ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಸೇರಿ 8 ಖಲಿಸ್ತಾನಿ ಭಯೋತ್ಪಾದಕರನ್ನು ಬಂಧಿಸಿದ ಅಮೆರಿಕದ ಎಫ್‌ ಬಿಐ

ಕ್ಯಾಲಿಫೋರ್ನಿಯಾ: ಅಮೆರಿಕದಲ್ಲಿ (United States) ಗ್ಯಾಂಗ್‌ಗೆ ಸಂಬಂಧಿತ ಅಪಹರಣ (Kidnapping) ಮತ್ತು ಚಿತ್ರಹಿಂಸೆ ಪ್ರಕರಣಗಳ ತನಿಖೆಯ ಸಂಬಂಧ ಭಾರತೀಯ ಮೂಲದ (Indian-Origin ) ಎಂಟು ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಬಂಧಿತರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ಬೇಕಾಗಿರುವ ಪಂಜಾಬ್‌ನ ಗ್ಯಾಂಗ್‌ಸ್ಟರ್ ಪವಿತ್ತರ್ ಸಿಂಗ್ ಬಟಾಲಾ ಕೂಡ ಸೇರಿದ್ದಾನೆ. ಬಟಾಲಾ ನಿಷೇಧಿತ ಭಯೋತ್ಪಾದಕ ಸಂಘಟನೆ … Continued

ದಾಂಡೇಲಿ : ಮಾಡಿಕೊಂಡ ಸಾಲ ತೀರಿಸಲು 20 ದಿನದ ಮಗು ಮಾರಾಟ ಮಾಡಿದ ದಂಪತಿ‌…!

ಕಾರವಾರ : ಮಾಡಿಕೊಂಡ ಸಾಲ ತೀರಿಸಲು ದಂಪತಿ‌ ತಮ್ಮ 20 ದಿನದ ಮಗುವನ್ನು ಮಾರಾಟ ಮಾಡಿರುವ ಘಟನೆ ಉತ್ತರ ಕ‌ನ್ನಡ ಜಿಲ್ಲೆಯ ದಾಂಡೇಲಿ (Dandeli) ತಾಲೂಕಿನ ಹಳೇ ದಾಂಡೇಲಿಯಲ್ಲಿ ನಡೆದಿದೆ. ಹಳೇ ದಾಂಡೇಲಿಯ ದೇಶಪಾಂಡೆ ನಗರದ ನಿವಾಸಿಯಾದ ಮಾಹೀನ್ ಎಂಬ ಮಹಿಳೆ ಜೂನ್ 17 ರಂದು ದಾಂಡೇಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. … Continued

ವಿಜಯಪುರ : 27 ವರ್ಷಗಳಿಂದ ತಲೆಮರೆಸಿಕೊಂಡಿದ್ದ 58 ಮಂದಿ ಸಾವಿಗೀಡಾಗಿದ್ದ ಕೊಯಮತ್ತೂರು ಸ್ಫೋಟದ ಆರೋಪಿ ಬಂಧನ

ವಿಜಯಪುರ :  ಸಾದಿಕ್ ಅಲಿಯಾಸ್ ಟೈಲರ್ ರಾಜಾ ಎಂಬಾತನನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. 27 ವರ್ಷಗಳಿಂದ ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ ಶಂಕಿತನನ್ನು ಅಂತಿಮವಾಗಿ ಭಯೋತ್ಪಾದನಾ ನಿಗ್ರಹ ದಳ ಮತ್ತು ಕೊಯಮತ್ತೂರು ನಗರ ಪೊಲೀಸರ ಜಂಟಿ ತಂಡವು ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಬಂಧಿಸಿದೆ. 58 ಜನರ ಸಾವು ಹಾಗೂ 250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದ … Continued

ಉದ್ಯಮಿ, ಬಿಜೆಪಿ ನಾಯಕ ಗೋಪಾಲ ಖೇಮ್ಕಾ ಹತ್ಯೆ ಪ್ರಕರಣ ; ಅವರ ಅಂತ್ಯಕ್ರಿಯೆಗೆ ಹಾರ ಹಿಡಿದುಕೊಂಡು ಬಂದ ಆರೋಪಿ…!

ಪಾಟ್ನಾ; ಬಿಹಾರದಲ್ಲಿ ನಡೆದ ಉದ್ಯಮಿ ಹಾಗೂ ಹಾಗೂ ಬಿಜೆಪಿ ನಾಯಕ ಗೋಪಾಲ ಖೇಮ್ಕಾ ಹತ್ಯೆಗೆ ಸಂಬಂಧಿಸಿದಂತೆ ಪಾಟ್ನಾ ಪೊಲೀಸರು ಭಾನುವಾರ ಒಂದು ಡಜನ್‌ಗೂ ಹೆಚ್ಚು ಶಂಕಿತರನ್ನು ಬಂಧಿಸಿದ್ದಾರೆ. ಹಾರ ಹಿಡಿದುಕೊಂಡು ಉದ್ಯಮಿ ಗೋಪಾಲ ಖೇಮ್ಕಾ ಅವರ ಅಂತ್ಯಕ್ರಿಯೆಗೆ ಆಗಮಿಸಿದ್ದ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಜುಲೈ 6 ರಂದು ಖೇಮ್ಕಾ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದಾಗ ಪಾಟ್ನಾದ ಪುನ್‌ಪುನ್ … Continued

ವೀಡಿಯೊ..| ಬಾಲಕರ ಹುಚ್ಚಾಟ : ರೀಲ್‌ ಸ್ಟಂಟ್‌ ಮಾಡಲು ವೇಗವಾಗಿ ಚಲಿಸುತ್ತಿದ್ದ ರೈಲಿನ ಕೆಳಗೆ ಮಲಗಿದ ಬಾಲಕ : ಮೂವರು ಅಪ್ರಾಪ್ತರ ಬಂಧನ

ಭುವನೇಶ್ವರ: ಸಾಮಾಜಿಕ ಮಾಧ್ಯಮದಲ್ಲಿ ಪ್ರಭಾವಿಗಳಾಗಲು ನಡೆಸುವ ರೀಲ್ ಉನ್ಮಾದವು ಅನೇಕ ಸಂದರ್ಭಗಳಲ್ಲಿ ಅವರ ಜೀವಕ್ಕೇ ಅಪಾಯವನ್ನುಂಟು ಮಾಡುತ್ತಿವೆ. ಇಂಥದ್ದೇ ಅಪಾಯಕಾರಿಯಾದ ರೀಲ್‌ ಮಾಡಲು ಹೋದ ಮೂವರು ಅಪ್ರಾಪ್ತ ಬಾಲಕರನ್ನು ಒಡಿಶಾದ ಬೌಧ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ, ಈ ಸಾಹಸದಲ್ಲಿ ಒಬ್ಬ ಬಾಲಕ ರೈಲು ಹಳಿಗಳ ಮೇಲೆ ಮಲಗಿದ್ದಾಗ ರೈಲು ಅತಿ ವೇಗದಲ್ಲಿ ಆತನ ಮೇಲಿಂದಲೇ ಹಾದುಹೋಗಿದೆ. ಪುರುನಪಾಣಿ … Continued

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ: ಉದ್ಯಮಿ ನೀರವ್ ಮೋದಿ ಸಹೋದರ ನೇಹಲ್ ಮೋದಿ ಅಮೆರಿಕದಲ್ಲಿ ಬಂಧನ

ನವದೆಹಲಿ: ದೇಶದಿಂದ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ ಸಹೋದರ ನೇಹಲ್ ಮೋದಿಯನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಸಿಬಿಐ ಮತ್ತು ಇಡಿ ಅಧಿಕಾರಿಗಳು ಈತನನ್ನು ಹಸ್ತಾಂತರಿಸಬೇಕು ಎಂದು ಕೋರಿಕೆ ಸಲ್ಲಿಸಿದ ನಂತರ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿಯ ಕಿರಿಯ ಸಹೋದರ ನೇಹಲ್ ದೀಪಕ್ ಮೋದಿಯನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) … Continued

ಪುತ್ತೂರು | ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ ; ಬಿಜೆಪಿ ಮುಖಂಡನ ಪುತ್ರ ಅರೆಸ್ಟ್‌

ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಆಕೆ ಗರ್ಭಧರಿಸಿದ ನಂತರ ಮದುವೆಯಾಗಲು ನಿರಾಕರಿಸಿ ವಂಚನೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಪುತ್ತೂರು ಬಿಜೆಪಿ ಮುಖಂಡ ಹಾಗೂ ಜಗನ್ನಿವಾಸ ರಾವ್‌ ಅವರ ಪುತ್ರನಾದ ಕೃಷ್ಣ ಜೆ.ರಾವ್‌ ಎಂಬಾತನನ್ನು ಪೊಲೀಸರು … Continued

ಬಿಜೆಪಿ ಮುಖಂಡ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ ನೆಟ್ಟಾರು ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ), ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಶುಕ್ರವಾರ ಬಂಧಿಸಿದೆ. ಇಂದು, ಶುಕ್ರವಾರ (ಜುಲೈ ೪) ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕತಾರ್‌ನಿಂದ ಆಗಮಿಸಿದ ಆರೋಪಿ ಅಬ್ದುಲ್ ರೆಹಮಾನ್ ಎಂಬಾತನನ್ನು ಎನ್‌ಐಎ ತಂಡ … Continued

ಅಪ್ರಾಪ್ತ ವಿದ್ಯಾರ್ಥಿಗೆ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಮುಂಬೈ ಶಿಕ್ಷಕಿ…! ಆತಂಕ ನಿವಾರಕ ಮಾತ್ರೆಯನ್ನೂ ನೀಡುತ್ತಿದ್ದಳಂತೆ

ಮುಂಬೈ:   ದೇಶವನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಶಿಕ್ಷಕಿಯೊಬ್ಬಳು ವಿದ್ಯಾರ್ಥಿಯೊಬ್ಬನನ್ನು 5 ಸ್ಟಾರ್‌ ಹೋಟೆಲ್‌ಗೆ ಕರೆದೊಯ್ದು ಅನೇಕ ಬಾರಿ ಲೈಂಗಿಕ ದೌರ್ಜಜ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಮುಂಬೈಯ ಪ್ರತಿಷ್ಠಿತ ಶಾಲೆಯೊಂದರ 40 ವರ್ಷದ, ಇಂಗ್ಲಿಷ್‌ ಶಿಕ್ಷಕಿ ಕಳೆದೊಂದು ವರ್ಷದಿಂದ 16 ವರ್ಷದ ಬಾಲಕನ್ನು ಹೊಟೇಲ್‌ಗೆ ಕರೆದೊಯ್ದು ಮದ್ಯಪಾನ ಮಾಡಿಸಿ ಲೈಂಗಿಕವಾಗಿ ದೌರ್ಜನ್ಯ ಎಸಗಿದ್ದಾಳೆ. ಸದ್ಯ ಆಕೆಯನ್ನು … Continued