ದೆಹಲಿ ಜಲ ಮಂಡಳಿ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಎಎಪಿ ನಾಯಕ ಸತ್ಯೇಂದ್ರ ಜೈನ್ ಸೇರಿ 6 ಮಂದಿ ಬಂಧನ

ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ಹಿರಿಯ ನಾಯಕ ಹಾಗೂ ದೆಹಲಿಯ ಮಾಜಿ ಜಲ ಸಚಿವ ಸತ್ಯೇಂದ್ರ ಜೈನ್ ಅವರನ್ನು ದೆಹಲಿ ಜಲ ಮಂಡಳಿ (DJB) ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಹಾಗೂ ಅವ್ಯವಹಾರ ನಡೆದಿದೆ ಎಂಬ ಆರೋಪದ ಮೇಲೆ ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ (ACB) ಬಂಧಿಸಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸುಮಾರು 18 … Continued

ಪ್ರಿಯಕರನ ಜೊತೆ ಸೇರಿ ಗಂಡ, 4 ವರ್ಷದ ಮಗನನ್ನು ಉಸಿರುಗಟ್ಟಿಸಿ ಕೊಂದ ಪತ್ನಿ

ಬೆಂಗಳೂರು : ನಗರದ ಚಿಕ್ಕಬಾಣಾವರದಲ್ಲಿ ಗಂಡ ಹಾಗೂ ನಾಲ್ಕು ವರ್ಷದ ಮಗನನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಆರೋಪದ ಮೇಲೆ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮಲಗಿದ್ದಲ್ಲೇ ಪತಿ ಮತ್ತು ನಾಲ್ಕು ವರ್ಷದ ಮುಗ್ಧ ಕಂದಮ್ಮನ ಜೀವ ತೆಗೆದ ಪತ್ನಿ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಆರೋಪಿಗಳನ್ನು ಹರಿಣಿ ಮತ್ತು ವಿನಯಕುಮಾರ ಎಂದು ಗುರುತಿಸಲಾಗಿದೆ. … Continued

ವಿಡಿಯೋ | ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆಗೆ ಯತ್ನ ; ಜೆಡಿಎಸ್‌ ನಾಯಕನ ಬಂಧನ

ಬೆಂಗಳೂರು: ಟ್ರಾಫಿಕ್‌ನಲ್ಲಿ ತಮ್ಮ ವಾಹನ ನಿಲ್ಲಿಸಿದ ಕಾರಣಕ್ಕೆ ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸ್ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿ, ಅವರ ಕಾಲರ್ ಹಿಡಿದು ಹಲ್ಲೆಗೆ ಮುಂದಾದ ಆರೋಪದ ಮೇಲೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಬೆಂಗಳೂರಿನ ಗೊಟ್ಟಿಗೆರೆ ಜಂಕ್ಷನ್‌ನಲ್ಲಿ ಹುಳಿಮಾವು ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಅರುಣ … Continued

ಶಿರಸಿ : 46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

ಶಿರಸಿ: ಕಳ್ಳತನ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬರೋಬ್ಬರಿ 46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಪರ್ಕಳ ಪೋಸ್ಟ್‌ ವ್ಯಾಪ್ತಿಯ ಹೇರ್ಗ ಗ್ರಾಮದ ನಿವಾಸಿ ಮಹಮ್ಮದ್ ಯೂಸುಫ್ (68) ಬಂಧಿತ ಆರೋಪಿ. ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ … Continued

ಟಿಟಿಪಿ ಸಂಪರ್ಕದ ಶಂಕೆ: ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯ ಬಂಧನ

ಬೆಂಗಳೂರು: ಪಾಕಿಸ್ತಾನದಲ್ಲಿನ ನಿಷೇಧಿತ ಉಗ್ರ ಸಂಘಟನೆಯಾದ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಜತೆ ಸಂಪರ್ಕ ಹೊಂದಿದ್ದಾನೆಂದು ಶಂಕಿಸಲಾದ ಹಾಗೂ ಪಾಕಿಸ್ತಾನ ಸೇನೆಯ ವಿರುದ್ಧ ದಾಳಿ ನಡೆಸಲು ಸಂಚು ರೂಪಿಸಿದ್ದನೆಂದು ಆರೋಪಿಸಲಾದ 25 ವರ್ಷದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನೌಪುರ ಗ್ರಾಮದ ನಿವಾಸಿ ಅಸಾಫುಲ್ ಮಲ್ಲಿಕ್ ಎಂದು … Continued

ಪಾಕಿಸ್ತಾನ–ಐಸಿಸ್‌ ನಂಟಿನ ಶಂಕೆ : ಕಲಬುರಗಿಯಲ್ಲಿ ಇಬ್ಬರು ವಶಕ್ಕೆ

ಕಲಬುರಗಿ: ಪಾಕಿಸ್ತಾನದ ಜೊತೆ ಸಂಪರ್ಕ ಹೊಂದಿರುವ ಹಾಗೂ ಉಗ್ರ ಸಂಘಟನೆ ಐಸಿಸ್‌ (ISIS) ಜೊತೆ ಶಂಕಿತ ನಂಟು ಹೊಂದಿರುವ ಆರೋಪದ ಮೇರೆಗೆ ಉತ್ತರ ಪ್ರದೇಶ ಮೂಲದ ಇಬ್ಬರನ್ನು ಕಲಬುರಗಿ ಜಿಲ್ಲೆಯಲ್ಲಿ ಉತ್ತರ ಪ್ರದೇಶದ ಭಯೋತ್ಪಾದನೆ ನಿಗ್ರಹ ದಳ (UP ATS) ಬಂಧಿಸಿದೆ. ಕೇಂದ್ರ ಗುಪ್ತಚರ ಸಂಸ್ಥೆಯಿಂದ ಲಭಿಸಿದ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆಸಲಾಗಿದೆ … Continued

ಬೀದರ ಎಟಿಎಂ ದರೋಡೆ ಪ್ರಕರಣ ; 19 ತಿಂಗಳ ಬಳಿಕ ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ

ಬೀದರ: ಇಡೀ ರಾಜ್ಯವನ್ನೆ ಬೆಚ್ಚಿ ಬೀಳಿಸಿದ್ದ ಬೀದರ ಎಟಿಎಂ ದರೋಡೆ ಹಾಗೂ ವ್ಯಾನ್ ಸಿಬ್ಬಂದಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 19 ತಿಂಗಳ ನಂತರ ಪೊಲೀಸರು ಕೊನೆಗೂ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ್ದಾರೆ. ದರೋಡೆ ಮತ್ತು ಕೊಲೆ ಪ್ರಕರಣದ ಆರೋಪಿಗಳಾದ ಬಿಹಾರದ ವೈಶಾಲಿ ಜಿಲ್ಲೆಯ ಫತೇಪುರ್ ಫುಲ್ವಾರಿಯಾ ನಿವಾಸಿ ಅಮನ್ ಕುಮಾರ ಮತ್ತು ಬಿಹಾರದ … Continued

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್, ಅಶ್ರುವಾಯು; ಮಾಜಿ ಪರೀಕ್ಷಾ ಮುಖ್ಯಸ್ಥ ಬಂಧನ

ರಾಂಚಿ: ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ವಿರುದ್ಧ ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಸೋಮವಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜಧಾನಿ ರಾಂಚಿಯಲ್ಲಿ ವಿಧಾನಸಭೆಯತ್ತ ಮೆರವಣಿಗೆ ನಡೆಸಿದ ಸಾವಿರಾರು ವಿದ್ಯಾರ್ಥಿಗಳು ಬ್ಯಾರಿಕೇಡ್‌ಗಳನ್ನು ದಾಟಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್ ನಡೆಸಿ, ಜಲಫಿರಂಗಿ ಹಾಗೂ ಅಶ್ರುವಾಯು ಪ್ರಯೋಗಿಸಿ ಪ್ರತಿಭಟನಾಕಾರರನ್ನು ಚದುರಿಸಿದರು. ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಳ್ಳುತ್ತಿರುವ … Continued

ನಕಲಿ ಹೆಸರಿನಲ್ಲಿ 25 ಮದುವೆ ; ತಮ್ಮ ಅಳಿಯನ ವಿರುದ್ಧವೇ ದೂರು ದಾಖಲಿಸಿದ ಬಿಜೆಪಿ ಶಾಸಕ : ಇಬ್ಬರ ಬಂಧನ

ಲಕ್ನೋ: ತಮ್ಮ ಪುತ್ರಿಯನ್ನು ವಿವಾಹವಾದ ವ್ಯಕ್ತಿ ಹಾಗೂ ಆತನ ಕುಟುಂಬ ತಮ್ಮನ್ನು ವಂಚಿಸಿದೆ ಎಂದು ಉತ್ತರ ಪ್ರದೇಶದ ಸೆವತಾ ಕ್ಷೇತ್ರದ ಬಿಜೆಪಿ ಶಾಸಕ ಜ್ಞಾನ ತಿವಾರಿ ಆರೋಪಿಸಿದ್ದಾರೆ. ನಕಲಿ ಹೆಸರು ಬಳಸಿಕೊಂಡು ವಿವಿಧ ರಾಜ್ಯಗಳ ಹಲವು ಮಹಿಳೆಯರನ್ನು ವಂಚಿಸಿರುವ ತಮ್ಮ ಮಗಳ ಗಂಡ ಪ್ರಖರ್ ತ್ರಿವೇದಿ, ಸುಮಾರು 25 ಮದುವೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ.  ಈ … Continued

ನಟಿಯ ಮೇಲೆ ಅತ್ಯಾಚಾರ ; 73 ವರ್ಷದ ಸಿನೆಮಾ ನಿರ್ದೇಶಕನ ಬಂಧನ

ಮುಂಬೈ: 33 ವರ್ಷದ ನಟಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಖ್ಯಾತ ಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕ ಶಕೀಲ್ ನೂರಾನಿ (73) ಅವರನ್ನು ಮುಂಬೈನ ಮಾಲ್ವಾಣಿ ಪೊಲೀಸರು ಆಗಸ್ಟ್ 8ರ ಮುಂಜಾನೆ ಬಂಧಿಸಿದ್ದಾರೆ. ‘ಬಡೆ ದಿಲ್ ವಾಲಾ’ (1999) ಹಾಗೂ ‘ಜೋರು ಕಾ ಗುಲಾಮ್’ (2000) ಸೇರಿದಂತೆ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿರುವ ನೂರಾನಿ ಅವರನ್ನು … Continued