ಅಕ್ರಮ ಹಣ ವರ್ಗಾವಣೆ ಪ್ರಕರಣ : ಎಸ್‌ ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಜಿ ಬಂಧಿಸಿದ ಇ.ಡಿ.

ನವದೆಹಲಿ : ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಜಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ವರದಿಯಾಗಿದೆ. ಎಂ.ಕೆ. ಫೈಜಿ ಅವರನ್ನು ಅಕ್ರಮ ಹಣ ವರ್ಗಾವಣೆ-ವಿರೋಧಿ ಕಾನೂನಿನ ಅಡಿಯಲ್ಲಿ ಮಂಗಳವಾರ … Continued

ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್‌ ಪ್ರಕರಣ : ಕಾಂಗ್ರೆಸ್ ಕಾರ್ಯಕರ್ತೆ ಬಂಧನ

ಬೆಳಗಾವಿ : ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಿಸಿ 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತೆಯನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಮಂಜುಳಾ ಬಂಧಿತ ಆರೋಪಿ. ಈ ಪ್ರಣರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೆ ಏರಿದೆ. ಈ ಹಿಂದೆ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಆರೋಪಿಗಳನ್ನು ಬಂಧಿಸಿದ್ದರು. ಫೆ.14ರಂದು ಉದ್ಯಮಿ ಬಸವರಾಜ್ ಅಂಬಿ ಎಂಬುವರನ್ನು … Continued

ಬೆಳಗಾವಿ | ಮರಾಠಿ ಮಾತನಾಡಲು ಬರಲ್ಲ ಎಂದಿದ್ದಕ್ಕೆ ನಿರ್ವಾಹಕನ ಮೇಲೆ ಹಲ್ಲೆ : ಮತ್ತೊಬ್ಬ ಆರೋಪಿ ಬಂಧನ

ಬೆಳಗಾವಿ : ಮರಾಠಿ ಮಾತನಾಡಲು ಬರಲ್ಲ ಎಂದು ಹೇಳಿದ್ದಕ್ಕೆ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ಬಸ್‌ ನಿರ್ವಾಹಕ ಮಹಾದೇವ ಹುಕ್ಕೇರಿ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಮಾರಿಹಾಳ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಪ್ರಾಪ್ತ ಸೇರಿದಂತೆ ನಾಲ್ವರನ್ನು ಈಗಾಗಲೇ ಬಂಧಿಸಲಾಗಿದ್ದು, ಈಗ ಬಾಳೇಕುಂದ್ರಿಯ ಮೋಹನ ಹಂಚಿನಾಳ … Continued

ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ: ಮೌಲ್ವಿ ಬಂಧನ

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ್ದ ಆರೋಪ ಹೊತ್ತಿರುವ ಮೌಲ್ವಿಯನ್ನು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಘಟನೆ ನಡೆದು 11 ದಿನಗಳ ಬಳಿಕ  ಪೊಲೀಸರು ಆರೋಪಿ ಮುಫ್ತಿ ಮುಸ್ತಾಕ್ ಅವರನ್ನು ಬಂಧಿಸಿದ್ದಾರೆ. ಘಟನೆ ಬಳಿಕ ಮೌಲ್ವಿಯ ಭಾಷಣದ ವೀಡಿಯೊವೊಂದು ವೈರಲ್ ಆಗಿತ್ತು. ಗಲಭೆಗೆ … Continued

ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ: ಉತ್ತರ ಕನ್ನಡದ ಇಬ್ಬರು ಎನ್​ಐಎ ವಶಕ್ಕೆ

ಕಾರವಾರ : ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ ಮಾಡುತ್ತಿದ್ದ ಆರೋಪದಲ್ಲಿ ಉತ್ತರ ಕನ್ನಡ ಜಿಲ್ಲೆಯ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾರವಾರ ತಾಲೂಕಿನ ಮುದುಗಾ ಗ್ರಾಮದ ವೇತನ ತಾಂಡೇಲ ಹಾಗೂ ಅಂಕೋಲಾ ತಾಲೂಕಿನ ಹಳವಳ್ಳಿಯ ಅಕ್ಷಯ ನಾಯ್ಕ ಎಂಬವರನ್ನು ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರ ಬಗ್ಗೆ … Continued

ಮೈಸೂರು | ಅವಹೇಳನಕಾರಿ ಪೋಸ್ಟ್ : ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ; ಲಾಠಿ ಚಾರ್ಜ್

ಮೈಸೂರು: ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಅವಹೇಳನಕಾರಿ ಪೋಸ್ಟ್‌ ಮೈಸೂರಿನಲ್ಲಿ ಕೋಮು ಉದ್ವಿಗ್ನತೆ (Communal tension)ಗೆ ಕಾರಣವಾಗಿದೆ. ಒಂದು ಸಮುದಾಯದ ನೂರಾರು ಯುವಕರು ಪೊಲೀಸ್ ಠಾಣೆ ಹಾಗೂ ಡಿಸಿಪಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮೈಸೂರಿನ ಕಲ್ಯಾಣಿಗಿರಿ ನಿವಾಸಿ ಸುರೇಶ ಎಂಬವರನ್ನು ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಈ ಪೋಸ್ಟ್‌ ಅನ್ನು … Continued

ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ ; ಎಸ್‌ಐಟಿ ಯಿಂದ ನಾಲ್ವರ ಬಂಧನ

ಹೈದರಾಬಾದ್‌ : ತಿರುಪತಿ ಲಡ್ಡು ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಯಲ್ಲಿ ಸಿಬಿಐ ನೇತೃತ್ವದ ವಿಶೇಷ ತನಿಖಾ ತಂಡ (ಎಸ್‌ಐಟಿ) ನಾಲ್ವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡುವ ಲಡ್ಡುಗಳಲ್ಲಿ ಕಲಬೆರಕೆ ನಡೆದಿರುವ ಪ್ರಕರಣ ಇದಾಗಿದೆ. ಬಂಧಿತರನ್ನು ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ ವಿಪಿನ್ … Continued

ಆನ್‌ಲೈನ್‌ ಪ್ರೇಮಿಗಾಗಿ ಗಡಿದಾಟಿ ಪಾಕಿಸ್ತಾನಕ್ಕೆ ಹೋದ ಯುವಕ, ಇಸ್ಲಾಂಗೆ ಮತಾಂತರ, ಆದ್ರೆ ಆತನನ್ನು ತಿರಸ್ಕರಿಸಿದ ಪ್ರೇಮಿಕಾ : ಮುಂದಾಗಿದ್ದು…

ಉತ್ತರ ಪ್ರದೇಶದ 20 ವರ್ಷದ ವ್ಯಕ್ತಿಯೊಬ್ಬ ತನ್ನ ಆನ್‌ಲೈನ್‌ ಪ್ರೇಮಿಯನ್ನು ಹುಡುಕಲು ಗಡಿದಾಟಿ ಪಾಕಿಸ್ತಾನಕ್ಕೆ ಹೋಗಿದ್ದಾನೆ…! ಆದರೆ ಅದು ಆತ ಪಾಕಿಸ್ತಾನದಲ್ಲಿ ಜೈಲು ಶಿಕ್ಷೆಗೆ ಒಳಗಾಗುವ ಸಾಧ್ಯತೆಯನ್ನು ತಂದೊಡ್ಡಿದೆ…! ಗಡಿದಾಟಿ ಪಾಕಿಸ್ತಾನಕ್ಕೆ ಹೋದ ನಂತರ ಆತನ ಆನ್‌ಲೈನ್ ಪ್ರೇಮಿ ಮದುವೆಯ ಪ್ರಸ್ತಾಪವನ್ನು ತಿರಸ್ಕರಿದ್ದಾಳೆ, ಆಕೆಯ ತಿರಸ್ಕಾರದ ನಂತರ ಮಾನಸಿಕವಾಗಿ ಘಾಸಿಕೊಂಡ ಆತನಿಗೆ ಈಗ ಸಂಭವನೀಯ ಜೈಲು … Continued

ವೀಡಿಯೊ…| ರಜೆ ನೀಡಿಲ್ಲವೆಂದು 4 ಸಹೋದ್ಯೋಗಿಗಳಿಗೆ ಇರಿದ ಸರ್ಕಾರಿ ನೌಕರ ; ರಕ್ತಸಿಕ್ತ ಚಾಕು ಹಿಡಿದು ಜನನಿಬಿಡ ರಸ್ತೆಯಲ್ಲಿ ಓಡಾಟ..!

ಕೋಲ್ಕತ್ತಾ: ಮೇಲಧಿಕಾರಿಗಳು ತನಗೆ ರಜೆ ನೀಡಿಲ್ಲ ಎಂಬ ಕಾರಣಕ್ಕೆ ಪಶ್ಚಿಮ ಬಂಗಾಳದ ಸರ್ಕಾರಿ ಉದ್ಯೋಗಿಯೊಬ್ಬ ಕನಿಷ್ಠ ನಾಲ್ವರು ಸಹೋದ್ಯೋಗಿಗಳಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಆರೋಪಿಯನ್ನು ಅಮಿತಕುಮಾರ ಸರ್ಕಾರ್ ಎಂದು ಗುರುತಿಸಲಾಗಿದ್ದು, ಕೋಲ್ಕತ್ತಾದ ನ್ಯೂಟೌನ್ ಪ್ರದೇಶದ ಕರಿಗರಿ ಭವನದ ತಾಂತ್ರಿಕ ಶಿಕ್ಷಣ ವಿಭಾಗದಲ್ಲಿ ಈತ ಕೆಲಸ ಮಾಡುತ್ತಿದ್ದ. ಸರ್ಕಾರ್ ತನ್ನ ಸಹೋದ್ಯೋಗಿಗಳಿಗೆ ಚಾಕುವಿನಿಂದ … Continued

ಬೆಂಗಳೂರು | ಕದ್ದ ಹಣದಿಂದ ಗರ್ಲ್‌ ಫ್ರಂಡ್‌ಗೆ 3 ಕೋಟಿ ಮೌಲ್ಯ ಮನೆ ಗಿಫ್ಟ್‌ ನೀಡಿದ್ದ ಖತರ್ನಾಕ ಕಳ್ಳ…!

ಬೆಂಗಳೂರು: ದರೋಡೆ ಮಾಡಿದ ಹಣದಲ್ಲಿ ತನ್ನ ಗೆಳತಿಗೆ 3 ಕೋಟಿ ರೂಪಾಯಿ ಮನೆ ಕಟ್ಟಿಸಿಕೊಟ್ಟ ಕಳ್ಳನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು 37 ವರ್ಷದ ಪಂಚಾಕ್ಷರಿ ಸ್ವಾಮಿ ಎಂದು ಗುರುತಿಸಲಾಗಿದ್ದು, ಈತನಿಗೆ ಖ್ಯಾತ ಚಿತ್ರನಟಿಯೊಂದಿಗೂ ಸಂಪರ್ಕವಿತ್ತು ಎಂಬುದನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಬೆಂಗಳೂರಿನ ಮಡಿವಾಳ ಪೊಲೀಸರು ದೀರ್ಘಕಾಲದ ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿದ್ದ ಈತನನ್ನು … Continued