ಸಿಬಿಐ ಜಂಟಿ ನಿರ್ದೇಶಕರಾಗಿ ಐವರು ಡಿಐಜಿಗಳನ್ನು ನೇಮಕ ಮಾಡಿದ ಕೇಂದ್ರ

ನವದೆಹಲಿ : ಕೇಂದ್ರೀಯ ತನಿಖಾ ದಳದಲ್ಲಿ (ಸಿಬಿಐ) ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಆಗಿ ಕಾರ್ಯನಿರ್ವಹಿಸುತ್ತಿರುವ ಐವರು ಐಪಿಎಸ್ ಅಧಿಕಾರಿಗಳನ್ನು ಸೋಮವಾರ ಜಂಟಿ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ. 2005ರ ಬ್ಯಾಚ್‌ನ ಭಾರತೀಯ ಪೊಲೀಸ್ ಸೇವೆಯ (IPS) ಮಹಾರಾಷ್ಟ್ರ ಕೇಡರ್‌ನ ಅಧಿಕಾರಿ, ಪ್ರಸ್ತುತ ಡಿಐಜಿ (DIG) ಆಗಿ ಕಾರ್ಯನಿರ್ವಹಿಸುತ್ತಿರುವ, ಎಸ್‌. … Continued

ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರನ್ನು ನೇಮಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರನ್ನಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಆರೋಗ್ಯ ಸಚಿವ ದಿನೇಶ ಗುಂಡೂರಾವ್, ಕಂದಾಯ ಸಚಿವ ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್​ ಖರ್ಗೆ, ಅರಣ್ಯ ಇಲಾಖೆ ಸಚಿವ ಈಶ್ವರ … Continued

ಕೆಪಿಸಿಸಿ ವಕ್ತಾರರಾಗಿ ಆಯನೂರು ಮಂಜುನಾಥ ನೇಮಕ

ಬೆಂಗಳೂರು : ಒಂದು ತಿಂಗಳ ಹಿಂದಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಆಯನೂರು ಮಂಜುನಾಥ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಆದೇಶ ಹೊರಡಿಸಿದ್ದು, ಆಯನೂರು ಮಂಜುನಾಥ ಅವರು ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ರಾಜಕೀಯ ಸಾಮಾಜಿಕ ವಿಷಯಗಳ ಬಗ್ಗೆ ಚರ್ಚೆಯಲ್ಲಿ … Continued

ಸಾರಿಗೆ ಸಂಸ್ಥೆಗೆ 13 ಸಾವಿರ ಸಿಬ್ಬಂದಿ ನೇಮಕ, 4 ಸಾವಿರ ಬಸ್‌ಗಳ ಖರೀದಿ : ಸಚಿವ ರಾಮಲಿಂಗಾರೆಡ್ಡಿ

ಮೈಸೂರು: ಕೆಎಸ್‌ಆರ್‌ಟಿಸಿ ಹಾಗೂ ಇತರೆ ನಿಗಮಗಳಿಗೆ 13 ಸಾವಿರ ಸಿಬ್ಬಂದಿ ನೇಮಕ ಮಾಡಲಾಗುವುದು ಹಾಗೂ 4 ಸಾವಿರ ಬಸ್‌ಗಳನ್ನು ಖರೀದಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಕೆಎಸ್‌ಆರ್‌ಟಿಸಿ ಎಸ್‌ಸಿ/ಎಸ್‌ಟಿ ಅಧಿಕಾರಿಗಳ ಮತ್ತು ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಶನಿವಾರ ನಡೆದ ಡಾ. ಬಿಆರ್ ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಎಲ್ಲಾ … Continued