆಘಾತ ವ್ಯಕ್ತಪಡಿಸಿದೆ. ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ 2026ರ ಮೇ 6ರಂದು ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್ತು … Continued

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ ಜಾಮೀನು‌ ಅರ್ಜಿ ವಜಾ, ಬಂಧನ ಭೀತಿ

ಬೆಂಗಳೂರು : ರೌಡಿ ಶೀಟರ್‌ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಿಜೆಪಿಯ ಕೆ ಆರ್‌ ಪುರ ಶಾಸಕ ಬೈರತಿ ಬಸವರಾಜ ಅವರಿಗೆ ಹೈಕೋರ್ಟ್‌ ಮಂಗಳವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಇದರಿಂದ ಬಸವರಾಜ ಅವರಿಗೆ ಬಂಧನದ ಭೀತಿ ಎದುರಾಗಿದೆ. 2026ರ ಜನವರಿ 29ರಂದು ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್‌ ಸುನೀಲದತ್ತ ಯಾದವ್‌ ಅವರ ಏಕಸದಸ್ಯ ಪೀಠವು ಮಂಗಳವಾರ … Continued

ಮೋದಿ, ಆರ್‌ಎಸ್‌ಎಸ್‌ ನ ‘ಅವಹೇಳನಕಾರಿ’ ವ್ಯಂಗ್ಯಚಿತ್ರ : ಕಾರ್ಟೂನಿಸ್ಟ್‌ ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಮಧ್ಯಪ್ರದೇಶ ಹೈಕೋರ್ಟ್‌

ಭೋಪಾಲ :ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನಕಾರಿ ರೀತಿಯಲ್ಲಿ ಚಿತ್ರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಹೈಕೋರ್ಟ್ ಇತ್ತೀಚೆಗೆ ಇಂದೋರ್ ಮೂಲದ ವ್ಯಂಗ್ಯಚಿತ್ರಕಾರ ಹೇಮಂತ ಮಾಳವೀಯ ಅವರಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಮಾಳವೀಯ ಅವರ ವ್ಯಂಗ್ಯಚಿತ್ರವು “ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮಿತಿಯನ್ನು ಮೀರಿದೆ” ಎಂದು ಅದು ಹೇಳಿದೆ. ಮಾಳವೀಯ … Continued

ಪ್ರಜ್ವಲ್ ರೇವಣ್ಣ ಮೂರು ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು : ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಒಂದು ಜಾಮೀನು ಮತ್ತು ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ. ಪ್ರಜ್ವಲ್‌ ವಿರುದ್ಧ ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ, ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡಿದ ಆರೋಪದ ಸಂಬಂಧ ಪ್ರತ್ಯೇಕವಾಗಿ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ. … Continued

ಅಪಹರಣ ಪ್ರಕರಣ : ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟಿನಿಂದ ದೊಡ್ಡ ರಿಲೀಫ್‌

ನವದೆಹಲಿ:  ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಸಂತ್ರಸ್ತೆ ಅಪಹರಣದ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಭವಾನಿ ರೇವಣ್ಣಗೆ (Bhavani Revanna) ರಿಲೀಫ್‌ ಸಿಕ್ಕಿದೆ. ಕರ್ನಾಟಕ ಹೈಕೋರ್ಟ್‌ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಎತ್ತಿ ಹಿಡಿದಿದೆ. ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ ಮತ್ತು ಉಜ್ಜಲ್‌ ಭುಯಾನ್‌ … Continued

ಅತ್ಯಾಚಾರ ಆರೋಪ ಪ್ರಕರಣ : ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು : ನ್ಯಾಯಾಂಗ ಬಂಧನದಲ್ಲಿರುವ ಅತ್ಯಾಚಾರದ ಪ್ರಕರಣದಲ್ಲಿ ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಜಾಮೀನು ಅರ್ಜಿಗಳ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ಕಾಯ್ದಿರಿಸಿದೆ. ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ಜಾಮೀನು ಕೋರಿದ್ದಾರೆ. ಉಳಿದಂತೆ ಮತ್ತೊಂದು ಅತ್ಯಾಚಾರ ಎಸಗಿರುವ ಆರೋಪ ಮತ್ತು ಅಶ್ಲೀಲ ವೀಡಿಯೊ ಹಂಚಿಕೆಯ ಸಂಬಂಧ ದಾಖಲಾಗಿರುವ ಎರಡು ಪ್ರತ್ಯೇಕ … Continued

ಮಹಿಳೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್‌

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ನ್ಯದ ಪ್ರಕರಣದ ಸಂತ್ರಸ್ತೆ ಅಪಹರಿಸಿದ ಆರೋಪಿತ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಶಾಸಕ ಎಚ್‌. ಡಿ. ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಶುಕ್ರವಾರ ಆಲಿಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಕೃಷ್ಣ ಎಸ್. … Continued

ಮಧ್ಯಂತರ ನಿರೀಕ್ಷಣಾ ಜಾಮೀನು ಬೆನ್ನಲ್ಲೇ ಎಸ್ಐಟಿ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ…

ಬೆಂಗಳೂರು: ಸುಮಾರು ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ (Bhavani Revanna) ಅವರು ಕೆ.ಆರ್‌.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದ ವಿಚಾರಣೆಗಾಗಿ ಎಚ್ಐಟಿ ಮುಂದೆ ಹಾಜರಾಗಿದ್ದಾರೆ. ಈ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್‌ ಅವರಿಗೆ ಒಂದು ವಾರದ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು … Continued

ಸಂತ್ರಸ್ತೆ ಅಪಹರಣ ಪ್ರಕರಣ : ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್‌ ಕದತಟ್ಟಿದ ಭವಾನಿ ರೇವಣ್ಣ..

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಹಗರಣಕ್ಕೆ ಸಂಬಂಧಿಸಿದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಅರ್ಜಿ ವಿಚಾರಣೆಗೆ ನಿಗದಿಯಾಗಬೇಕಿದೆ. ವಿಶೇಷ ನ್ಯಾಯಾಲಯವು ಮೇ 31ರಂದು ಭವಾನಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಭವಾನಿ ಹೈಕೋರ್ಟ್‌ ಕದತಟ್ಟಿದ್ದಾರೆ. ವಿಶೇಷ … Continued