ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಸಿಬ್ಬಂದಿ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAL) ಭದ್ರತಾ ತಪಾಸಣೆಯ ನೆಪದಲ್ಲಿ ದಕ್ಷಿಣ ಕೊರಿಯಾದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಿಮಾನ ನಿಲ್ದಾಣದ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜನವರಿ 19, 2026 ರಂದು ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ದಕ್ಷಿಣ ಕೊರಿಯಾಕ್ಕೆ ಪ್ರಯಾಣಿಸಲು ಮಹಿಳೆ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಇಮಿಗ್ರೇಷನ್ ಪ್ರಕ್ರಿಯೆ … Continued

ತನ್ನ ವಿರುದ್ಧ ಬಸ್ಸಿನಲ್ಲಿ ಲೈಂಗಿಕ ಕಿರುಕುಳದ ಆರೋಪದಿಂದ ನೊಂದು ವ್ಯಕ್ತಿ ಆತ್ಮಹತ್ಯೆ ; ಮಹಿಳೆಯ ಬಂಧನ

ಕೇರಳದ ಬಸ್ಸಿನಲ್ಲಿ 42 ವರ್ಷದ ವ್ಯಕ್ತಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದ 35 ವರ್ಷದ ಮಹಿಳಾ ಇನ್ಫ್ಲುಯೆನ್ಸರ್ (Influencer) ಅವರನ್ನು ಬಂಧಿಸಲಾಗಿದೆ. ಈಕೆಯ ಆರೋಪದಿಂದ ಮನನೊಂದ ವ್ಯಕ್ತಿಯು ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿಬಂದ ನಂತರ ಈ ಬಂಧನವಾಗಿದೆ. ಕಳೆದ ವಾರ ಶಿಮ್ಜಿತಾ ಮುಸ್ತಫಾ ಮತ್ತು ದೀಪಕ ಯು ಎಂಬುವವರು ಒಂದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. … Continued

ಕುಂದಗೋಳ ; ಅಪ್ರಾಪ್ತರಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ

ಹುಬ್ಬಳ್ಳಿ : ಧಾರವಾಡ (Dharawad) ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಶಾಲಾ ಬಾಲಕರೇ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಬುಧವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಬಾಲಕನನ್ನು ಮೂವರು ಬಾಲಕರು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. … Continued

ಅಯೋಧ್ಯೆ ರಾಮಮಂದಿರ ಸಂಕೀರ್ಣದಲ್ಲಿ ನಮಾಜ್ ಮಾಡಲು ಯತ್ನಿಸಿದ ಕಾಶ್ಮೀರಿ ವ್ಯಕ್ತಿಯ ಬಂಧನ

ಅಯೋಧ್ಯೆ: ಅಯೋಧ್ಯೆಯ ಭವ್ಯ ರಾಮಮಂದಿರ ಸಂಕೀರ್ಣದೊಳಗೆ ನಮಾಜ್ ಮಾಡಲು ಯತ್ನಿಸಿದ ಮತ್ತು ಭದ್ರತಾ ಸಿಬ್ಬಂದಿ ತಡೆದಾಗ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಕಾಶ್ಮೀರದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಬಂಧಿತನನ್ನು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ನಿವಾಸಿ ಅಹ್ಮದ್ ಶೇಖ್ (55) ಎಂದು ಗುರುತಿಸಲಾಗಿದೆ. ಶುಕ್ರವಾರ ಮಂದಿರಕ್ಕೆ ಪ್ರವೇಶಿಸಿದ ಈತ, ದರ್ಶನದ ನಂತರ … Continued

ಸುಳ್ಳು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿ 10 ಕೋಟಿ ರೂ.ಗಳಿಗೆ ಬೇಡಿಕೆ ಇಟ್ಟಿದ್ದ ಇಬ್ಬರು ಮಹಿಳೆಯರ ಬಂಧನ

ಮುಂಬೈ: ಉದ್ದೇಶಪೂರ್ವಕವಾಗಿ ಲೈಂಗಿಕ ಕಿರುಕುಳದ ಸುಳ್ಳು ಪ್ರಕರಣ ದಾಖಲಿಸಿ, ಉದ್ಯಮಿಯೊಬ್ಬರಿಂದ 10 ಕೋಟಿ ರೂಪಾಯಿ ಹಣ ನೀಡುವಂತೆ ಬೇಡಿಕೆಯಿಟ್ಟಿದ್ದ ಇಬ್ಬರು ಮಹಿಳೆಯರನ್ನು ಮುಂಬೈ ಪೊಲೀಸರ ಸುಲಿಗೆ ವಿರೋಧಿ ದಳ (AEC) ಬಂಧಿಸಿದೆ ಎಂದು ವರದಿಯಾಗಿದೆ. ಎನ್‌ಡಿಟಿವಿ ವರದಿ ಪ್ರಕಾರ, ಬಂಧಿತರನ್ನು ಹೇಮಲತಾ ಪಾಟ್ಕರ (39) ಮತ್ತು ಅಮ್ರೀನಾ ಇಕ್ಬಾಲ್ ಜವೇರಿ (33) ಎಂದು ಗುರುತಿಸಲಾಗಿದೆ. ಉದ್ಯಮಿಯೊಬ್ಬರು … Continued

ಕೊಲ್ಲೂರು ದೇವಸ್ಥಾನದ ನಕಲಿ ವೆಬ್‌ಸೈಟ್ ಸೃಷ್ಟಿಸಿ ವಂಚನೆ; ವ್ಯಕ್ತಿಯ ಬಂಧನ

ಉಡುಪಿ : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಅಧಿಕೃತ ವೆಬ್‌ಸೈಟ್ ಅನ್ನು ಹೋಲುವ ನಕಲಿ ಜಾಲತಾಣವನ್ನು ಸೃಷ್ಟಿಸಿ, ಭಕ್ತರಿಂದ ಕೊಠಡಿ ಕಾಯ್ದಿರಿಸುವ (Room Booking) ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ರಾಜಸ್ಥಾನದ 21 ವರ್ಷದ ಯುವಕನನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಆಳ್ವಾರ್ ಜಿಲ್ಲೆಯ ನಿವಾಸಿ ನಾಸಿರ್ ಹುಸೇನ್ ಬಂಧಿತ ಆರೋಪಿ. ಈತನನ್ನು ಡಿಸೆಂಬರ್ 19 … Continued

ಉಡುಪಿ: ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ರವಾನೆ, ಮತ್ತೋರ್ವ ಆರೋಪಿ ಬಂಧನ

ಉಡುಪಿ: ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ ನೌಕರರು ಭಾರತದ ನೌಕಾಪಡೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಅಕ್ರಮವಾಗಿ ಶೇರ್ ಮಾಡಿ ಲಾಭ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಗುಜರಾತಿನ ಆನಂದ ತಾಲೂಕಿನ ಕೈಲಾಸ ​ನಗರದ ಹೀರೇಂದ್ರಕುಮಾರ (34) ಬಂಧಿತ ಆರೋಪಿಯಾಗಿದ್ದಾನೆ.  ಈ ಪ್ರಕರಣದಲ್ಲಿ ಈಗ  ಬಂಧಿತರ ಸಂಖ್ಯೆ ಮೂರಕ್ಕೆ ಏರಿದೆ. … Continued

ಫುಟ್ಬಾಲ್‌ ದಂತಕಥೆ ಲಿಯೋನೆಲ್ ಮೆಸ್ಸಿ ನೋಡಲು ಸಾಧ್ಯವಾಗದ್ದಕ್ಕೆ ಅಭಿಮಾನಿಗಳಿಂದ ದಾಂಧಲೆ ; ಆಯೋಜಕನ ಬಂಧನ

ಕೋಲ್ಕತ್ತಾ: ವಿಶ್ವ ಫುಟ್‌ಬಾಲ್‌ನ ದಂತಕಥೆ ಲಿಯೋನೆಲ್ ಮೆಸ್ಸಿ ಅವರ ‘ಗೋಟ್ ಟೂರ್’ (GOAT Tour) ಭಾಗವಾಗಿ ಕೋಲ್ಕತ್ತಾದ ಯುವ ಭಾರತಿ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಕಾರ್ಯಕ್ರಮವು, ಮೆಸ್ಸಿಯನ್ನು ನೋಡಲು ಆಗಮಿಸಿದ್ದ ಸಾವಿರಾರು ಅಭಿಮಾನಿಗಳಿಗೆ ನಿರಾಶೆ ಮತ್ತು ಗೊಂದಲಕ್ಕೆ ಕಾರಣವಾಯಿತು. ಶನಿವಾರ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ವ್ಯಾಪಕ ಅವ್ಯವಸ್ಥೆಯಿಂದಾಗಿ ವಿಶ್ವಕಪ್ ವಿಜೇತ ನಾಯಕ ಲಿಯೋನೆಲ್ ಮೆಸ್ಸಿ ಬೇಗನೆ … Continued

ಗೋವಾ ನೈಟ್‌ಕ್ಲಬ್ ಅಗ್ನಿ ದುರಂತ: ಥೈಲ್ಯಾಂಡ್​ಗೆ ಪರಾರಿಯಾಗಿದ್ದ ಮಾಲೀಕರ ಬಂಧನ

ಪಣಜಿ: ಗೋವಾದ ‘ಬಿರ್ಚ್ ಬೈ ರೋಮಿಯೋ ಲೇನ್’ (Birch by Romeo Lane) ಕ್ಲಬ್‌ನಲ್ಲಿ ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಥೈಲ್ಯಾಂಡ್(Thailand)​ಗೆ ಪರಾರಿಯಾಗಿದ್ದ ಮಾಲೀಕರನ್ನು ಬಂಧಿಸಲಾಗಿದೆ. ಮಾಲೀಕರಾದ ಸೌರಭ್ ಮತ್ತು ಗೌರವ್ ಲೂಥ್ರಾ ಸಹೋದರರನ್ನು ಥಾಯ್ಲೆಂಡ್‌ನ ಫುಕೆಟ್‌ನಲ್ಲಿ ಬಂಧಿಸಲಾಗಿದೆ. ಶನಿವಾರ ಈ ಕ್ಲಬ್‌ನಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ 25 ಜನರು ಸಾವಿಗೀಡಾಗಿದ್ದರು. ಬೆಂಕಿ ಅನಾಹುತ ಸಂಭವಿಸುತ್ತಿದ್ದಂತೆ … Continued

ಮಾಜಿ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಪುತ್ರಿ ರುಬೈಯಾ ಸಯೀದ್ ಅಪಹರಣ ಪ್ರಕರಣ ; 36 ವರ್ಷಗಳ ನಂತರ ಆರೋಪಿ ಬಂಧನ

ಶ್ರೀನಗರ: ಸುಮಾರು 36 ವರ್ಷಗಳ ಹಿಂದೆ ನಡೆದ, ದೇಶಾದ್ಯಂತ ಸುದ್ದಿಯಾಗಿದ್ದ ಅಂದಿನ ಕೇಂದ್ರ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿ ರುಬೈಯಾ ಸಯೀದ್ ಅವರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕೇಂದ್ರ ತನಿಖಾ ದಳ (CBI) ಸೋಮವಾರ (ಡಿಸೆಂಬರ್ 1) ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಶಫತ್ ಅಹ್ಮದ್ … Continued